ಉಡುಪಿ: ಇನ್ನೋವಾ ಕಾರು, ಆಟೋ ರಿಕ್ಷಾ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸರಣಿ ಅಪಘಾತ ನಡೆದ ಘಟನೆ ಬುಧವಾರ ಬೆಳಿಗ್ಗೆ ಹಿರಿಯಡಕದಲ್ಲಿ ಸಂಭವಿಸಿದೆ.

ಅಪಘಾತದಲ್ಲಿ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಇನ್ನೋವಾ ಕಾರು, ಆಟೋ ಹಾಗೂ ಬೈಕ್ ಗೆ ಹಾನಿಯಾಗಿದೆ. ಸವಾರರಿಬ್ಬರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.