ಉಡುಪಿ: ಜೀವನದಲ್ಲಿ ಜಿಗುಪ್ಸೆಗೊಂಡ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮನೆಯ ಉಪ್ಪರಿಗೆ ಮಹಡಿಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ.
ಪೆರ್ಡೂರು ಗ್ರಾಮದ ಶೋಭಾ ಎಂಬವರ ಮಗಳು ನಯನ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಪೆರ್ಡೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದಳು.
ಜುಲೈ 22 ರಂದು ಬೆಳಿಗ್ಗೆ ಯಾವುದೋ ತನ್ನ ವೈಯುಕ್ತಿಕ ಕಾರಣದಿಂದ ಅಥವಾ ಇನ್ನಾವುದೋ ಕಾರಣದಿಂದ ಮಾನಸಿಕವಾಗಿ ನೊಂದು ಚೂಡಿದಾರ ಶಾಲಿನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

