Showing 20 of 3093 posts • Page 122 of 155
ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಹಾಗೂ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘಗಳ (ಸಿಐಟಿಯು) ನೇತೃತ್ವದಲ್ಲಿ ಇಂದು ಕಾರ್ಕಳದಲ್ಲಿ ಪ್ರತಿಭಟನೆ ನಡೆಸಿ ಕಂಪನಿಗೆ ಮುತ್ತಿಗೆ ಹಾಕಲಾಯಿತು.
ರಾಜ್ಯದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದು, ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.
ಕಾವಡಿ ಫ್ರೌಡಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಸಂಜನಾ, ದಿವ್ಯಾಂಗ ಮತ್ತು ಅಶಕ್ತರಿಗಾಗಿ ಕುರ್ಚಿಯೊಂದನ್ನು ರೂಪಿಸಿದ್ದು ಎಲ್ಲರ ಗಮನ ಸೆಳೆದಿದೆ. ಈಕೆಯ ಮನೆಯಲ್ಲಿ ತೀರ ಬಡತನ ಇದೆ.
ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬಹುದು.
ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಹೆಬ್ರಿ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ನೀಡುವ ‘ಶಾರದಾ ಕೃಷ್ಣ’ ಪ್ರಶಸ್ತಿ -2025ಕ್ಕೆ ಪ್ರಸಿದ್ಧ ರಂಗನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ತಿಳಿಸಿದರು.
ನಕ್ಸಲ್ ವಿಕ್ರಂ ಗೌಡ ಎನ್ಕೌಂಟರ್ ನಡೆದ ಪೀತಬೈಲ್ ಪ್ರದೇಶದಲ್ಲಿ ಸ್ಮಶಾನ ಮೌನ ಆವರಿಸಿದೆ. ಎನ್ ಕೌಂಟರ್ ನಡೆದ ಮನೆಯಂಗಳ ಭೀಭತ್ಸ ಘಟನೆಯ ಚಿತ್ರಣವನ್ನ ಸಾರಿ ಸಾರಿ ಹೇಳುತ್ತಿದೆ. ಒಡೆದು ಹೋದ ತುಳಸಿಕಟ್ಟೆ ,ಅಡಿಕೆ ಮರದಲ್ಲೇ ಉಳಿದ ಬುಲೆಟ್ ಎನ್ಕೌಂಟರ್ ಭೀಕರತೆಗೆ ಸಾಕ್ಷಿಯಾಗಿದೆ.
ಹಲವು ಕಳವು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಆರೋಪಿ ಯೋರ್ವ ನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಾಲಾಜಿ ಬಾರ್ ಮತ್ತು ನವೀನ್ ಬಾರ್ ಇದರ ಮಾಲೀಕ ರಘುನಾಥ ಎಂ ಸಾಲಿಯಾನ್ ಅವರು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.
ನಕ್ಸಲ್ ವಿಕ್ರಂ ಗೌಡ ಎನ್ ಕೌಂಟರ್ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದೆ. ಉಳಿದ ನಕ್ಸಲರಿಗಾಗಿ ಶೋಧ ತೀವ್ರಗೊಂಡಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ನ.26ರಿಂದ ಜರಗಲಿದೆ. 30ರ ವರೆಗೆ ನಡೆಯಲಿದೆ.
ಮಣಿಪಾಲದ ವೆಲ್ಕಮ್ ಗ್ರೂಪ್ ಗ್ರಾಜ್ಯುಯೇಟ್ ಸ್ಕೂಲ್ ಆಫ್ ಹೋಟೆಲ್ ಅಡ್ಮಿನಿಸ್ಟ್ರೇಷನ್ (ವಾಗ್ಶಾ) ವತಿಯಿಂದ ಮುಂಬರುವ ಕ್ರಿಸ್ಮಸ್ ಹಬ್ಬಕ್ಕಾಗಿ ಸಾಂಪ್ರದಾಯಿಕ ಕೇಕ್ ಮಿಕ್ಸಿಂಗ್ ಕಾರ್ಯಕ್ರಮ ನಡೆಯಿತು.
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಸಿಮೆಂಟ್ ರೆಡಿಮಿಕ್ಸ್ ಲಾರಿಯೊಂದು ಪಲ್ಟಿಯಾದ ಘಟನೆ ಅಂಬಾಗಿಲು- ಪೆರಂಪಳ್ಳಿ ಕ್ರಾಸ್ ನಲ್ಲಿ ಸಂಭವಿಸಿದೆ. ಚಾಲಕ ಅಪಾಯದಿಂದ ಪಾರಾಗಿದ್ದು, ಯಾವುದೇ ವಾಹನ ಇಲ್ಲದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ.
ರೈತರ, ಮಠ ಹಾಗೂ ಜನಸಾಮಾನ್ಯರ ಆಸ್ತಿಯನ್ನು ಕಬಳಿಸುತ್ತಿರುವ ವಕ್ಫ್ ಬೋರ್ಡ್ ಅಕ್ರಮವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ “ನಮ್ಮ ಭೂಮಿ ನಮ್ಮ ಹಕ್ಕು” ಘೋಷ ವಾಕ್ಯದೊಂದಿಗೆ ಬೃಹತ್ ಧರಣಿ ಸತ್ಯಾಗ್ರಹವನ್ನು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಹಮ್ಮಿಕೊಳ್ಳಲಾಯಿತು.
ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ನಮ್ಮ ಸರ್ಕಾರ ಮತ್ತು ನಮ್ಮ ಪಕ್ಷ ಅನ್ಯಾಯ ಮಾಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ಅವರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಉಡುಪಿ ನಗರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಹೋಂ ನರ್ಸ್ ಅನ್ನು ಮೂರೇ ದಿನದಲ್ಲಿ ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.
ನಕ್ಸಲ್ ವಿಕ್ರಂ ಗೌಡನನ್ನು ನಕಲಿ ಎನ್ಕೌಂಟರ್ನಲ್ಲಿ ಹತ್ಯೆ ಮಾಡಿಲ್ಲ, ಇದು ಆರೋಪ ಸುಳ್ಳು. ನಕ್ಸಲರು ಮತ್ತು ಎಎನ್ಎಫ್ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ವಿಕ್ರಂ ಗೌಡ ಮೃತಪಟ್ಟಿದ್ದಾರೆ ಎಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ತಿಳಿಸಿದ್ದಾರೆ.
ಹೆಬ್ರಿಯ ಕಾಡಿನಲ್ಲಿ ನಕ್ಸಲ್ ನಿಗ್ರಹ ಪಡೆ ಪೊಲೀಸರ ಎನ್ಕೌಂಟರ್ನಲ್ಲಿ ಮೃತಪಟ್ಟ ನಕ್ಸಲ್ ನಾಯಕ ವಿಕ್ರಂ ಗೌಡನ ಅಂತ್ಯ ಸಂಸ್ಕಾರ ಹುಟ್ಟೂರು ಕೂಡ್ಲುವಿನಲ್ಲಿ ನೆರವೇರಿತು.
ರಿವರ್ಸ್ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಇನ್ಸುಲೇಟರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರ್ನಲ್ಲಿದ್ದ ಏಳು ಜನರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂಭಾಸಿ ಸಮೀಪದ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಎದುರುಗಡೆ ನಡೆದಿದೆ.