Showing 20 of 3353 posts • Page 112 of 168
ಮಣಿಪಾಲ ಕರಾವಳಿಯ ವಿದ್ಯಾಕೇಂದ್ರವಾಗಿ ಬಹಳ ಪ್ರಸಿದ್ದಿ ಪಡೆದ ನಗರ. ದೇಶವಿದೇಶಗಳ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಹಿರಿಯಡ್ಕ ಪುತ್ತಿಗೆ ವಿದ್ಯಾಪಿಠದ 40ನೇ ವಾರ್ಷಿಕೋತ್ಸವ ಮತ್ತು ಪುತ್ತಿಗೆ ಸುಗುಣ ಸ್ಕೂಲ್ನ ಪ್ರಥಮ ವಾರ್ಷಿಕೋತ್ಸವ ಎ.5ರಂದು ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ
ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು 20 ಸಾವಿರ ರೂ. ನಗದು ಹಾಗೂ ಚಾಕಲೇಟ್ಗಳನ್ನು ಕಳವು ಮಾಡಿದ ಘಟನೆ ತಡರಾತ್ರಿ ನಡೆದಿದೆ.
ಉಡುಪಿಯ ಕರಂಬಳ್ಳಿಯ ನಿವಾಸಿ ಮೊಹಮ್ಮದ್ ಅಕ್ರಮ್ ಇತ್ತೀಚೆಗೆ ಜಿನಾ ಎಂಬ ಯುವತಿಯನ್ನು ಅಪಹರಿಸಿದ್ದು, ಬೆದರಿಕೆಯೊಡ್ಡಿ ಬಲವಂತವಾಗಿ ಮದುವೆಯಾಗಲು ಯತ್ನಿಸಿದ್ದಾನೆ.
ಬ್ರಹ್ಮಾವರದಲ್ಲಿ ಪ್ಲೈಓವರ್ ಹಾಗೂ ಸರ್ವಿಸ್ ರಸ್ತೆ ನಿರ್ಮಿಸುವಂತೆ ಆಗ್ರಹಿಸಿ ಸಾರ್ವಜನಿಕರು ಬುಧವಾರ ಬೃಹತ್ ಧರಣಿ ನಡೆಸಿದರು.
ತುಳುನಾಡಿನಲ್ಲಿ ಭಿನ್ನ ಆರಾಧನೆಗೆ ಒಳಪಡುವುದು ಬೊಬ್ಬರ್ಯ ದೈವ. ಕರಾವಳಿಯ ಪ್ರಸಿದ್ದ ಬೊಬ್ಬರ್ಯ ಕ್ಷೇತ್ರಗಳಲ್ಲಿ ಉಡುಪಿಯ ತೆಂಕನಿಡಿಯೂರು ಗ್ರಾಮದ ಬೆಳ್ಕಳೆ (ಬೊಲ್ಯಾಲ) ಬೊಬ್ಬರ್ಯ ಕ್ಷೇತ್ರ.
ರೈಲ್ವೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ನಡುವಿನ ಹೊಂದಾಣಿಕೆ ಕೊರತೆಯಿಂದ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬವಾಗಿದೆ ಎಂದು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ದೂರಿದರು.
ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಉಡುಪಿ ನಗರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಏಪ್ರಿಲ್ ಫೂಲ್ ದಿನಾಚರಣೆ ವಿಶಿಷ್ಟವಾಗಿ ಆಚರಿಸಲಾಯಿತು.
ದೇಶದಲ್ಲಿ ಔರಂಗಜೇಬನ ರೀತಿಯಲ್ಲಿ ಆಡಳಿತ ನಡೆಸುವವರು ಯಾರಾದರೂ ಇದ್ದರೆ ಅದು ಸಿದ್ದರಾಮಯ್ಯನವರು ಮಾತ್ರ. ಔರಂಗಜೇಬನಿಗೂ ಸಿದ್ದರಾಮಯ್ಯನವರಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕನೋರ್ವ ಸ್ಥಳದಲ್ಲೆ ಮೃತಪಟ್ಟ ಘಟನೆ ಬ್ರಹ್ಮಾವರ ಮಹೇಶ್ ಆಸ್ಪತ್ರೆಯ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ66ರಲ್ಲಿ ಸಂಭವಿಸಿದೆ.
ಮನೆಗೆ ಬೀಗ ಹಾಕಿ ಯಕ್ಷಗಾನಕ್ಕೆ ತೆರಳಿದ್ದ ವೇಳೆ ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ನೂತನ ಕುಲಪತಿಯಾಗಿ ಸ್ಟೀಫನ್ ಡಿಸೋಜಾ ಅವರನ್ನು ನೇಮಕಗೊಳಿಸಿ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಆದೇಶ ಹೊರಡಿಸಿದ್ದಾರೆ.
ದುಬೈ ಮೂಲದ ಪ್ರೊಪರ್ಟಿ ಸರ್ವೀಸ್ ಕಂಪೆನಿಯಾದ “ಮೊಲ್ಟೊ ಕೇರ್” ಉಡುಪಿಗೆ ಕಾಲಿಟ್ಟಿದೆ. ಭಾರತದಲ್ಲೇ ಪ್ರಥಮವಾಗಿ ಉಡುಪಿಯಲ್ಲಿ ಎ.2ರಂದು ಕುಂಜಿಬೆಟ್ಟುವಿನಲ್ಲಿ ಕಾರ್ಯಾರಂಭಿಸಲಿದೆ.
ಉತ್ತಮ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಯಕತ್ವವನ್ನು ಸಮಾಜಕ್ಕೆ ನೀಡಿದಾಗ ಜನರು ಕೂಡ ಅಂತಹ ನಾಯಕನ್ನು ಒಪ್ಪಿಕೊಳ್ಳುತ್ತಾರೆ.
ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ಪರಿಶೀಲಿಸಿದರು. ಕಾಮಗಾರಿ ವಿಳಂಬದ ಕಾರಣಕ್ಕಾಗಿ ಸಾರ್ವಜನಿಕ ಆಕ್ಷೇಪಕ್ಕೆ ಕಾರಣವಾಗಿದೆ.
ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ,
ಕರ್ತವ್ಯ ಲೋಪದ ಆರೋಪದ ಮೇಲೆ ಕುಂದಾಪುರ ಉಪವಿಭಾಗಾಧಿಕಾರಿ ಕೆಎಎಸ್ ಕಿರಿಯ ಶ್ರೇಣಿ ಅಧಿಕಾರಿ ಕೆ. ಮಹೇಶ್ಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಹಿಂದೂಗಳ ಹೊಸ ವರ್ಷ, ಯುಗಾದಿ ಹಬ್ಬಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಜನರು ಅಗತ್ಯ ವಸ್ತುಗಳ ಖರೀದಿ ಮತ್ತಿತರ ಸಿದ್ಧತೆಗಳಲ್ಲಿ ತೊಡಗಿದ್ದಾರೆ. ಇದೇವೇಳೆ ಉಡುಪಿಯಲ್ಲಿರುವ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರಿನತ್ತ ಪ್ರಯಾಣ ಬೆಳೆಸಿದ್ದಾರೆ.