Showing 20 of 3348 posts • Page 12 of 168
ಕಟಪಾಡಿಯಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ನಲ್ಲಿ ವಿದ್ಯಾರ್ಥಿಗಳು ಅಪಾಯವನ್ನು ಲೆಕ್ಕಿಸದೆ ಫುಟ್ಬೋರ್ಡ್ನಲ್ಲಿ ನೇತಾಡಿಕೊಂಡು ಪ್ರಯಾಣಿಸಿದ ಘಟನೆ ಶುಕ್ರವಾರ ಕಂಡುಬಂದಿದೆ.
80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನ್ಯೂ ಫ್ರೆಂಡ್ಸ್ ಕಪ್ಪೆಟ್ಟು ತಂಡದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಕಲಾಕೃತಿ ಹಾಗೂ ಪುರಾತನ ಸಂಸತ್ ಭವನದ ಸುಂದರ ಮಾದರಿಯನ್ನು ಕಪ್ಪೆಟ್ಟುವಿನಲ್ಲಿ ನಿರ್ಮಿಸಲಾಗಿದೆ.
ಕಳೆದ ಮೂರು ತಿಂಗಳಿನಿಂದ ಆಶ್ರಯವಿಲ್ಲದೆ ಅಸಹಾಯಕ ಸ್ಥಿತಿಯಲ್ಲಿರುವ ಪಾರ್ಶ್ವವಾಯು ಪೀಡಿತ ಕೇರಳ ಮೂಲದ ವ್ಯಕ್ತಿಗೆ ಜಿಲ್ಲಾಡಳಿತ ಸೂಕ್ತ ಸ್ಪಂದನೆ ನೀಡಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ಆರೋಪಿಸಿದರು.
ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಮನೆ ತೆರಿಗೆ ವಸೂಲಾದ ಹಣವನ್ನು ಪಂಚಾಯಿತಿ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇರೆಗೆ ಪಂಚಾಯಿತಿ ಬಿಲ್ಲು ವಸೂಲಿಗ ಸಿಬ್ಬಂದಿ ಮಂಜುನಾಥ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಅಧಿಕ ಬಡ್ಡಿ ದರದಲ್ಲಿ ಸಾಲ ನೀಡಿ, ಕಂತಿನ ಹಣ ಬಾಕಿ ಉಳಿದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡಿದ ಆರೋಪದಡಿ ಸಾನಿಧ್ಯ ಫೈನಾನ್ಸ್ನ ಮೂವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಕರಾವಳಿಯ ಜನಜೀವನದಲ್ಲಿ ವಿಶೇಷ ಮಹತ್ವ ಪಡೆದಿರುವ ಆಟಿ ಅಮಾವಾಸ್ಯೆಯನ್ನು ಜಿಲ್ಲೆಯ ಇನ್ನಂಜೆ ಸಮೀಪದ ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ದೇವರು ಊಟ ಮಾಡಿದ ದಿನ’ ಎಂಬ ವಿಶಿಷ್ಟ ನಂಬಿಕೆಯೊಂದಿಗೆ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕಾರ್ಕಳ ತಾಲ್ಲೂಕಿನಲ್ಲಿ ಆಯೋಜಿಸಲಾಗಿದ್ದ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕಾರರಾಗಿ ಆಗಮಿಸಬೇಕಿದ್ದ ಸಾಮಾಜಿಕ ಸಂಘಟನೆಯ ಕಾರ್ಯಕರ್ತರಿಗೆ ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ ವಿಧಿಸಿರುವ ಜಿಲ್ಲಾಡಳಿತದ ಕ್ರಮವನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿದೆ.
ಭವಿಷ್ಯ ನಿಧಿ ಪಿಂಚಣಿದಾರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಭವಿಷ್ಯ ನಿಧಿ ಪಿಂಚಣಿದಾರರ ಉಡುಪಿ ವಲಯ ಸಮಿತಿ (ಸಿಐಟಿಯು) ನೇತೃತ್ವದಲ್ಲಿ ಗುರುವಾರ ನಗರದ ಭವಿಷ್ಯ ನಿಧಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಕಾಪು ತಾಲೂಕಿನ ಬೆಳ್ಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡುಬೆಳ್ಳೆಯಲ್ಲಿ ಖಾಸಗಿ ಬ್ಯಾಂಕ್ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ಮಿಸಿ ಬೆಳ್ಳೆ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗಿದ್ದ ಗ್ರಾಮೀಣ ಗ್ರಂಥಾಲಯ ಇದೀಗ ನಿರ್ವಹಣೆ ಕೊರತೆಯಿಂದ ಅವ್ಯವಸ್ಥೆಯತ್ತ ಸಾಗುತ್ತಿದೆ.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಿಜೆಪಿ ಕುಂದಾಪುರ ಮಂಡಲ ಹಾಗೂ ಬಿಜೆಪಿ ಯುವಮೋರ್ಚಾ ವತಿಯಿಂದ ಆಯೋಜಿಸಿದ್ದ ತಿರಂಗಾ ಯಾತ್ರೆಯಲ್ಲಿ 150 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜದೊಂದಿಗೆ ಭವ್ಯ ಪಥಸಂಚಲನ ನಡೆಯಿತು.
ಸ್ವಾತಂತ್ರ್ಯ ಹೋರಾಟವನ್ನು ಸ್ಮರಿಸುವ ಹಾಗೂ ನಾಗರಿಕರಲ್ಲಿ ದೇಶಭಕ್ತಿಯ ಭಾವನೆ ಮೂಡಿಸುವ ಉದ್ದೇಶದಿಂದ ಉಡುಪಿ ಶಾಸಕ ಯಶಪಾಲ್ ಸುವರ್ಣ ನೇತೃತ್ವದಲ್ಲಿ ಬುಧವಾರ ಸಂಜೆ ಮಣಿಪಾಲದಲ್ಲಿ ತಿರಂಗ ಯಾತ್ರೆ ನಡೆಯಿತು.
ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಹಣ ವರ್ಗಾವಣೆ ಮೂಲಕ ಸಹಕರಿಸಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಾಜಿ ಐಪಿಎಸ್ ಅಧಿಕಾರಿ ಹಾಗೂ ವಿ ದ ಲೀಡರ್ಸ್ ಸಂಸ್ಥೆಯ ಸ್ಥಾಪಕ ಕೆ. ಅಣ್ಣಾಮಲೈ ಅವರು ಬುಧವಾರ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.
ತುಳುಕೂಟ ಉಡುಪಿ, ಲಯನ್ಸ್ ಹಾಗೂ ಲಿಯೋ ಕ್ಲಬ್ ಉಡುಪಿ–ಇಂದ್ರಾಳಿ ಇದರ ಸಹಯೋಗದಲ್ಲಿ ಆಟಿಯ ಕಷಾಯ ವಿತರಣೆ ಕಾರ್ಯಕ್ರಮ ಬುಧವಾರ ಇಂದ್ರಾಳಿ ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಲಯನ್ಸ್ ಭವನದಲ್ಲಿ ನಡೆಯಿತು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ಆಟಿ ಅಮಾವಾಸ್ಯೆಯ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧೆಡೆ ಬುಧವಾರ ಹಾಲೆ ಮರದ ಕಷಾಯ ಸೇವಿಸುವ ಸಂಪ್ರದಾಯ ನಡೆಯಿತು.
ಕೇರಳ ಸಮಾಜಮ್ ಉಡುಪಿ ವತಿಯಿಂದ ಉಡುಪಿಯಲ್ಲಿ ನೆಲೆಸಿರುವ ಕೇರಳ ಸಮಾಜ ಬಾಂಧವರಿಗಾಗಿ ಮಲ್ಪೆ ಕಡಲ ತೀರದಲ್ಲಿ ಬುಧವಾರ ಕರ್ಕಿಡಕವಾವು ಬಲಿತರ್ಪಣ ಕಾರ್ಯಕ್ರಮ ನಡೆಯಿತು.
ಉಡುಪಿ ಕಲ್ಪನಾ ಟಾಕೀಸ್ ಬಳಿಯ ಸಾಯಿರಾಜ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಸಚಿನ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟವಾಗಿರುವುದು ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಹೆರ್ಗಾ ಗ್ರಾಮದ ಕೆಳಪರ್ಕಳ ಡೌನ್ನಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಆಟೋ ರಿಕ್ಷಾದಲ್ಲಿ ಪ್ರಯಾಣಿಕರಂತೆ ಬಂದು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ನಲ್ಲಿದ್ದ ಹೆಲ್ಮೆಟ್ ಕಳವು ಮಾಡಿರುವ ಘಟನೆ ನಗರದ ತೆಂಕಪೇಟೆಯ ಐಡಿಯಲ್ ಜಂಕ್ಷನ್ ಬಳಿ ನಡೆದಿದೆ.
ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿರುವ ಮಲ್ಪೆ ಬೀಚ್ ಪರಿಸರದಲ್ಲಿ ಸ್ವಚ್ಛತೆಯ ಕೊರತೆ ಕಂಡುಬಂದಿದ್ದು, ಕಸದ ರಾಶಿ ಹಾಗೂ ಅಂಗಡಿಗಳ ಹಿಂಭಾಗದಲ್ಲಿ ನಿಂತ ನೀರಿನಿಂದ ಸೊಳ್ಳೆಗಳ ಉತ್ಪತ್ತಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ.