ಉಡುಪಿ: ಟಿಪ್ಪರ್ ಲಾರಿಯೊಂದು ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಬೀಜಾಡಿ ಡಿವೈಡರ್ ಬಳಿ ನಡೆದಿದೆ.

ಮೃತರನ್ನು ವಡ್ಡರ್ಸೆ ನೀರುಕೊಡ್ಲು ನಿವಾಸಿ ದಿ. ಮಂಜುನಾಥ್ ಆಚಾರಿ ಅವರ ಪತ್ನಿ ಶಾರದಾ (55) ಎಂದು ಗುರುತಿಸಲಾಗಿದೆ. ಶಾರದಾ ಅವರು ಕೋಟೇಶ್ವರ ಅಂಕದ ಕಟ್ಟೆಯಲ್ಲಿರುವ ತಮ್ಮ ತಂಗಿಯ ಮನೆಗೆ ತೆರಳುತ್ತಿದ್ದರೆಂದು ತಿಳಿದುಬಂದಿದೆ.

ಈ ವೇಳೆ ಸ್ಕೂಟಿಯನ್ನು ಅವರ ಮಗ ಚಾಲನೆ ಮಾಡುತ್ತಿದ್ದು, ಅಪಘಾತದ ತೀವ್ರತೆಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿ ಓಡಿಸುತ್ತಿದ್ದ ಮಗ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಸುದ್ದಿತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

View this post on Instagram

A post shared by News Karnataka (@newskarnataka)