ಉಡುಪಿ: 11ನೆಯ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕುತ್ಪಾಡಿ ಎಸ್ ಡಿಎಂ ಆಯುರ್ವೇದ ಕಾಲೇಜಿನ ಸ್ವಸ್ಥವೃತ್ತ ಮತ್ತು ಯೋಗ ವಿಭಾಗವು ಮೋರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ಸಹಯೋಗದಲ್ಲಿ “ಯೋಗ ಸಂಗಮ’ ಎಂಬ ವಿಶಿಷ್ಟ ಯೋಗ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಮಮತಾ ಕೆವಿ ಹೇಳಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 6ರಿಂದ 8ಗಂಟೆಯ ವರೆಗೆ ಕಾಲೇಜಿನ ನಾಲ್ಕನೆಯ ಮಹಡಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸುಮಾರು 500 ಕ್ಕಿಂತ ಹೆಚ್ಚು ವಿವದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು.