Showing 20 of 3348 posts • Page 11 of 168
ಸಂಗೀತ ಕ್ಷೇತ್ರದಲ್ಲಿ 25 ವರ್ಷಗಳ ಸುದೀರ್ಘ ಪಯಣ ಪೂರ್ಣಗೊಳಿಸಿರುವ ಆಕಾಶವಾಣಿಯ ಉನ್ನತ ಶ್ರೇಣಿಯ ಕಲಾವಿದೆ ಹಾಗೂ ಚಲನಚಿತ್ರ ಹಿನ್ನೆಲೆ ಗಾಯಕಿ ಸಂಗೀತ ಬಾಲಚಂದ್ರ ಅವರು ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ ಸಾಧನೆಗಾಗಿ 25 ಗಂಟೆಗಳ ಕಾಲ ನಿರಂತರವಾಗಿ ದಾಸರಪದಗಳನ್ನು ಹಾಡುವ ಐತಿಹಾಸಿಕ ಪ್ರಯತ್ನಕ್ಕೆ ಮುಂದಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ವ್ಯಾಪ್ತಿಯ ಸ್ಥಳೀಯರಿಗೆ ಸಾಸ್ತಾನ ಮತ್ತು ಶಿರೂರು ಟೋಲ್ ಕೇಂದ್ರಗಳ ಮಾದರಿಯಲ್ಲಿ ಸುಂಕ ವಿನಾಯಿತಿ ಅಥವಾ ಮಾಸಿಕ ಪಾಸ್ ಸೌಲಭ್ಯ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಗೆ ಶಿಫಾರಸು ಪತ್ರ ಬರೆಯಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.
ಜಾಗದ ಗಡಿ ವಿವಾದಕ್ಕೆ ಸಂಬಂಧಿಸಿ ಎರಡು ಕುಟುಂಬಗಳ ನಡುವೆ ನಡೆದ ಮಾತಿನ ಚಕಮಕಿ ಹಲ್ಲೆ ಹಾಗೂ ಬೆದರಿಕೆ ಆರೋಪಕ್ಕೆ ತಿರುಗಿದ ಘಟನೆ ಆಲೂರು ಗ್ರಾಮದಲ್ಲಿ ನಡೆದಿದೆ.
ಕೇವಲ ಸಭೆ, ಹೋರಾಟಗಳಿಂದ ಕಸ್ತೂರಿ ರಂಗನ್ ವರದಿ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ.
ನಾಗರಪಂಚಮಿ ಹಬ್ಬದ ಆಸುಪಾಸಿನಲ್ಲಿ ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು, ಆಗಸ್ಟ್ ತಿಂಗಳಲ್ಲಿ ಕೊಂಚ ನೆಮ್ಮದಿ ತಂದಿದೆ. ಜಿಲ್ಲೆಯ ಹಲವೆಡೆ ಮಳೆಯ ಪರಿಣಾಮ ಸಣ್ಣಪುಟ್ಟ ಹಾನಿ ಸಂಭವಿಸಿದೆ.
ಉಡುಪಿ: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ (ಎಳ್ಳಾರೆ) ಅವರು ನಿನ್ನೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಮೀನುಗಾರಿಕೆ ವೇಳೆ ಮೀನುಗಾರರೊಬ್ಬ ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ. ಮೃತರನ್ನು ಭದ್ರಾವತಿ ಬೆಳ್ಳಿಗೇರಿ ಗ್ರಾಮದ ಸುನಿತಮ್ಮ ಎಂಬವರ ಮಗ ಸಂಜೀವ(33) ಎಂದು ಗುರುತಿಸಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಎಕ್ಸ್ಪ್ರೆಸ್ ಬಸ್ವೊಂದು ಡಿವೈಡರ್ ಮೇಲೇರಿ ನಿಂತ ಘಟನೆ ಸೋಮವಾರ ಬೆಳಿಗ್ಗೆ ಕಟಪಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮಾನಸಿಕ ಅಸ್ವಸ್ಥತೆಗೊಳಗಾಗಿದ್ದ ವ್ಯಕ್ತಿಯೊಬ್ಬರು ನಡು ಮಧ್ಯಾಹ್ನ ಅರಬ್ಬಿ ಸಮುದ್ರಕ್ಕಿಳಿದು ಸತತ 3 ಗಂಟೆಗಳ ಕಾಲ ಈಜಾಡುತ್ತಿದ್ದಾಗ, ಸಮಾಜ ಸೇವಕ ಈಶ್ವರ್ ಮಲ್ಪೆ ಅವರು ಸಮುದ್ರಕ್ಕಿಳಿದು ಮನವೊಲಿಸಿ ಸುರಕ್ಷಿತವಾಗಿ ದಡಕ್ಕೆ ಕರೆತಂದಿರುವ ಘಟನೆ ಭಾನುವಾರ ನಡೆದಿದೆ.
ಉಡುಪಿ ಜಿಲ್ಲೆಯಾದ್ಯಂತ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಕರಾವಳಿಯ ಪ್ರಕೃತಿ ಆರಾಧನೆಯ ಪ್ರತೀಕವಾಗಿರುವ ನಾಗದೇವರ ಕಲ್ಪನೆಯೊಂದಿಗೆ, ‘Save Nature’ ಸಂದೇಶ ಸಾರುವ ‘ನಾಗಬನ’ ಎಂಬ ವಿಶೇಷ ಮರಳು ಶಿಲ್ಪ ಕೋಟೇಶ್ವರದ ಹಳೆ ಅಳಿವೆ ಕಡಲ ಕಿನಾರೆಯಲ್ಲಿ ಪ್ರವಾಸಿಗರು ಹಾಗೂ ಸಾರ್ವಜನಿಕರ ಗಮನ ಸೆಳೆಯುತ್ತಿದೆ.
ಯುವಕರಿಗೆ ಕೆಟ್ಟ ಪದಗಳನ್ನು ಕಲಿಸಿರುವುದೇ ಬಿಜೆಪಿಯ ಐಟಿ ಸೆಲ್. ಸತ್ಯ ಹೇಳುವವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಬಿಜೆಪಿ ಸಿದ್ಧಾಂತದ ವಿರುದ್ಧ ಮಾತನಾಡುವವರ ತೇಜೋವಧೆ ಮಾಡುವುದು ಬಿಜೆಪಿ ಐಟಿ ಸೆಲ್ ನ ಕೆಲಸ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಸಚಿವ ರಿಜ್ವಾನ್ ಅರ್ಷದ್ ಆರೋಪಿಸಿದರು.
ಚಿವ ಜಮೀರ್ ಅಹ್ಮದ್ ಖಾನ್ ಅವರು ಧ್ವಜಾರೋಹಣದ ಜವಾಬ್ದಾರಿ ನಿರಾಕರಿಸಿದ್ದಾರೆ ಎಂಬ ಬಿಜೆಪಿ ಟೀಕೆಗೆ ಆಹಾರ ಸಚಿವ ರಿಜ್ವಾನ್ ಅರ್ಷದ್ ತಿರುಗೇಟು ನೀಡಿದ್ದು, ಈ ವಿಚಾರದಲ್ಲಿ ಬಿಜೆಪಿಗೆ ಟೀಕಿಸುವ ನೈತಿಕತೆ ಇಲ್ಲ ಎಂದು ಹೇಳಿದ್ದಾರೆ.
ಬಿಪಿಎಲ್ ಪಡಿತರ ಚೀಟಿಗಳ ರದ್ದತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಸೂಕ್ತ ಪರಿಶೀಲನೆ ನಡೆಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.
ಉಡುಪಿ ಜಿಲ್ಲಾ ನಾಗರಿಕ ಸಮಿತಿ ಹಾಗೂ ಮಿತ್ರ ಸ್ಕೂಲ್ ಆಫ್ ನರ್ಸಿಂಗ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಝ್ವಾನ್ ಅರ್ಷದ್ ಧ್ವಜಾರೋಹಣ ನೆರವೇರಿಸಿದರು.
ಉತ್ತರಾಖಂಡದ ಹಲ್ದವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆಯನ್ನು ಗಂಗಾಜಲ ಸಿಂಪಡಿಸಿ, ಹೋಮ ನಡೆಸಿ ‘ಶುದ್ಧೀಕರಣ’ ಮಾಡಿರುವ ಘಟನೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ಬ್ರಹ್ಮಗಿರಿ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು.
ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬ ಆ. 15ರಂದು ಕನ್ನರ್ಪಾಡಿ ಶ್ರೀದೇವಿ ಸಭಾಭವನದಲ್ಲಿ ನಡೆಯಲಿದೆ ಎಂದು ಮಹಾಸಭಾ ತಾಲೂಕು ಅಧ್ಯಕ್ಷ ಶ್ರೀಕಾಂತ್ ಉಪಾಧ್ಯ ತಿಳಿಸಿದರು.
ಪಡುಬೆಳ್ಳೆಯ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆ ಪಡುಬೆಳ್ಳೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರಕ್ಷಕ–ಶಿಕ್ಷಕ ಸಂಘದ ಸಹಯೋಗದಲ್ಲಿ ‘ಆಟಿದ ಲೇಸ್’ ಕಾರ್ಯಕ್ರಮ ನಡೆಯಿತು
ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಚಟುವಟಿಕೆಗಳಲ್ಲಿ ಪದೇಪದೇ ತೊಡಗಿಸಿಕೊಂಡ ಆರೋಪದ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗಬೆಟ್ಟು ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ ಇಕ್ಬಾಲ್ ಅಲಿಯಾಸ್ ಇಕ್ಬಾಲ್ ಶೇಖ್ (34) ಎಂಬಾತನನ್ನು ಪಿಐಟಿ–ಎನ್ಡಿಪಿಎಸ್ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.