ಉಡುಪಿ: ಕಾರ್ಕಳ ಹಿಂದೂ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಪ್ರಮುಖ ಅರೋಪಿ ಅಲ್ತಾಫ್ ಪೊಲೀಸರ ವಿಚಾರಣೆಯಲ್ಲಿ ಹಲವು ಸತ್ಯ ಬಾಯಿಬಿಟ್ಟಿದ್ದಾನೆ.
ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಸಂತ್ರಸ್ಥ ಯುವತಿಯನ್ನು ಕಾರಿನಲ್ಲಿ ಕೂರಿಸಿಕೊಂಡೆ. ಬಳಿಕ ಕಾರಿನಲ್ಲಿ ಕಾರ್ಕಳದ ಕೆಲವು ಸ್ಥಳಗಳಲ್ಲಿ ಸುತ್ತಾಡಿದೆ. ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ರಂಗನಪಲ್ಕೆ ನಿರ್ಜನ ಪ್ರದೇಶಕ್ಕೆ ಯುವತಿಯನ್ನು ಕರೆದುಕೊಂಡು ಹೋದೆ. ಅಲ್ಲಿ ಸ್ನೇಹಿತರಿಗೆ ಕರೆ ಮಾಡಿ ಮದ್ಯ ತರಲು ಹೇಳಿದೆ. ಸ್ನೇಹಿತರು ಮದ್ಯ ತಂದ ಬಳಿಕ, ಅದರಲ್ಲಿ ಮಾದಕ ದ್ರವ್ಯ ಮಿಶ್ರಣ ಮಾಡಿ ಯುವತಿಗೆ ಕುಡಿಸಿ ಅತ್ಯಾಚಾರ ಎಸಗಿರುವುದಾಗಿ ಪೊಲೀಸರ ಮುಂದೆ ಆರೋಪಿ ಅಲ್ತಾಫ್ ಹೇಳಿದ್ದಾನೆ.
ಆರೋಪಿಗಳು ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರವೆಸಗಿದ್ದಾರೆ. ಈ ಅತ್ಯಾಚಾರ ಪ್ರಕರಣದಲ್ಲಿ ಇನ್ನೂ ನಾಲ್ಕೈದು ಜನ ಇದ್ದಾರೆ. ಎಲ್ಲ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕು. ಡ್ರಗ್ಸ್ ಪತ್ತೆ ಹಚ್ಚುವ ಕೆಲಸವನ್ನೂ ಪೊಲೀಸರು ಮಾಡಬೇಕು. ಯುವತಿಯನ್ನು ಲವ್ ಜಿಹಾದ್ ಮಾಡಿ ಅತ್ಯಾಚಾರವೆಸಗಿದ್ದಾರೆ ಎಂದು ಬಜರಂಗದಳ ಮುಖಂಡ ಕೆ.ಆರ್.ಸುನೀಲ್ ಹೇಳಿದರು.
ಸದ್ಯ ಯುವತಿಯ ಆರೋಗ್ಯ ಸ್ಥಿತಿ ಉತ್ತಮವಾಗಿತ್ತಿದೆ, ಯುವತಿಯಿಂದ ಇನ್ನಷ್ಟು ಮಾಹಿತಿ ಕಲೆ ಹಾಕಬೇಕಾಗಿದೆ. ಆರೋಪಿ ಅಲ್ತಾಫ್ ಕೃತ್ಯ ಬಳಸಿ ಕಾರು ಮತ್ತು ಬಿಯರ್ ತಂದು ಕೊಟ್ಟ ವಾಹನ ವಶಕ್ಕೆ ಪಡೆಯಲಾಗಿದೆ.ಡ್ರಗ್ ಮಾಫಿಯಾ ವಿರುದ್ಧ ಪೊಲೀಸ್ ರ ಕಾರ್ಯಚರಣೆ ಮುಂದುವರಿಯಲಿದೆ. ಗ್ಯಾಂಗ್ ರೇಪ್ ಬಗ್ಗೆ ಇದುವರೆಗೆ ಸಂತ್ರಸ್ತೆ ಯಾವುದೇ ಹೇಳಿಕೆ ನೀಡಿಲ್ಲ. ತನಿಖೆ ಪ್ರಗತಿಯಲ್ಲಿ ಇನ್ನಷ್ಟು ವಿಚಾರಣೆಯ ಬಳಿಕ ಮಾಹಿತಿ ನೀಡಲಾಗುವುದು ಎಂದುಕಾರ್ಕಳದಲ್ಲಿ ಐಜಿ ಅಮಿತ್ ಸಿಂಗ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

