ಉಡುಪಿ: ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಪಾದಚಾರಿ ಮೇಲೆ ಲಾರಿ ಮಗುಚಿ ಬಿದ್ದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ನಡೆದಿದೆ.
ಎದುರಿನಿಂದ ಬಂದ ಸೆಲ್ಟೋಸ್ ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಪಲ್ಟಿಯಾಗಿದೆ. ಈ ವೇಳೆ ಹಿಂಬದಿಯಲ್ಲಿ ಬರುತ್ತಿದ್ದ ಆಲ್ಟೋ ಕಾರು ಜಖಂಗೊಂಡಿದೆ. ನಿಟ್ಟೆ ಗ್ರಾಮ ಪಂಚಾಯತ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿಸಿದೆ.
ದಾವಣಗೆರೆಯಿಂದ ಮಂಗಳೂರಿಗೆ ಮೊಟ್ಟೆ ತುಂಬಿದ ಲಾರಿ ಸಾಗತ್ತಿತ್ತು. ಬೆಳ್ಳಣ್ ಕಡೆಯಿಂದ ಕಾರ್ಕಳದ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಮೇಲೆಯೇ ಲಾರಿ ಪಲ್ಟಿಯಾಗಿದೆ.
ಪಾದಚಾರಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಅಪಘಾತದಲ್ಲಿ ಲಾರಿ ಮತ್ತು 2 ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದ ದೃಶ್ಯ ಸಿಸಿಟಿವಿಯಲಿ ಸೆರೆಯಾಗಿದೆ. ಕಾರ್ಕಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

