ಉಡುಪಿ: ದೇಶದ ಆರ್ಥಿಕ ವ್ಯವಸ್ಥೆ ಸದೃಢವಾಗಿದ್ದು, ಯಾವುದೇ ರೀತಿಯ ಸಂಕಷ್ಟ ಅಥವಾ ಅಪಾಯದಲ್ಲಿ ಇಲ್ಲ. ಆದರೆ ವಿರೋಧ ಪಕ್ಷಗಳು ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿವೆ. ಬಿಜೆಪಿ ಕಾರ್ಯಕರ್ತರು ಸರ್ಕಾರದ ಸಾಧನೆಗಳು ಹಾಗೂ ಅಧಿಕೃತ ದಾಖಲೆಗಳನ್ನು ಜನರ ಮುಂದಿಡುವ ಮೂಲಕ ವಾಸ್ತವಾಂಶಗಳನ್ನು ತಲುಪಿಸುವ ಕೆಲಸ ಮಾಡಬೇಕು ಎಂದು ಕೇಂದ್ರ ಹಣಕಾಸು ಸಚಿವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ‘ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಆರ್ಥಿಕ ಬೆಳವಣಿಗೆ, ಅಭಿವೃದ್ಧಿ ಯೋಜನೆಗಳು ಹಾಗೂ ಕೇಂದ್ರ ಸರ್ಕಾರದ ವಿವಿಧ ಜನಪರ ಕಾರ್ಯಕ್ರಮಗಳ ಕುರಿತು ಕಾರ್ಯಕರ್ತರು ಜನರಿಗೆ ಮಾಹಿತಿ ನೀಡಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಮಾಹಿತಿಗಳಿಗೆ ವಾಸ್ತವಾಂಶಗಳ ಮೂಲಕ ಉತ್ತರ ನೀಡುವ ಅಗತ್ಯವಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ವಹಿಸಿದ್ದರು. ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುನಿಲ್ ಕುಮಾರ್, ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಮುಖಂಡರಾದ ಉದಯಕುಮಾರ್ ಶೆಟ್ಟಿ, ಶ್ರೀಕಾಂತ್ ಶೆಟ್ಟಿ, ಶಿಲ್ಪಾ ಜಿ. ಸುವರ್ಣ ಮೊದಲಾದವರು ಇದ್ದರು.