Showing 20 of 3361 posts • Page 141 of 169
ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿಗಳು ನಿಲ್ಲುವುದಿಲ್ಲ. ಸಾಕಷ್ಟು ಮುಂದಾಲೋಚನೆ ಇಟ್ಟುಕೊಂಡೆ ಪಂಚ ಯೋಜನೆ ಜಾರಿಗೆ ತಂದಿದ್ದೇವೆ. ಮಹಿಳೆಯರ ಆರ್ಥಿಕ ಸಬಲೀಕರಣ ಮಾಡಲು ಗ್ಯಾರಂಟಿ ತಂದಿದ್ದೇವೆ. ಶಕ್ತಿ ಯೋಜನೆ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
2024ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಪ್ರಶಸ್ತಿ ಪುರಸ್ಕೃತರ ವಿವರ ಈ ಕೆಳಕಂಡಂತಿದೆ.
ಉಡುಪಿಯ ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಜಲಪೂರಣ ಹಾಗೂ ಎಣ್ಣೆಶಾಸ್ತ್ರವನ್ನು ಮಾಡಲಾಯಿತು.
ನಮ್ಮಲ್ಲಿರುವ ಕೊಂಕಣಿ ಸಂಪ್ರದಾಯ, ಜಾನಪದ ಸಂಸ್ಕೃತಿ ವಿಶಿಷ್ಠ ಮತ್ತು ವೈವಿಧ್ಯಮಯವಾಗಿದ್ದು ಅದನ್ನು ಉಳಿಸಿ ಪೋಷಿಸುವ ಅಗತ್ಯತೆ ಇದೆ ಎಂದು ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಧರ್ಮಗುರ ಡೆನಿಸ್ ಡೆಸಾ ಹೇಳಿದರು.
ಸ್ಕೂಟಿಯಲ್ಲಿ ಸಾಗುತ್ತಿದ್ದ ಮಹಿಳೆಗೆ ಮಣ್ಣು ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಮಗುಚಿ ಬಿದ್ದು ಮಹಿಳೆ ಮಣ್ಣಿನಡಿ ಸಿಲುಕಿರುವ ಘಟನೆ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿಯಲ್ಲಿ ಸಂಭವಿಸಿದೆ.
ಉಡುಪಿ ಜಿಲ್ಲೆಯಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿದೆ. ಬೈಂದೂರು ತಾಲೂಕಿನಲ್ಲಿ ಚಡ್ಡಿ ಗ್ಯಾಂಗ್ ಮತ್ತೆ ಸಕ್ರಿಯಗೊಂಡಿದೆ.
ಪೇಜಾವರ ಶ್ರೀಗಳ ಬಗ್ಗೆ ಬಿಕೆ ಹರಿಪ್ರಸಾದ್ ಲಘುವಾಗಿ ಮಾತನಾಡಿದ್ದು, ಹಿಂದೂ ಸಮಾಜಕ್ಕೆ ನೋವು ತಂದಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಜಿಲ್ಲಾಡಳಿತ, ಜಿಪಂ, ಆಯುಷ್ ಇಲಾಖೆ ಹಾಗೂ ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಇದರ ಸಹಯೋಗದಲ್ಲಿ ಧನ್ವಂತರಿ ಜಯಂತಿಯ ಅಂಗವಾಗಿ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಅಜ್ಜರಕಾಡಿನ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಆಯೋಜಿಸಲಾಯಿತು.
ಸಿಮೆಂಟ್ ಲಾರಿಯೊಂದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಒತ್ತಿನೆಣೆ ತಿರುವಿನಲ್ಲಿ ಸಂಭವಿಸಿದೆ.
ಕಾಂಗ್ರೆಸ್ ಸರಕಾರ ಮಾಡಿದ್ದ ಒಂದು ತಪ್ಪಿನಿಂದ ಪ್ರಸ್ತುತ ವಿಜಯಪುರ ಜಿಲ್ಲೆಯ ರೈತರು 11,500 ಎಕರೆ ಜಮೀನು ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ. ರೈತರ ಹೆಸರಿನಲ್ಲಿದ್ದ ಪಹಣಿಯನ್ನು ಏಕಾಏಕಿ ವಕ್ಫ್ ಮಂಡಳಿ ಹೆಸರಿಗೆ ಮಾಡಲಾಗಿದೆ.
ಸವಾರನೊಬ್ಬ ದ್ವಿಚಕ್ರ ವಾಹನ ಸಹಿತ ಹೊಂಡಕ್ಕೆ ಬಿದ್ದ ಘಟನೆ ಸಂತೆಕಟ್ಟೆ ಓವರ್ಪಾಸ್ ಕಾಮಗಾರಿ ಪ್ರದೇಶದಲ್ಲಿ ಸಂಭವಿಸಿದೆ.
ಜಾತಿ ಗಣತಿ ವಿಚಾರದಲ್ಲಿ ಸ್ವಾಮೀಜಿ ಪುಡಿ ರಾಜಕಾರಣಿಗಳಂತೆ ಹೇಳಿಕೆ ನೀಡುತ್ತಿದ್ದಾರೆ’ ಎಂದು ಬಿ.ಕೆ.ಹರಿ ಪ್ರಸಾದ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಸಾಯಿಬ್ರಕಟ್ಟೆ ಶಾಖೆಯು ಬ್ರಹ್ಮಾವರ- ಹಾಲಾಡಿ ಮುಖ್ಯರಸ್ತೆಯಲ್ಲಿರುವ ಸಾಯಿಬ್ರಕಟ್ಟೆ ಎಸ್.ಎಸ್. ಕಾಂಪ್ಲೆಕ್ಸ್ ನೆಲ ಅಂತಸ್ತಿಗೆ ಸ್ಥಳಾಂತರಗೊಂಡಿದ್ದು, ಸಂಪೂರ್ಣ ಹವಾನಿಯಂತ್ರಿತ ಸ್ಥಳಾಂತರ ಶಾಖೆ ಹಾಗೂ ಎಟಿಎಂ ಉದ್ಘಾಟನೆಗೊಂಡಿತು.
ಟೀಂ ಯುವ ಟೈಗರ್ಸ್ ಮತ್ತು ಯುವ ಸೇವಾ ಸಂಘ ದುಗ್ಲಿಪದವು ಮಂಚಿ ಇವರ ಪರೋಪಕಾರಾಯ ಪುಣ್ಯಾಯ ಎಂಬ ಕಾರ್ಯಕ್ರಮದಡಿಯಲ್ಲಿ ಅಷ್ಟಮಿ ಹಾಗೂ ನವರಾತ್ರಿ ಸಂದರ್ಭದಲ್ಲಿ ವೇಷ ಧರಿಸಿ ಸಂಗ್ರಹಿಸಿದ ಮೊತ್ತದ ವಿತರಣಾ ಸಮಾರಂಭ ದುಗ್ಲಿಪದವು ಸಮುದಾಯ ಭವನದಲ್ಲಿ ನಡೆಯಿತು.
ದೇವರ ಹೆಸರಿನಲ್ಲಿ ಜನರನ್ನು ವಂಚಿಸಿ ಶಾಸಕರಾಗಿರುವುದು ಇಡೀ ಜಗತ್ತಿನಲ್ಲಿ ಸುನೀಲ್ ಕುಮಾರ್ ಒಬ್ಬರೇ. ಇವರನ್ನು ಹಿಂದು ಧರ್ಮದಿಂದ ಬಹಿಷ್ಕರಿಸಬೇಕು.
ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್ಶಿಪ್ ಬಳಿ ನಡೆದಿದೆ.
ಪದೇ ಪದೇ ಅಪರಾಧ ಪ್ರಕರಣಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಉಡುಪಿ ನಗರಸಭೆ ವ್ಯಾಪ್ತಿಯ ಮಣಿಪಾಲದ ಈಶ್ವರ ನಗರದಲ್ಲಿರುವ ಕಟ್ಟಡ ಸಂಖ್ಯೆ 4-94E4 ರಲ್ಲಿ ನಡೆಸುತ್ತಿರುವ Dee-Tee (ಭವಾನಿ) ಲಾಡ್ಜಿಂಗ್ ಆ್ಯಂಡ್ ರೆಸ್ಟೋರೆಂಟ್ ಹಾಗೂ ಮಣಿಪಾಲ-ಪೆರಂಪಳ್ಳಿ ರಸ್ತೆಯ ಕಟ್ಟಡ ಸಂಖ್ಯೆ 2-7E, E1, E2, E3, E4, E5ರಲ್ಲಿ ಶಾಂಭವಿ ಅಸೋಸಿಯೇಟ್ಸ್ ನ 7th Heaven (Ecstays) ಬಾರ್ ಆ್ಯಂಡ್ ರೆಸ್ಟೋರೆಂಟ್ ನ ಉದ್ದಿಮೆ ಪರವಾನಿಗೆಯನ್ನು ನಗರಸಭೆ ರದ್ದುಪಡಿಸಿದೆ.
ಮಳೆ ಮತ್ತು ಪ್ರಾಕೃತಿಕ ವಿಕೋಪದಿಂದಾಗಿ ತೀವ್ರ ಹಾನಿಗೀಡಾಗಿರುವ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಮರು ನಿರ್ಮಾಣಕ್ಕಾಗಿ 13 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಕಿವುಡರ ಕ್ಷೇಮಾಭಿವೃದ್ಧಿ ಸಂಘದ 10ನೇ ವರ್ಷದ ಸಂಭ್ರಮ ಕಾರ್ಯಕ್ರಮ ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ ಇಂದು ನಡೆಯಿತು. ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಲಯನ್ಸ್, ರೋಟರಿ ಸದಸ್ಯರು ಹಾಗೂ ಸಾರ್ವಜನಿಕರಿಗೆ ನ.9ರಂದು ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ “ನನ್ನ ನಾಡು ನನ್ನ ಹಾಡು” ಎಂಬ ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮ ಸಂಯೋಜಕ ನಂದಕಿಶೋರ್ ಕೆಮ್ಮಣ್ಣು ಹೇಳಿದರು.