ಉಡುಪಿ: ಮಣಿಪಾಲದ ಕ್ರೈಸ್ಟ್ ಸ್ಕೂಲ್ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಅಪಘಾತಕ್ಕೀಡಾದ ಘಟನೆ ಉಡುಪಿಯ ಕೊಡಂಗೆ ದೇವಸ್ಥಾನದ ಸಮೀಪ ಶುಕ್ರವಾರ ಸಂಭವಿಸಿದೆ.

ಅಪಘಾತದಲ್ಲಿ ಬಸ್‌ನಲ್ಲಿದ್ದ ಏಳು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರಲ್ಲಿ ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ಸ್ಥಳೀಯರು ಹಾಗೂ ಸಾರ್ವಜನಿಕರ ಸಹಾಯದಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆ ಬದಿಯ ಕಂದಕಕ್ಕೆ ಉರುಳಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

View this post on Instagram

A post shared by News Karnataka (@newskarnataka)