Showing 20 of 3348 posts • Page 14 of 168
ಚಾಲಕನ ನಿಯಂತ್ರಣ ತಪ್ಪಿದ ಆಟೋವೊಂದು ರಾಷ್ಟ್ರೀಯ ಹೆದ್ದಾರಿ 169ಎಯ ಈಶ್ವರನಗರದ ಇಳಿಜಾರು ರಸ್ತೆಯಲ್ಲಿರುವ ನಗರಸಭೆಯ ಕುಡಿಯುವ ನೀರಿನ ಪಂಪ್ಹೌಸ್ಗೆ ನುಗ್ಗಿ ಪಲ್ಟಿಯಾದ ಘಟನೆ ಗುರುವಾರ ರಾತ್ರಿ ಸುಮಾರು 11ಗಂಟೆಗೆ ನಡೆದಿದೆ.
ಮಣಿಪಾಲ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಿದ್ಯಾರತ್ನನಗರದಲ್ಲಿರುವ ಐರಿಸ್ ಪ್ಲಾಜಾ ಕಟ್ಟಡದ ಮೊದಲ ಮಹಡಿಯಲ್ಲಿರುವ ಡಾರ್ಕ್ ಲ್ಯಾಬ್ (DRNK LAB) ಕೆಫೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ, ನಿಷೇಧಿತ ಹುಕ್ಕಾ ಸೇವನೆ ಮಾಡುತ್ತಿದ್ದ 8 ಮಂದಿ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮಲ್ಪೆ ಕಲ್ಮಾಡಿಯ ಯುವತಿಯೊರ್ವಳು ನೇಣಿಗೆ ಶರಣಾದ ಘಟನೆ ಬುಧವಾರ ನಡೆದಿದೆ.
ಪರಿಸರ ಸಂರಕ್ಷಣೆ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೆನರಾ ಬ್ಯಾಂಕ್ನ 5ನೇ ಆವೃತ್ತಿಯ ‘ಫ್ರೀಡಂ ರನ್’ ಕಾರ್ಯಕ್ರಮವನ್ನು ಆಗಸ್ಟ್ 9ರಂದು ಮಣಿಪಾಲದ ಕೆನರಾ ಬ್ಯಾಂಕ್ ವೃತ್ತ ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಸಚಿನ್ ಶೆಟ್ಟಿ ತಿಳಿಸಿದರು.
ಕುಂದಾಪುರ ತಾಲೂಕಿನ ಚಿತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೈಕಂಬ್ಳಿ ಗ್ರಾಮದಲ್ಲಿ ಹರಿಯುವ ತೋಡಿಗೆ ಶಾಶ್ವತ ಕಾಲುಸಂಕ ನಿರ್ಮಿಸಬೇಕು ಎಂಬ ಗ್ರಾಮಸ್ಥರ ದಶಕದ ಬೇಡಿಕೆ ಇನ್ನೂ ಈಡೇರದ ಹಿನ್ನೆಲೆಯಲ್ಲಿ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಮೇರಿಕದ ಅರಿಜೋನಾ ರಾಜ್ಯದ ಫೀನಿಕ್ಸ್ ಮಹಾನಗರದಲ್ಲಿರುವ ,ಉಡುಪಿ ಪುತ್ತಿಗೆ ಮಠದ ಅಧೀನದ ಶ್ರೀ ವೆಂಕಟಕೃಷ್ಣ ಮಂದಿರದಲ್ಲಿ ವಿರಾಜಮಾನರಾಗಿರುವ ಶ್ರೀ ಪದ್ಮಾವತಿ ದೇವಿಗೆ, ಭಕ್ತರೊಬ್ಬರು ಸುಮಾರು ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟವನ್ನು ಸಮರ್ಪಿಸುತ್ತಿದ್ದಾರೆ.
ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ತಮ್ಮ ಹುದ್ದೆಯ ಘನತೆಗೆ ತಕ್ಕಂತೆ ನಡೆದುಕೊಳ್ಳುತ್ತಿಲ್ಲ.
ನಾಯಿಯೊಂದು ಏಕಾಏಕಿ ರಸ್ತೆಗೆ ಅಡ್ಡ ಬಂದ ಪರಿಣಾಮ ಸ್ಕೂಟರ್ ಸವಾರನೊಬ್ಬ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡ ಘಟನೆ ಕಾಪು ಫ್ಲೈಓವರ್ ಕೆಳಗಿನ ಅಂಡರ್ಪಾಸ್ ಸಮೀಪ ಬುಧವಾರ ಸಂಜೆ ನಡೆದಿದೆ.
ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಕೆಲ ಪ್ರದೇಶಗಳಲ್ಲಿ ಭೂಕುಸಿತದ ಆತಂಕ ಎದುರಾಗಿದ್ದು, ರೆಂಜಾಳ ಗ್ರಾಮದಲ್ಲಿ ಪರಿಸ್ಥಿತಿ ಗಂಭೀರಗೊಂಡಿದೆ.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಬಾರದೆ, ಮೀನುಗಳ ಸಮೃದ್ಧಿ ನೆಲೆಸಿ ಮೀನುಗಾರಿಕೆಗೆ ತೆರಳಿದಾಗ ಯಾವುದೇ ಅಡ್ಡಿ ಆತಂಕಗಳು ಮೀನುಗಾರರಿಗೆ ಎದುರಾಗದಿರಲಿ ಎಂದು ಪ್ರಾರ್ಥಿಸಿ ಗಂಗೊಳ್ಳಿಯಲ್ಲಿ ಮೀನುಗಾರರು ಸಮುದ್ರಪೂಜೆ ನೆರವೇರಿಸಿದರು.
ರಾಷ್ಟ್ರೀಯ ಹೆದ್ದಾರಿ–66ರ ಉದ್ಯಾವರ ಸಮೀಪ ಸಕ್ಕರೆ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ಜಿಲ್ಲಾಡಳಿತವು ಉಡುಪಿ ನಗರದಲ್ಲಿ ಸಂಚರಿಸುವ ಎಲ್ಲಾ ಖಾಸಗಿ ಬಸ್ಗಳಿಗೆ ಕಡ್ಡಾಯವಾಗಿ ಫೋಲ್ಡಿಂಗ್ ಮಾದರಿಯ ಬಾಗಿಲುಗಳನ್ನು ಅಳವಡಿಸಲು ನಿಗದಿಪಡಿಸಿದ್ದ ಜೂನ್ 1ರ ಅಂತಿಮ ಗಡುವು ಮುಗಿದು ತಿಂಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ನಿಯಮ ಪಾಲಿಸದ ಬಸ್ಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 15 ಬಸ್ಗಳಿಗೆ ದಂಡ ವಿಧಿಸಿದರು.
ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ – 66ರ ಕುವೆಂಪು ಶಾಲೆ ಸಮೀಪದಲ್ಲಿರುವ ಗುರು ಬ್ರಹ್ಮ ಜನರಲ್ ಸ್ಟೋರ್ ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಅಂಗಡಿ ಸಂಪೂರ್ಣ ಬೆಂಕಿಗಾಹುತಿಯಾಗಿ ಸುಮಾರು ₹40 ಲಕ್ಷಕ್ಕೂ ಅಧಿಕ ನಷ್ಟ ಉಂಟಾದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ.
ಮಣಿಪಾಲ ಈಶ್ವರನಗರದ ಜನನಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಸಮೀಪ ಯುವಕನ ಮೇಲೆ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ನಿಟ್ಟೆಯ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ನಿಟ್ಟೆ ಗ್ರಾಮದ ರೆಸಿಡೆನ್ಸಿಯೊಂದಕ್ಕೆ ದಾಳಿ ನಡೆಸಿದ ಕಾರ್ಕಳ ಗ್ರಾಮಾಂತರ ಪೊಲೀಸರು, ಇಸ್ಪೀಟು ಜುಗಾರಿ ಆಡುತ್ತಿದ್ದ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಹೋಟೆಲ್ ಮಾಲೀಕರಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.
ಅಬಕಾರಿ ನಿಯಮಗಳ ಪ್ರಕಾರ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಅಥವಾ ಪೂರೈಕೆ ಮಾಡುವ ಬಾರ್ ಹಾಗೂ ಪಬ್ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ.
ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹಾಗೂ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿದರು. ಸ್ಥಳೀಯರಿಂದ ಸಮಸ್ಯೆಗಳು ಹಾಗೂ ತತ್ಕ್ಷಣದ ಪರಿಹಾರದ ಅಗತ್ಯದ ಕುರಿತು ಮಾಹಿತಿ ಪಡೆದರು.
ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಕಾರ್ಕಳ ತಾಲ್ಲೂಕಿನ ಇದು ಗ್ರಾಮದಲ್ಲಿರುವ ಸೇತುವೆ ಮುಳುಗಡೆಯಾಗಿದ್ದು, ನೂರಕ್ಕೂ ಹೆಚ್ಚು ಮನೆಗಳ ಸಂಪರ್ಕ ಕಡಿತಗೊಂಡಿದೆ.
ವೀಕೆಂಡ್ ಹಿನ್ನೆಲೆಯಲ್ಲಿ ಮಲೆನಾಡಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದಟ್ಟಣೆ ಹೆಚ್ಚಾಗಿದೆ.
ವಿಭಜಿತ ಲಯನ್ಸ್ ಜಿಲ್ಲೆ 317Cರ 24ನೇ ಜಿಲ್ಲಾ ಸಂಪುಟ ಪದಗ್ರಹಣ ಸಮಾರಂಭವು ಆಗಸ್ಟ್ 8ರಂದು ಸಂಜೆ 4.30ಕ್ಕೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ ಎಂದು ಲಯನ್ಸ್ನ ಮಾಜಿ ಜಿಲ್ಲಾ ಗವರ್ನರ್ ಹಾಗೂ ಮುಖ್ಯ ಸಲಹೆಗಾರ ಜಯಕರ್ ಶೆಟ್ಟಿ ಇಂದ್ರಾಳಿ ತಿಳಿಸಿದರು.