ಉಡುಪಿ: ಉಡುಪಿ ಜಯಲಕ್ಷ್ಮೀ ಸಿಲ್ಕ್ಸ್‌ ಮುಂಭಾಗದಲ್ಲಿ ರಾ.ಹೆ. (169ಎ)ರಲ್ಲಿ ಶನಿವಾರ ಸಂಜೆ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಎರಡು ಕಾರುಗಳು ಜಖಂಗೊಂಡಿವೆ.

ಬನ್ನಂಜೆ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಎರಡು ಕಾರುಗಳಿಗೆ ಡಿಕ್ಕಿ ಹೊಡಿದಿದೆ ಎನ್ನಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.

ಅಪಘಾತದ ಪರಿಣಾಮ ಕೆಲಕಾಲ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿ ಟ್ರಾಫಿಕ್‌ ಜಾಮ್‌ ಉಂಟಾಯಿತು. ಬಳಿಕ ಸಂಚಾರ ಪೊಲೀಸರು ವಾಹನಗಳ ಸಂಚಾರವನ್ನು ಸುಗಮಗೊಳಿಸಿದರು.

View this post on Instagram

A post shared by News Karnataka (@newskarnataka)