Showing 20 of 3348 posts • Page 10 of 168
ಮನೆಯ ಶೆಡ್ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾ ಏಕಾಏಕಿ ಹೊತ್ತಿ ಉರಿದು, ಪಕ್ಕದಲ್ಲಿದ್ದ ಕಾರು ಹಾಗೂ ಸ್ಕೂಟರ್ಗೂ ಬೆಂಕಿ ವ್ಯಾಪಿಸಿದ ಘಟನೆ ಭಾನುವಾರ ಬೆಳಿಗ್ಗೆ ಪೆರಂಪಳ್ಳಿ ಸಮೀಪ ನಡೆದಿದೆ.
ಶ್ರೀಕೃಷ್ಣನ ಸನ್ನಿಧಿಯಲ್ಲಿ ಸತತ 25 ಗಂಟೆಗಳ ಕಾಲ ದಾಸರ ಕೀರ್ತನೆಗಳನ್ನು ನಿರಂತರವಾಗಿ ಹಾಡಿದ ಸಂಗೀತ ವಿದುಷಿ ಸಂಗೀತ ಬಾಲಚಂದ್ರ ಅವರು ವಿಶ್ವದಾಖಲೆ ನಿರ್ಮಿಸಿದ್ದಾರೆ.
ಬ್ರಹ್ಮಾವರದ ಗಾಂಧಿನಗರದಲ್ಲಿ ಪುತ್ರನೊಬ್ಬ ಹೆತ್ತವರನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಕಾಪು ತಾಲೂಕು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಅವರನ್ನು ಪಿಸ್ತೂಲ್ನಿಂದ ಗುಂಡು ಹಾರಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ನಟೋರಿಯಸ್ ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ (35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠದ ಬಳಿಯ ಗೀತಾಮಂದಿರದ ಶ್ರೀ ಪುತ್ತಿಗೆ ನೃಸಿಂಹ ಸಭಾಭವನದಲ್ಲಿ ವಿದುಷಿ ಸಂಗೀತ ಬಾಲಚಂದ್ರ ಅವರು 25 ಗಂಟೆಗಳ ನಿರಂತರ ದಾಸವಾಣಿ ಗಾಯನದ ಮೂಲಕ ವಿಶ್ವದಾಖಲೆ ನಿರ್ಮಿಸುವ ಸಂಕಲ್ಪದೊಂದಿಗೆ ಸಂಗೀತ ಸೇವೆ ಆರಂಭಿಸಿದರು.
ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠದ ವತಿಯಿಂದ ನಡೆಯಲಿರುವ ವಿಟ್ಲಪಿಂಡಿ ಉತ್ಸವದ ಅಂಗವಾಗಿ ಕೃಷ್ಣಮಠದ ಕನಕ ಗೋಪುರದ ಬಳಿ ಮೊಸರುಕುಡಿಕೆ ಕಂಬದ ಮುಹೂರ್ತ ಭಾನುವಾರ ನೆರವೇರಿತು.
ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮುಲ್ಕಿ ಬಳಿ ದಾಳಿಂಬೆ ಹಣ್ಣು ಸಾಗಿಸುತ್ತಿದ್ದ ವಾಹನ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿರುವ ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಹೇಂದ್ರ ಕುಮಾರ್ ಶೆಟ್ಟಿ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸುವಂತೆ ಆಗ್ರಹಿಸಿ ಸಂಘದ ನಿಯೋಗ ಶುಕ್ರವಾರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಮನ
ಕಾಪು ತಾಲೂಕಿನ ಉದ್ಯಾವರ ಗ್ರಾಮದ ಜಾರುಕುದ್ರು ಪ್ರದೇಶದಲ್ಲಿ ಪಾಪನಾಶಿನಿ ನದಿಯ ತೀರದಲ್ಲಿ ಭೂ ಸವಕಳಿ ತೀವ್ರಗೊಂಡಿದ್ದು, ಈಗಾಗಲೇ ಎರಡು ಎಕರೆಗೂ ಅಧಿಕ ಭೂಮಿ ನದಿ ಪಾಲಾಗಿದೆ. ಮಳೆಗಾಲದಲ್ಲಿ ಸವಕಳಿ ಮತ್ತಷ್ಟು ಹೆಚ್ಚುವ ಆತಂಕ ಗ್ರಾಮಸ್ಥರಲ್ಲಿ ಮೂಡಿದೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ.
ಚಾಲಕನ ನಿಯಂತ್ರಣ ತಪ್ಪಿದ ಸಿಮೆಂಟ್ ಮಿಕ್ಸರ್ ಲಾರಿಯೊಂದು ಎರಡು ಲಾರಿಗಳಿಗೆ ಡಿಕ್ಕಿ ಹೊಡೆದ ಘಟನೆ ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.
ಗುಂಡಿಬೈಲಿನ ಪೆಟ್ರೋಲ್ ಬಂಕ್ ಸಮೀಪ ಅಂಬಾಗಿಲು–ಕಲ್ಸಂಕ ಸಂಪರ್ಕ ಮುಖ್ಯ ರಸ್ತೆಯ ಮಧ್ಯಭಾಗದಲ್ಲಿ ಏಕಾಏಕಿ ಬೃಹತ್ ಕಂದಕವೊಂದು ಬಾಯ್ತೆರೆದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಕಾಪು ತಾಲ್ಲೂಕಿನ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರ್ಎಸ್ಎಸ್ ಕಟ್ಟಾಳು ಕೇಶವರಾಯ ಪ್ರಭು ನಿಧನ: ಶೋಭಾ ಕರಂದ್ಲಾಜೆ ಸಂತಾಪ
ಅಲೆವೂರು ಗ್ರಾಮದ ಕೆಸ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಗಿ ಪರಿಸರದಲ್ಲಿರುವ ಬಾಳೆಹಣ್ಣು ರಖಂ ವ್ಯಾಪಾರಸ್ಥರು ಮತ್ತು ದಾಸ್ತಾನುದಾರರ 3–4 ಗೋದಾಮುಗಳ ಮೇಲೆ ಗುರುವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಬಾಳೆಹಣ್ಣು ಹಣ್ಣಾಗಿಸಲು ಬಳಸುತ್ತಿದ್ದ ಹಾನಿಕಾರಕ ರಾಸಾಯನಿಕಗಳು ಹಾಗೂ ಕೃತಕ ಬಣ್ಣ ನೀಡುವ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ.
ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಬ್ರಹ್ಮಾವರ ಸಮೀಪ ಗುರುವಾರ ಏಕಾಏಕಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಕೃತಕ ಬುದ್ಧಿಮತ್ತೆ (ಎಐ) ಈ ಯುಗದ ದೊಡ್ಡ ಜ್ಞಾನಿಯಾಗಿದ್ದು, ಅದು ನಮಗೆ ವಿನಮ್ರತೆಯನ್ನು ಕಲಿಸಿಕೊಡುತ್ತದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಂತೆ ಕರ್ನಾಟಕ ಹೈಕೋರ್ಟ್ನ ಸಂಚಾರಿ ಪೀಠವನ್ನು ಕರಾವಳಿ ಭಾಗದಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ ಸಂಘಟಿತ ಹೋರಾಟ ರೂಪಿಸುವ ನಿಟ್ಟಿನಲ್ಲಿ ಯು-ಆ್ಯಕ್ಟ್ ಹಾಗೂ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ವತಿಯಿಂದ ಆಗಸ್ಟ್ 22ರಂದು ಉಡುಪಿಯಲ್ಲಿ ಸಭೆ ನಡೆಯಲಿದೆ.
ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ–ಕೇರಳ ವತಿಯಿಂದ 19ನೇ ವರ್ಷದ ‘ಭೂಮಿ ಹಬ್ಬ ಹಾಗೂ ಅಭಿವೃದ್ಧಿ ವಿಚಾರ ಸಂಕಿರಣ’ವು ಶಿರ್ವದ ಪೆರ್ನಾಲ್ನ ಆದಿವಾಸಿ ಶಿಕ್ಷಣ ಕೇಂದ್ರದಲ್ಲಿ ನಡೆಯಿತು.
ಉದ್ಯಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಪಿಗೆನಗರ ಮುಖ್ಯ ರಸ್ತೆಯ ಬದಿಯ ಚರಂಡಿಗೆ ಅಳವಡಿಸಿದ್ದ ಸ್ಲ್ಯಾಬ್ಗಳನ್ನು ತೆರವುಗೊಳಿಸಿರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.