Showing 20 of 3361 posts • Page 135 of 169
ತುಳುಕೂಟ ಉಡುಪಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ, ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, ಜೈ ತುಳುನಾಡ್ ಉಡುಪಿ, ರೋಟರಿ ಕ್ಲಬ್ ಕಲ್ಯಾಣಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ “ತುಳು ಮಿನದನ-2024” ಕಾರ್ಯಕ್ರಮ
ಕಾಲಿವುಡ್ ನ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ದೇವಾಲಯದಲ್ಲಿ ನಡೆದ ಚಂಡಿಕಾಯಾಗದಲ್ಲಿ ಪತ್ನಿ ನಟಿ ಜ್ಯೋತಿಕಾ ಜೊತೆ ಭಾಗಿಯಾದರು.
ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ಮೈಸೂರು ಇದರ ವತಿಯಿಂದ ರೋಟರಿ ಕ್ಲಬ್ ಕಲ್ಯಾಣಪುರ, ಲಯನ್ಸ್ ಮತ್ತು ಲಿಯೋ ಕ್ಲಬ್ ಉಡುಪಿ, ಅಮೃತ್, ದಿವ್ಯಾಂಗ ರಕ್ಷಣಾ ಸಮಿತಿ ಕೊಡವೂರು
ರಾಜ್ಯದ ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣವನ್ನು ನಕಲಿ ಎನ್ ಕೌಂಟರ್, ಇದೊಂದು ಪೂರ್ವನಿಯೋಜಿತ ಹತ್ಯೆ ಎಂದು ಎಡಪಂಥೀಯ ಸಂಘಟನೆಗಳು,
ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾರಿಕೆರೆಯಲ್ಲಿ ಹೆಜ್ಜೇನು ದಾಳಿ. ಪಂಚಾಯತ್ ಅಧ್ಯಕ್ಷ ಸತೀಶ್ ಬಿ. ಕುಂದರ್, ಉಪಾಧ್ಯಕ್ಷೆ ಸರಸ್ವತಿ ಹಾಗೂ ಅವರ ಮಗಳು ಸೌಜನ್ಯ ಎಂದು ಗುರುತಿಸಲಾಗಿದೆ.
ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ನಿರಂತರ ದಬ್ಬಾಳಿಕೆ ಖಂಡಿಸಿ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಹಿಂದೂ ಸಂಘಟನೆಗಳು ಉಡುಪಿಯ ಬ್ರಹ್ಮಗಿರಿ ಸರ್ಕಲ್ ನಲ್ಲಿ ಇಂದು ಪ್ರತಿಭಟನೆ ನಡೆಸಿದವು.
ಇಲ್ಲಿನ ನಿಟ್ಟೆ ಗ್ರಾಮದ ಅರಂತಬೆಟ್ಟು ದರ್ಕಾಸ್ ಬಳಿಯ ಮನೆಯೊಂದರ ಬಾವಿಗೆ ಆಹಾರ ಅರಸಿಕೊಂಡು ಬಂದಿದ್ದ ಚಿರತೆ ಮರಿ ಬಿದ್ದಿದ್ದು, ಸ್ಥಳೀಯರ ಸಹಕಾರದಿಂದ ಅರಣ್ಯ ಇಲಾಖೆಯವರು ಚಿರತೆಯನ್ನು ರಕ್ಷಣೆ ಮಾಡಿದ್ದಾರೆ.
ಕಾಂತಾರ ಸಿನೆಮಾ ಚಿತ್ರೀಕರಣ ಮುಗಿಸಿ ಕೊಲ್ಲೂರು ವಸತಿಗೃಹಕ್ಕೆ ವಾಪಾಸಾಗುತ್ತಿದ್ದ ವೇಳೆ ಬಸ್ ಪಲ್ಟಿಯಾಗಿ ಹಲವು ಕಲಾವಿದರು ಗಾಯಗೊಂಡಿರುವ ಘಟನೆ ಕೊಲ್ಲೂರು ಸಮೀಪದ ಆನೆಜರಿ ಎದುರು ಭಾನುವಾರ ರಾತ್ರಿ ಸಂಭವಿಸಿದೆ.
ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಹಾಗೂ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘಗಳ (ಸಿಐಟಿಯು) ನೇತೃತ್ವದಲ್ಲಿ ಇಂದು ಕಾರ್ಕಳದಲ್ಲಿ ಪ್ರತಿಭಟನೆ ನಡೆಸಿ ಕಂಪನಿಗೆ ಮುತ್ತಿಗೆ ಹಾಕಲಾಯಿತು.
ರಾಜ್ಯದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದು, ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.
ಕಾವಡಿ ಫ್ರೌಡಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಸಂಜನಾ, ದಿವ್ಯಾಂಗ ಮತ್ತು ಅಶಕ್ತರಿಗಾಗಿ ಕುರ್ಚಿಯೊಂದನ್ನು ರೂಪಿಸಿದ್ದು ಎಲ್ಲರ ಗಮನ ಸೆಳೆದಿದೆ. ಈಕೆಯ ಮನೆಯಲ್ಲಿ ತೀರ ಬಡತನ ಇದೆ.
ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬಹುದು.
ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಹೆಬ್ರಿ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ನೀಡುವ ‘ಶಾರದಾ ಕೃಷ್ಣ’ ಪ್ರಶಸ್ತಿ -2025ಕ್ಕೆ ಪ್ರಸಿದ್ಧ ರಂಗನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ತಿಳಿಸಿದರು.
ನಕ್ಸಲ್ ವಿಕ್ರಂ ಗೌಡ ಎನ್ಕೌಂಟರ್ ನಡೆದ ಪೀತಬೈಲ್ ಪ್ರದೇಶದಲ್ಲಿ ಸ್ಮಶಾನ ಮೌನ ಆವರಿಸಿದೆ. ಎನ್ ಕೌಂಟರ್ ನಡೆದ ಮನೆಯಂಗಳ ಭೀಭತ್ಸ ಘಟನೆಯ ಚಿತ್ರಣವನ್ನ ಸಾರಿ ಸಾರಿ ಹೇಳುತ್ತಿದೆ. ಒಡೆದು ಹೋದ ತುಳಸಿಕಟ್ಟೆ ,ಅಡಿಕೆ ಮರದಲ್ಲೇ ಉಳಿದ ಬುಲೆಟ್ ಎನ್ಕೌಂಟರ್ ಭೀಕರತೆಗೆ ಸಾಕ್ಷಿಯಾಗಿದೆ.
ಹಲವು ಕಳವು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಆರೋಪಿ ಯೋರ್ವ ನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಾಲಾಜಿ ಬಾರ್ ಮತ್ತು ನವೀನ್ ಬಾರ್ ಇದರ ಮಾಲೀಕ ರಘುನಾಥ ಎಂ ಸಾಲಿಯಾನ್ ಅವರು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.
ನಕ್ಸಲ್ ವಿಕ್ರಂ ಗೌಡ ಎನ್ ಕೌಂಟರ್ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದೆ. ಉಳಿದ ನಕ್ಸಲರಿಗಾಗಿ ಶೋಧ ತೀವ್ರಗೊಂಡಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ನ.26ರಿಂದ ಜರಗಲಿದೆ. 30ರ ವರೆಗೆ ನಡೆಯಲಿದೆ.
ಮಣಿಪಾಲದ ವೆಲ್ಕಮ್ ಗ್ರೂಪ್ ಗ್ರಾಜ್ಯುಯೇಟ್ ಸ್ಕೂಲ್ ಆಫ್ ಹೋಟೆಲ್ ಅಡ್ಮಿನಿಸ್ಟ್ರೇಷನ್ (ವಾಗ್ಶಾ) ವತಿಯಿಂದ ಮುಂಬರುವ ಕ್ರಿಸ್ಮಸ್ ಹಬ್ಬಕ್ಕಾಗಿ ಸಾಂಪ್ರದಾಯಿಕ ಕೇಕ್ ಮಿಕ್ಸಿಂಗ್ ಕಾರ್ಯಕ್ರಮ ನಡೆಯಿತು.
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಸಿಮೆಂಟ್ ರೆಡಿಮಿಕ್ಸ್ ಲಾರಿಯೊಂದು ಪಲ್ಟಿಯಾದ ಘಟನೆ ಅಂಬಾಗಿಲು- ಪೆರಂಪಳ್ಳಿ ಕ್ರಾಸ್ ನಲ್ಲಿ ಸಂಭವಿಸಿದೆ. ಚಾಲಕ ಅಪಾಯದಿಂದ ಪಾರಾಗಿದ್ದು, ಯಾವುದೇ ವಾಹನ ಇಲ್ಲದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ.