Showing 20 of 3348 posts • Page 13 of 168
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶಿಸಿದೆ.
ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶದಾದ್ಯಂತ ಸೋಮವಾರ ಹಮ್ಮಿಕೊಂಡಿರುವ ‘ಜೈಲ್ ಭರೋ’, ರಸ್ತೆ ತಡೆ ಹಾಗೂ ಪ್ರತಿಭಟನೆಯ ಭಾಗವಾಗಿ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಹತ್ಯೆ ಯುಪಿಸಿಎಲ್ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದ ಆರ್ಥಿಕ ವ್ಯವಹಾರದ ವೈಮನಸ್ಸಿನಿಂದ ನಡೆದಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಹರಿರಾಮ್ ಶಂಕರ್ ತಿಳಿಸಿದರು.
ಆಷಾಢ ಕೃಷ್ಣ ಪಕ್ಷದ ದ್ವಾದಶಿಯಂದು ಶ್ರೀಕೃಷ್ಣ ಮಠದಲ್ಲಿ ಶ್ರೀ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆ ಭಕ್ತಿಪೂರ್ವಕವಾಗಿ ನಡೆಯಿತು.
ಕಟಪಾಡಿ–ಶಿರ್ವ ಮುಖ್ಯ ರಸ್ತೆಯ ಶಂಕರಪುರ ಸಾಲ್ಮರ ಬಳಿ ಪೊದೆಗಳಿಂದ ಆವೃತವಾಗಿದ್ದ ಬಾವಿಗೆ ಬಿದ್ದು ಐದು ಕಾಡುಹಂದಿಗಳು ಮೃತಪಟ್ಟ ಘಟನೆ ನಡೆದಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಖಂಡಿಸಿ ಬಿಜೆಪಿ ಕಾಪು ಮಂಡಲದ ವತಿಯಿಂದ ಕಾಪು ಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಹಿರಿಯಡ್ಕ ಸಮೀಪದ ಪಡ್ಡಂನ ಕೃಷಿ ಜಮೀನಿನಲ್ಲಿ ಅಪರೂಪದ ನೀರುನಾಯಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ.
‘ಪತಿಯ ಸಾವು ನಮಗೆ ಆಕಸ್ಮಿಕ ಆಘಾತವಾಗಿದೆ. ಉದ್ಯಮಕ್ಕೆ ಸಂಬಂಧಿಸಿದ ಯಾವುದೇ ವಿಚಾರವನ್ನು ಅವರು ನಮ್ಮೊಂದಿಗೆ ಹೇಳಿಕೊಂಡಿರಲಿಲ್ಲ’ ಎಂದು ಹತ್ಯೆಗೀಡಾದ ಡೇವಿಡ್ ಡಿಸೋಜ ಅವರ ಪತ್ನಿ ಪ್ರಿಯಾ ಡೇವಿಡ್ ಹೇಳಿದರು.
ಹಾಡು ಹಗಲೇ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಕಾಂಗ್ರೆಸ್ ಮುಖಂಡ ಪ್ರಿನ್ಸ್ ಡೇವಿಡ್ ಡಿಸೋಜಾ ಹಂತಕರು ಪತ್ತೆಯಾಗಿದ್ದಾರೆ.
ಮಳೆಗಾಲ ಆರಂಭವಾಗುತ್ತಿದ್ದಂತೆ ಸಾಮಾನ್ಯ ತೊರೆಗಳೂ ಮೈದುಂಬಿ ಹರಿದು ಜಲಪಾತಗಳ ರೂಪ ಪಡೆಯುತ್ತವೆ.
ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ (55) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ವಾಹನವನ್ನು ಓವರ್ಟೇಕ್ ಮಾಡುವ ಭರದಲ್ಲಿದ್ದ ಮಾರುತಿ ಸ್ವಿಫ್ಟ್ ಕಾರೊಂದು ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಶುಕ್ರವಾರ (ಆ. 7) ರಾತ್ರಿ 7-30ಕ್ಕೆ ಶಿರ್ವ ಪೆಟ್ರೋಲ್ ಪಂಪ್ ಮುಂಭಾಗದಲ್ಲಿ ನಡೆದಿದೆ.
ಜಿಲ್ಲೆಯ ಕಾಪು ತಾಲೂಕಿನ ಮುದುರಂಗಡಿ ಪೇಟೆಯಲ್ಲಿ ಹಾಡಹಗಲೇ ಡೇವಿಡ್ ಡಿಸೋಜ ನನ್ನು ಕೊಲೆಗೈದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿಯಿಂದ ಬ್ರಹ್ಮಾವರಕ್ಕೆ ತೆರಳುವ ಮಾರ್ಗದ ಹುತ್ತುರ್ಕೆ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.
ಆಹಾರ ಸೇವನೆಯಲ್ಲಿ ಜನರು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಪ್ರತಿಯೊಂದು ಹೋಟೆಲ್ನಲ್ಲಿಯೂ ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಬೇಕು.
ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ಪ್ರಿನ್ಸ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನದಾಳಿ ನಡೆಸಿ ಹತ್ಯೆಗೈದಿರುವ ಬಗ್ಗೆ ವರದಿಯಾಗಿದೆ.
ವಿಶ್ವ ಹಿಂದೂ ಪರಿಷತ್ (ವಿಹಿಂಪ) ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಶುಕ್ರವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿದರು.
ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರ್ಪಡೆಗೊಂಡಿರುವ ಎಂಟು ಗ್ರಾಮಗಳನ್ನು ಕೈಬಿಟ್ಟು, ಗ್ರಾಮೀಣ ಪ್ರದೇಶಗಳಿಗೆ ಅಗತ್ಯ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ರೈತರು ನಡೆಸುತ್ತಿರುವ ಒಂದು ವರ್ಷದ ಹೋರಾಟ ಶುಕ್ರವಾರ ತೀವ್ರ ಸ್ವರೂಪ ಪಡೆದುಕೊಂಡಿತು.
ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮಾಡಿ, ಮಾನಕ್ಕೆ ಕುಂದುಂಟಾಗುವಂತೆ ವರ್ತಿಸಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.