Showing 20 of 3100 posts • Page 124 of 155
ಮೀನು ಸಾಗಿಸುವ ಇನ್ಸುಲೇಟರ್ ವಾಹನವೊಂದರಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಘಟನೆ ಶಿರೂರು ಕರಿಕಟ್ಟೆ ಬಳಿ ನಡೆದಿದೆ. ಇನ್ಸುಲೇಟರ್ ವಾಹನ ಪಲ್ಟಿಯಾದ ಪರಿಣಾಮ ಈ ಘಟನೆ ಬೆಳಕಿಗೆ ಬಂದಿದೆ.
ಅಣ್ಣನ ಉತ್ತರ ಕ್ರಿಯೆ ಸಿದ್ಧತೆ ವೇಳೆ ವಿದ್ಯುತ್ ಪ್ರವಹಿಸುತ್ತಿದ್ದ ಶಾಮಿಯಾನ ಕಂಬ ಸ್ಪರ್ಶಿಸಿ ಸಹೋದರಿ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಸಂಭವಿಸಿದೆ.
ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಹಾಗೂ ಸೃಷ್ಟಿ ನೃತ್ಯ ಕಲಾ ಕುಟೀರ ಉಡುಪಿ ಇದರ ಜಂಟಿ ಆಶ್ರಯದಲ್ಲಿ “ನೃತ್ಯೋತ್ಸವ-2024” ಕಾರ್ಯಕ್ರಮವನ್ನು ಇದೇ ನ.16 ಮತ್ತು 17ರಂದು ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸೃಷ್ಟಿ ನೃತ್ಯ ಕಲಾ ಕುಟೀರದ ಮುಖ್ಯಸ್ಥೆ ಮಂಜರಿ ಚಂದ್ರ ತಿಳಿಸಿದರು.
ಉಡುಪಿ ಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಹಾಗೂ ಬುಡೋಕಾನ್ ಕರಾಟೆ ಆ್ಯಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ಎರಡು ದಿನಗಳ ‘4ನೇ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್’ ಅನ್ನು ನ.16 ಮತ್ತು 17ರಂದು ಉಡುಪಿ ಶ್ರೀಕೃಷ್ಣಮಠದ ಮಧ್ವಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಿವಕುಮಾರ್ ಅಂಬಲಪಾಡಿ ತಿಳಿಸಿದರು.
ಪತಿಯ ಅಗಲುವಿಕೆಯಿಂದ ಮನನೊಂದ ಅಂಗನವಾಡಿ ಟೀಚರ್ ಒಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ನಡೆದಿದೆ.
ಸಂತೆಕಟ್ಟೆ ಮಾರುಕಟ್ಟೆ ಪ್ರದೇಶಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿದ್ರಾಸುಖವನ್ನು ತ್ಯಜಿಸಿ ವಿಷ್ಣು ಜಾಗೃತ ಆಗುವ ಉತ್ಥಾನ ದ್ವಾದಶಿ ಹಿನ್ನಲೆಯಲ್ಲಿ ಉಡುಪಿಯ ಲಕ್ಷ್ಮೀ ವೆಂಕಟೇಶ ದೇವಾಲಯದಲ್ಲಿ ವೈಭವದ ವಿಶ್ವರೂಪ ದರ್ಶನ ಗಮನ ಸೆಳೆಯಿತು.
ಕಾಪು ತಾಲೂಕಿನ ಶಿರ್ವ ಧರ್ಮೆಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಉಡುಪಿ, ಕುಂದಾಪುರ, ಕಾರ್ಕಳ ಹಾಗು ಬೈಂದೂರು ನ್ಯಾಯಾಲಯದಲ್ಲಿ ಡಿ.14 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.
ಗೋವಾ ಅಕ್ರಮ ಮದ್ಯ ವಶಪಡಿಸಿಕೊಂಡ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿದ್ದು, ಈ ವಿಚಾರವಾಗಿ ಅಬಕಾರಿ ಇಲಾಖೆ ಎಡಿಸಿ ಬಿಂದುಶ್ರೀ ಹೇಳಿಕೆ ನೀಡಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ವ್ಯವಹಾರದಲ್ಲಿ ಭಾರೀ ನಷ್ಟ ಅನುಭವಿಸಿದ ಪರಿಣಾಮ ಸಾಲಗಾರರ ಕಾಟಕ್ಕೆ ಹೆದರಿ ಪತ್ನಿಯೊಂದಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ ಹೊನ್ನೂರು ಕಾವಲ್ ಗ್ರಾಮದಲ್ಲಿ ನಡೆದಿದೆ.
ರಂಗಭೂಮಿ ಉಡುಪಿ ಆಶ್ರಯದಲ್ಲಿ ಯಕ್ಷ ರಂಗಾಯಣ ಕಾರ್ಕಳ ಹಾಗೂ ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ ಇದರ ಸಹಯೋಗದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ “ರಂಗಭಾಷೆ” ನಾಕಟ
ಯಕ್ಷಗಾನ ಕಲಾರಂಗ ಉಡುಪಿ ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ 2024ನೇ ಸಾಲಿನ “ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ”
ಏಕಕಾಲದಲ್ಲಿ ಎರಡು ಮನೆಗಳಿಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಮದ್ಯದ ಬಾಕ್ಸ್ ಗಳನ್ನು ವಶಪಡಿಸಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ಇಂದು ನಡೆದಿದೆ.
ಶ್ರೀಕೃಷ್ಣಮಠದಲ್ಲಿ ನಡೆಯುವ ಕಾರ್ತಿಕ ಲಕ್ಷದೀಪೋತ್ಸವಕ್ಕೆ ಬುಧವಾರ ಸಂಜೆ ಚಾಲನೆ ನೀಡಲಾಯಿತು.
ದ್ದರಾಮಯ್ಯ ಅವರಿಂದ ಮುಸಲ್ಮಾನರ ತುಷ್ಟಿಕರಣ ಇದೇ ಮೊದಲೇನಲ್ಲ.
ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮವು ಇದೇ ನ.17 ಮತ್ತು ನ.18 ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಶತಮಾನೋತ್ತರ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ತಿಳಿಸಿದರು.
ಇವತ್ತು ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಗಳಲ್ಲಿ ಬಿರುಸಿನ ಮತದಾನ ನಡೆದಿದೆ. ಮೂರೂ ಕಡೆ ನಮಗೆ ಉತ್ತಮ ವಾತಾವರಣ ಇದೆ. ಸಂಡೂರು ಉಪಚುನಾವಣೆ ಪ್ರಚಾರದಲ್ಲಿ ನಾನು ಭಾಗವಹಿಸಿದ್ದೇನೆ. ಮೂರೂ ಕಡೆ ನಿಶ್ಚಿತವಾಗಿ ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ ಸುನಿಲ್ ಕುಮಾರ್ ಭವಿಷ್ಯ ನುಡಿದಿದ್ದಾರೆ.
ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ, ಮಣಿಪಾಲ ಮಾಹೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ‘ಗೋವಿಂದ ಪೈ ಸಂಶೋಧನ ಸಂಪುಟ-1’ ಕೃತಿಯ ಬಿಡುಗಡೆ ಸಮಾರಂಭ ಇದೇ ನ.16ರಂದು ಬೆಳಿಗ್ಗೆ 10 ಗಂಟೆಗೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ತಿಳಿಸಿದರು.
ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್, ಕುಂತಳನಗರ ಇದರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನ ವತಿಯಿಂದ ಎಂಆರ್ ಜಿ ಗ್ರೂಪ್ ನ ಪ್ರಾಯೋಜಕತ್ವದಲ್ಲಿ ಸತತ 3ನೇ ಬಾರಿಗೆ ಎರಡು ದಿನಗಳ ‘ಬೃಹತ್ ಉದ್ಯೋಗ ಮೇಳ