ಉಡುಪಿ: ಉಡುಪಿ ತಾಲೂಕಿನ ಉದ್ಯಾವರ ಕಿಯಾ ಶೋರೂಮ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಮುಂಜಾನೆ ನಡೆದ ಕಾರು ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಂಗಳೂರಿನಿಂದ ಹರಿಯಾಣಕ್ಕೆ ತೆರಳುತ್ತಿದ್ದ ಎಕ್ಸ್ ಯುವಿ ಕಾರು, ಡಿವೈಡರ್ ಮೇಲೇರಿ ಕ್ರಾಶ್ ಗಾರ್ಡ್ ಡಿಕ್ಕಿ ಹೊಡೆದು ನಿಂತಿದೆ. ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

