Showing 20 of 3361 posts • Page 139 of 169
ನಾಲ್ಕೈದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ಗೊಂದಲದ ಗೂಡಾಗಿದೆ.
ಇಂದ್ರಾಳಿಯ ರೈಲ್ವೆ ಸೇತುವೆ ಬಳಿ ರೈಲ್ವೆ ಹಳಿಯ ಮೇಲೆ ಛಿದ್ರಗೊಂಡ ಸ್ಥಿತಿಯಲ್ಲಿ ವ್ಯಕ್ತಿಯ ಶವ ಗುರುವಾರ ರಾತ್ರಿ ಕಂಡುಬಂದಿದೆ. ವ್ಯಕ್ತಿಯು ಚಲಿಸುತ್ತಿರುವ ರೈಲಿಗೆ ಅಡ್ಡಬಂದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಚಿರತೆಯೊಂದು ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಮೇಲೆ ದಾಳಿ ನಡೆಸಿ ಬಳಿಕ ಹೊತ್ತೊಯ್ದ ಘಟನೆ ಬೈಂದೂರು ತಾಲೂಕಿನ ಕಟ್ ಬೆಲ್ತೂರು ಗ್ರಾಪಂ ವ್ಯಾಪ್ತಿಯ ದೇವಳಕುಂದ ಎಂಬಲ್ಲಿ ನಡೆದಿದೆ.
ಜಿಲ್ಲೆಯಾದ್ಯಂತ ಭತ್ತದ ಬೆಳೆ ಕಟಾವಿಗೆ ಸಿದ್ದಗೊಂಡಿದ್ದು, ಎಂದಿನಂತೆ ಭತ್ತ ಕಟಾವು ಯಂತ್ರಗಳು ಪ್ರತಿ ಗ್ರಾಮದಲ್ಲಿ ಸಿದ್ದವಾಗಿ ನಿಂತಿವೆ.
ಕನ್ನಡ ನಾಡು ನುಡಿಯ ಕುರಿತು ಅಭಿಮಾನವನ್ನು ಮೂಡಿಸುವ ಉದ್ದೇಶದಿಂದ ‘ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ’ಯು ಪ್ರತಿ ಜಿಲ್ಲೆಗಳಿಗೆ ಸಂಚರಿಸುತ್ತಿದ್ದು, ಅನೇಕ ಶತಮಾನಗಳ ಇತಿಹಾಸದ ಕನ್ನಡ ನಾಡು, ಭಾಷೆ ಪ್ರತಿಯೊಬ್ಬರ ಹೆಗ್ಗಳಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.
ಉಡುಪಿ ಮತ್ತು ದಕ್ಷಿಣ ಕನ್ನಡದ ಐ.ಸಿ.ಎಸ್.ಇ. ಹಾಗೂ ಸಿ.ಬಿ.ಎಸ್.ಇ. ಶಾಲೆಗಳ ಒಕ್ಕೂಟ ( AICS) ಮತ್ತು ಎಸ್.ಎಮ್.ಎಸ್. ಆಂಗ್ಲ ಮಾಧ್ಯಮ ಶಾಲೆ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ “ಮಾನವತೆಯ ಔನ್ನತ್ಯಕ್ಕಾಗಿ ಶಿಕ್ಷಣ” ಎಂಬ ಧ್ಯೇಯವಾಕ್ಯದೊಂದಿಗೆ ರಾಜ್ಯಮಟ್ಟದ ಶೈಕ್ಷಣಿಕ ವಿಚಾರ ಸಂಕಿರಣ
ಉಡುಪಿ ಬೈಲಕೆರೆಯ ವಿದ್ಯೋದಯ ಶಾಲೆಯ ಬಳಿಯ ಇಂದ್ರಾಣಿ ತೋಡಿನಲ್ಲಿ ಗುರುವಾರ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಕಣ ರಂಗೇರುತ್ತಿದೆ. ಅದರಲ್ಲೂ ಕೂಡ ಚೆನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಾಜ್ಯದ ಗಮನ ಸೆಳೆದಿದೆ .
ಶಿವಳ್ಳಿ ಗ್ರಾಮದ ಬೇಕ್ ಲೇನ್ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್ ಸ್ಟೋರ್ಸ್ ನ ಶೆಟರ್ ಒಡೆದು ನಗದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೈಂದೂರು ಬಿಜೆಪಿ ಮಂಡಲ ವತಿಯಿಂದ ವಕ್ಫ್ ಬೋರ್ಡ್ ನ ಲ್ಯಾಂಡ್ ಜಿಹಾದ್ ವಿರುದ್ಧ ಬೈಂದೂರಿನಲ್ಲಿ ಬ್ರಹತ್ ಪ್ರತಿಭಟನೆ ನಡೆಯಿತು.
ಕುಡಿದ ಮತ್ತಿನಲ್ಲಿ ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದು ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಾಪು ತಾಲೂಕಿನ ಹೆಜಮಾಡಿ ಟೋಲ್ ಗೇಟ್ ಸಮೀಪ ಸಂಭವಿಸಿದೆ.
ಕಾರ್ಕಳ ತಾಲೂಕಿನ ನಿಟ್ಟೆ ಸಮೀಪ ಚಿರತೆಯ ಮರಿಯೊಂದು ಕಾಣಿಸಿಕೊಂಡಿದೆ. ಇಲ್ಲಿನ ಕಲ್ಯ ಗ್ರಾಮದ ಗುಳಿಗ ದೈವದ ಗುಡಿಯ ಸಮೀಪ ಚಿರತೆಯ ಮರಿ ಅವಿತು ಕುಳಿತಿತ್ತು.
ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ಮತ್ತು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು.
ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮುಂತಾದ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮೂಲಕ ಭರ್ತಿ ಮಾಡಲು ಕುಂದಾಪುರ ತಾಲೂಕಿನ 35-ಅಮಾಸೆಬೈಲು ಗ್ರಾಮ ಪಂಚಾಯತಿಯ 1 ಸ್ಥಾನ,
ಪಹಣಿ ಆಧಾರ್ ಜೋಡಣೆ ಕಾರ್ಯವು ಜಿಲ್ಲೆಯಲ್ಲಿ ಪ್ರಗತಿಯಲ್ಲಿದೆ. ಸದರಿ ಪ್ರಕ್ರಿಯೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಖಾತಾದಾರರು ಮರಣ ಹೊಂದಿರುವ ಕುರಿತು ತಂತ್ರಾಂಶದಲ್ಲಿ ನಮೂದಿಸಿದ್ದು, ಇಂತಹ ಪ್ರಕರಣಗಳಲ್ಲಿ ಪೌತಿ ಅಥವಾ ವಾರೀಸು ಖಾತೆ ಅಂದೋಲನವನ್ನು ಆಯಾಯ ತಾಲೂಕು ಸಭಾಂಗಣದಲ್ಲಿ ನಡೆಸಲಾಗುತ್ತಿದೆ.
ಕಾರ್ಮಿಕರ ಸೇವೆಯನ್ನು ಪಡೆಯಲು ಕೆಲಸಗಾರರನ್ನು ನಿಯೋಜಿಸಿಕೊಳ್ಳುವ ಪ್ರತಿಯೊಬ್ಬ ಮಾಲೀಕರು ಅವರ ಗುರುತಿನ ಚೀಟಿ, ಶಾಶ್ವತ ಹಾಗೂ ತಾತ್ಕಲಿಕ ವಾಸ ಸ್ಥಾನದ ವಿವರಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು.
ವಕ್ಫ್ ಆಸ್ತಿ ಒತ್ತುವರಿ ನೆಪದಲ್ಲಿ ರಾಜ್ಯದ ರೈತರ ಭೂಮಿ ಕಬಳಿಸಲು ಸರ್ಕಾರ ಮುಂದಾಗಿದ್ದು ಆಕಸ್ಮಿಕವೂ ಅಲ್ಲ, ಕಣ್ತಪ್ಪಿನ ಕಾರ್ಯವೂ ಅಲ್ಲ.ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ.
ಗೃಹಲಕ್ಷ್ಮಿ ಹಣದಿಂದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಕವಾಟು ಖರೀದಿಸಿದಿಸಿದ್ದಾರೆ. ಉಡುಪಿಯ ಪರ್ಕಳ ದಲ್ಲಿ ಮಹಿಳೆ ತಾನು ಹೊಸದಾಗಿ ಖರೀದಿಸಿದ ಕವಾಟಿನ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ.
ಶ್ರೀಕೃಷ್ಣ ಮಠದ ಕನಕಗೋಪುರದ ಮುಂಭಾಗ ಯುವತಿಯೊಬ್ಬಳು ಏಕಾಏಕಿ ಕುಸಿದುಬಿದ್ದಿದ್ದಾಳೆ. ಅಸಹಾಯಕ ಸ್ಥಿತಿಯಲ್ಲಿದ್ದ ಈಕೆಗೆ ಸ್ಥಳೀಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
ಜಿಲ್ಲಾಸ್ಪತ್ರೆಯಿಂದ ಚಿಕಿತ್ಸೆ ಪಡೆದು ಬಿಡುಗಡೆಗೊಂಡು ಮನೆಗೆ ರೋಗಿಯನ್ನು ಕರೆದೊಯ್ಯಲು ಅಂಬುಲೆನ್ಸ್ ಗೂ ಹಣವಿಲ್ಲದೆ ಪರದಾಡಿದ ಘಟನೆ ನಡೆದಿದೆ.