ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ ಸಂಗ್ರಹ ಕೇಂದ್ರದ ಆದೇಶವನ್ನು ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಹಿಂಪಡೆದಿದ್ದು ಸದ್ಯಕ್ಕೆ ಈ ಟೋಲ್ ಕೇಂದ್ರ ಸ್ಥಗಿತಗೊಳಿಸಲು ತೀರ್ಮಾನಿಸಿದೆ.

ಟೋಲ್ ಕೇಂದ್ರಕ್ಕೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾದ ಕಾರಣ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಂದ ಈ ಅಧಿಕೃತ ಆದೇಶ ಹೊರ ಬಿದ್ದಿದೆ.

Toll

ದದದ 1

ಇನ್ನು ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ಅನ್ನು ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಇಂದು ಭೇಟಿಯಾಗಿ, ಮನವಿ ಸಲ್ಲಿಸಿತ್ತು.

Whatsapp Image 2024 08 22 At 8.56.33 Pm
ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ಅನ್ನು ರದ್ದುಪಡಿಸಲಾಗುವುದು ಎಂದು ಭರವಸೆ ನೀಡಿದರು.
ನಿಯೋಗದಲ್ಲಿ ಉಡುಪಿ ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಮುನಿಯಾಲು ಉದಯಕುಮಾರ್ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಸಂತೋಪ್ ಕುಲಾಲ್ ಪಕ್ಕಾಲು, ಯತೀಶ್ ಕರ್ಕೇರ, ದೀಪಕ್ ಕೋಟ್ಯಾನ್ ಮೊದಲಾದವರು ಇದ್ದರು.