ಉಡುಪಿ: ಕಾಪು ಕ್ಷೇತ್ರದ 80 ಬಡಗಬೆಟ್ಟು ಗ್ರಾಮದಲ್ಲಿ ಇತ್ತೀಚೆಗೆ ಉಡುಪಿ ಕಂಬಳದ ಶಂಕುಸ್ಥಾಪನೆ ನಡೆದಿತ್ತು. ಅದೇ ದಿನ ಜಿಲ್ಲಾಡಳಿತ ಆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿತ್ತು.ಇದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಕಾಪು ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ನಡುವೆ ತೀವ್ರ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗುತ್ತದೆ.
ಇಂದು ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆಯವರ ದುರುದ್ದೇಶ ಪೂರಿತ ರಾಜಕೀಯ ಸುಳ್ಳು ಆರೋಪಗಳ ವಿರುದ್ಧ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಹಾಗೂ ಕಟಪಾಡಿ ಪೇಟೆಬೆಟ್ಟು ಬಬ್ಬುಸ್ವಾಮಿ ಮತ್ತು ಕೊರಗಜ್ಜ ಸನ್ನಿಧಿಗೆ ಭೇಟಿ ನೀಡಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.ಇದರೊಂದಿಗೆ “ಕಂಬಳ ರಾಜಕೀಯ ” ದೈವಸ್ಥಾನದ ಅಂಗಳ ತಲುಪಿದಂತಾಗಿದೆ.

