ಉಡುಪಿ: ಯಕ್ಷಗಾನ ಟ್ರಸ್ಟ್ ಉಡುಪಿ ಇದರ ವತಿಯಿಂದ ಕಿಶೋರ ಯಕ್ಷ ಸಂಭ್ರಮದ ಅಂಗವಾಗಿ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಕಡಿಯಾಳಿ ಕಮಲಾಬಾಯಿ ಪ್ರೌಢಶಾಲೆ ವಿದ್ಯಾರ್ಥಿಗಳು “ಶ್ವೇತ ಕುಮಾರ” ಎಂಬ ಯಕ್ಷಗಾನವನ್ನು ಪ್ರಸ್ತುತಪಡಿಸಿದರು.

ಯಕ್ಷಗಾನ ಟ್ರಸ್ಟ್ ಮೂಲಕ ಜಿಲ್ಲೆಯ ಸರಕಾರಿ ಹಾಗೂ  ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಸಲಾಗುತ್ತದೆ. ವಿದ್ಯಾರ್ಥಿಗಳು ತಾವು ಕಲಿತ ಯಕ್ಷಗಾನ ಕಲೆಯನ್ನು ಪ್ರದರ್ಶನ ಮಾಡಲು ಕಿಶೋರ ಯಕ್ಷ ಸಂಭ್ರಮ ಕಾರ್ಯಕ್ರಮವನ್ನು ಪ್ರತಿ ವರ್ಷ ಆಯೋಜಿಸಲಾಗುತ್ತದೆ‌. ಈ ಕಾರ್ಯಕ್ರಮದಲ್ಲಿ ಆಯಾ ಶಾಲಾ ವಿದ್ಯಾರ್ಥಿಗಳು ತಮ್ಮ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸುತ್ತಾರೆ.