Showing 20 of 3361 posts • Page 140 of 169
ಕಾಪು ತಾಲೂಕಿನ ಕಟಪಾಡಿಯಲ್ಲಿ ಕೃಷಿ ಉತ್ಪನ್ನಗಳಿಂದ ಅಲಂಕಾರಗೊಂಡ ಆಟೋ ರಿಕ್ಷಾವೊಂದು ಎಲ್ಲರ ಗಮನ ಸೆಳೆಯುತ್ತಿದೆ.
ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.
ಬಹು ದಿನಗಳ ಬೇಡಿಕೆಯ ಹಿರಿಯಡಕ – ಗುಡ್ಡೆಯಂಗಡಿ – ಕಾರ್ಕಳ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ 10 ಕೋಟಿ ಅನುದಾನ ಮಂಜೂರಾಗಿದೆ.
ಕಾರ್ಕಳ ತಾಲೂಕಿನ ಅಜೆಕಾರು ಎಂಬಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಪತ್ನಿಯೇ ಕೊಂದ ಪ್ರಕರಣ ಕೆಲವು ದಿನಗಳ ಹಿಂದೆ ಸಂಭವಿಸಿತ್ತು.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ್ ಹೇರೂರು ಅವರು ಇಂದು ಅಧಿಕಾರ ಸ್ವೀಕಾರ ಮಾಡಿದರು.
ಪೂರ್ಣಪ್ರಿಯಾ ಅವರ ಮೂರೂವರೆ ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಪೂರ್ಣಪ್ರಿಯಾ ಮತ್ತು ಆಕೆಯ ಪ್ರಿಯಕರ ಸುಹೇಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಉಡುಪಿ ನ್ಯಾಯಾಲಯ ತಿರಸ್ಕರಿಸಿದೆ
ನಗರದಲ್ಲಿ ಸರ್ಕಾರದ ದಿಶಾಂಕ್ ಅಪ್ಲಿಕೇಶನ್ನಲ್ಲಿ ಕಾಣಿಸಿಕೊಂಡ ನಂತರ ‘ಸುಲ್ತಾನಪುರ’ ಎಂಬ ಹೆಸರು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು,
ರೈತರ ಜಮೀನುಗಳನ್ನು ವಕ್ಫ ಬೋರ್ಡ್ ಹೆಸರಿಗೆ ನಮೂದಿಸಿದ ರಾಜ್ಯ ಸರ್ಕಾರದ ಧೋರಣೆ ಖಂಡಸಿ ಜಿಲ್ಲಾ ಬಿಜೆಪಿ ವತಿಯಿಂದ ನ.6ರಂದು ಬೆಳಿಗ್ಗೆ 10ಗಂಟೆಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ತಿಳಿಸಿದರು.
ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ನಡೆದಿದೆ.
ಅಭಿಪ್ರಾಯವನ್ನು ವ್ಯಕ್ತಪಡಿಸಲು ಇರುವ ಸೂಕ್ತ ವೇದಿಕೆ ಎಂದರೆ ಭಾಷಣ. ಈ ಮೂಲಕ ಯಾವುದೇ ರೀತಿಯ ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಕುಲಪತಿ ವಂ|ಡಾ| ರೋಶನ್ ಡಿಸೋಜಾ ಹೇಳಿದರು.
ಕಾರ್ಕಳ ವಿಧಾನಸಭಾ ಕ್ಷೇತ್ರದ ಸುಮಾರು 250 ಕಿಂಡಿ ಅಣೆಕಟ್ಟುಗಳು ಸೇರಿದಂತೆ ಉಡುಪಿ ಜಿಲ್ಲೆಯ ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಅಳವಡಿಸಲು ಅನುದಾನ ನೀಡಲು ರಾಜ್ಯ ಕಾಂಗ್ರೆಸ್ ಸರಕಾರದ ಬಳಿ ಹಣವಿಲ್ಲ.
ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ ಹೊಡೆದು ಪುಣ್ಯಕ್ಷೇತ್ರ ದರ್ಶನಕ್ಕೆ ಹೊರಟಿದ್ದ ಪ್ರವಾಸಿಗರು ಗಾಯಗೊಂಡ ದುರ್ಘಟನೆ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.
ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್, ಕುಂತಳನಗರ ಇದರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನ ವತಿಯಿಂದ ಎಂಆರ್ ಜಿ ಗ್ರೂಪ್ ನ ಪ್ರಾಯೋಜಕತ್ವದಲ್ಲಿ ಸತತ 3ನೇ ಬಾರಿಗೆ ಎರಡು ದಿನಗಳ ‘ಬೃಹತ್ ಉದ್ಯೋಗ ಮೇಳ’ ವನ್ನು ಇದೇ ನವೆಂಬರ್ 16 ಮತ್ತು 17ರಂದು ಮಣಿಪುರ ಗ್ರಾಮದ ಕುಂತಳನಗರದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ಆಯೋಜಿಸಲಾಗಿದೆ ಎಂದು ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ ತಿಳಿಸಿದರು.
ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಮಹಿಳೆ ಸಹಿತ ಇಬ್ಬರನ್ನು ಬಂಧಿಸಿದ ಘಟನೆ ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ಉದಯ ನಗರ ಎಂಬಲ್ಲಿ ನಡೆದಿದೆ.
ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ.
ಹೊಸ ಟಿಶರ್ಟ್, ಚಡ್ಡಿ ಧರಿಸಿರುವ ಬೀದಿ ಶ್ವಾನವೊಂದು ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸುವುದು ಗಮನಸೆಳೆಯಿತು. ಒಂದಿಷ್ಟು ಜನರು ಫೋಟೋ ಕ್ಲಿಕ್ಕಿಸಿದರು.
ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಧ್ವಜಾರೋಹಣ ನೆರವೇರಿಸಿದರು.
ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯ ಹಾಗೂ ವಿವಿಧ ಬೇಡಿಕೆಗಳನ್ನು ರಾಜ್ಯ ಸರಕಾರದ ಗಮನ ಸೆಳೆಯುವಲ್ಲಿ ಉಡುಪಿ ಕಾಂಗ್ರೆಸ್ ನಾಯಕರು ವಿಫಲವಾಗಿದ್ದಾರೆ ಆರೋಪಿಸಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆಯ ನೇತೃತ್ವದಲ್ಲಿ ‘ಉಡುಪಿ ಕಾಂಗ್ರೆಸ್ ಹಠಾವೋ-ದಲಿತ್ ಬಚಾವೋ’ ಹೆಸರಿನಡಿ ವಿಶಿಷ್ಟ ಪ್ರತಿಭಟನೆಯನ್ನು ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ನಡೆಸಲಾಯಿತು.
ರಂಗಭೂಮಿ ಉಡುಪಿ ಇದರ 60ರ ಸಂಭ್ರಮದ ಉದ್ಘಾಟನಾ ಸಮಾರಂಭವು ನ. 3ರಂದು ಸಂಜೆ 4.30ಕ್ಕೆ ಉಡುಪಿ ಕುಂಜಿಬೆಟ್ಟಿನ ಶಾರದಾ ರೆಸಿಡೆನ್ಸಿಯಲ್ ಶಾಲೆಯ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ ಎಂದು ರಂಗಭೂಮಿ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.
ಮುಂಬರುವ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದ್ದು, ಸರ್ವೇ ಜನ ಸುಖಿನೋ ಭವಂತು ಅನ್ನೋ ಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೆಲಸ ಮಾಡುತ್ತಿದ್ದು, ಜನರು ನಮ್ಮನ್ನು ಕೈ ಹಿಡಿಯುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.