ಉಡುಪಿ: ಜಮ್ಮುವಿನಲ್ಲಿ ಹುತಾತ್ಮನಾದ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಬಿಜಾಡಿಯ ಯೋಧ ಅನೂಪ್ ಪೂಜಾರಿ ಅವರ ಮನೆಗೆ ಅನೇಕ ಗಣ್ಯರು ಭೇಟಿ ನೀಡುತ್ತಿದ್ದಾರೆ.

ಇದೀಗ ವಿಧಾನಸಭೆಯ ಸ್ವೀಕರ್ ಯು.ಟಿ. ಖಾದರ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಖಾದರ್, ಯೋಧ ಅನೂಪ್ ಪೂಜಾರಿ ಪತ್ನಿಯವರಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಸ್ಥಳೀಯರು ಹಾಗೂ ಕುಟುಂಬದವರು ಮನವಿ ಮಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಈ ಮಾತನಾಡುವುದಾಗಿ ತಿಳಿಸಿದ್ದಾರೆ.

ದೇಶ ಕಾಯುವ ನಮ್ಮೂರ ಯುವಕನ ಅಕಾಲಿಕ ನಿಧನ ರಾಜ್ಯದ ಜನರಿಗೆ ತೀವೃವಾದ ನೋವನ್ನುಂಟು ಮಾಡಿದೆ. ಮಂಗಳವಾರದ ದುರಂತದಲ್ಲಿ ಮೃತರಾದ ರಾಜ್ಯದ ಎಲ್ಲಾ ಸೈನಿಕರ ಕುಟುಂಬದವರಿಗೂ ರಾಜ್ಯ ಸರ್ಕಾರದಿಂದ ದೊರಕುವ ಎಲ್ಲ ಸವಲತ್ತುಗಳನ್ನು ನೀಡುವ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ತಿಳಿಸಿದ್ದು, ಇದನ್ನು ಶೀಘ್ರವಾಗಿ ಅನೂಪ್ ಕುಟುಂಬದವರಿಗೂ ಒದಗಿಸಲು ಪ್ರಯತ್ನಿಸುತ್ತೇವೆ ಎಂದರು.