Showing 20 of 3085 posts • Page 142 of 155
ಕರ್ನಾಟಕದ ಉಮಿಕ್ಕಲ್ ಬೆಟ್ಟದಲ್ಲಿರುವ 33 ಅಡಿ ಎತ್ತರದ ಪರಶುರಾಮನ ಪ್ರತಿಮೆಯ ಶಿಲ್ಪಿ ತನಿಖೆಯ ಹೆಸರಿನಲ್ಲಿ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಬಳಿಕ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು 37 ವರ್ಷಗಳ ಕಾಲ ಜೈಲುಶಿಕ್ಷೆ
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ಬೆಂಗಳೂರಿನ ಗೋಡೌನ್ನಲ್ಲಿ ಸ್ಥಳ ಮಹಜರು ಮಾಡಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಕಾರ್ಕಳ ಟೌನ್
29 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೃಷ್ಣ ಭಂಡಾರಿ ಬಂಧಿತ ಆರೋಪಿ.
ಉಡುಪಿ ಜಿಲ್ಲೆಯಲ್ಲಿ ಮೀನುಗಾರಿಕಾ ಋತು ಆರಂಭಗೊಂಡಿದೆ. ಜುಲೈ 31ಕ್ಕೆ ಯಾಂತ್ರೀಕೃತ ದೋಣಿಗಳ ಮೀನುಗಾರಿಕೆ ನಿಷೇಧದ ಅವಧಿ ಕೊನೆಗೊಂಡಿದೆ.
ಬಾಡಿಗೆ ಮಾಡುವ ವಿಚಾರಕ್ಕೆ ಸಂಬಂಧಿಸಿ ಆಟೋ ಚಾಲಕರ ತಂಡವೊಂದು ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉಡುಪಿ ನಗರದಲ್ಲಿ ಇಂದು ನಡೆದಿದೆ.
ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ‘ಕೃತಕ ನೆರೆ ಹಾವಳಿ- ಬೆಂಕಿ ದುರಂತ- ಭೂಕುಸಿತ: ಒಂದು ಚರ್ಚೆ’ ಕಾರ್ಯಕ್ರಮವನ್ನು ಉಡುಪಿ ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಲಾಯಿತು.
ಈಚರ್ ಲಾರಿಗೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹೈಕಾಡಿಯಲ್ಲಿ ನಡೆದಿದೆ.
ಸಪ್ತಪದಿ ತುಳಿದು ಬಳಿಕ ಸಂಸಾರದಲ್ಲಿ ಒಂದಾಗಿ ಬದುಕು ಕಟ್ಟಿಕೊಂಡ ದಂಪತಿಗಳು ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಕೋಟ ಸಮೀಪದ ಬನ್ನಾಡಿ ಕಂಬಳಕಟ್ಟು ಎಂಬಲ್ಲಿ ನಡೆದಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಸೌಪರ್ಣಿಕ ನದಿ ತೀರದಲ್ಲಿ ಮತ್ತೆ ನೆರೆ ಸೃಷ್ಟಿಯಾಗಿದೆ. ಇದರಿಂದ ಬೈಂದೂರು ತಾಲೂಕಿನ ನಾವುಂದ ಕುದ್ರುವಿನಲ್ಲಿ ಸತತ ಮೂರನೇ ಬಾರಿಗೆ ನೆರೆಹಾವಳಿ ಉಂಟಾಗಿದೆ.
ಉಡುಪಿ ಶ್ರೀಕೃಷ್ಣಮಠ ಪುತ್ತಿಗೆ ಪರ್ಯಾಯ ಮಠದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವೈಭವ ಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಒಂದು ತಿಂಗಳ ಕಾಲ ಹಮ್ಮಿಕೊಂಡಿರುವ ಶ್ರೀಕೃಷ್ಣ ಮಾಸೋತ್ಸವಕ್ಕೆ ಕೃಷ್ಣಮಠದ ರಾಜಾಂಗಣದಲ್ಲಿ ಚಾಲನೆ ನೀಡಲಾಯಿತು.
ನಾಲ್ವರು ಮುಸುಕುಧಾರಿಗಳ ತಂಡವೊಂದು ಅಪಾರ್ಟ್ ಮೆಂಟ್ ವೊಂದರಲ್ಲಿ ದರೋಡೆಗೆ ವಿಫಲ ಯತ್ನ ನಡೆಸಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಿರ್ವ -ಕಟಪಾಡಿ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ರಸ್ತೆ ಉದ್ದಕ್ಕೂ ಹೊಂಡ ಗುಂಡಿಗಳು ಬಿದ್ದಿವೆ. ನಿತ್ಯ ವಾಹನ ಸವಾರರು ಸರ್ಕಸ್ ಮಾಡಿಕೊಂಡೆ ಹೋಗಬೇಕಾದ ದುಸ್ಥಿತಿ ನಿರ್ಮಾಣಗೊಂಡಿದೆ.
ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಲವೆಡೆ ಭಾರಿ ಅನಾಹುತಗಳು ಸಂಭವಿಸಿದ್ದು, ಓಡಾಡಲು ಕಷ್ಟಕರವಾಗಿದೆ, ಇತ್ತ ಮಕ್ಕಳಿಗೂ ಶಾಲೆಗೆ ಹೋಗುವುದು ಕಷ್ಟವಾದ್ದರಿಂದ,
ಖಾಸಗಿ ಬಸ್ ವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಮುಖ್ಯೋಪಾಧ್ಯಾಯರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಲ್ಪೆ ಕಲ್ಮಾಡಿಯಲ್ಲಿ ಇಂದು ನಡೆದಿದೆ.
ವಾಲ್ಮೀಕಿ ನಿಗಮದ ಸುಮಾರು 187 ಕೋಟಿ ರೂ. ಹಾಗೂ 5 ಸಾವಿರ ಕೋಟಿ ರೂ. ಮೊತ್ತದ ಮುಡಾ ಹಗರಣದ ಮೂಲಕ ಕಾಂಗ್ರೆಸ್ ಸರಕಾರ ರಾಜ್ಯದ ಜನತೆಗೆ ದ್ರೋಹ ಎಸಗಿದೆ.
ಯಕ್ಷಧ್ರುವ ಫೌಂಡೇಶನ್ ಕಲಾತಂಡದ ಕಲಾವಿದರು ಪುತ್ತಿಗೆ ಮಠದ ಪ್ರಥಮ ದೇವಾಲಯ ಅಮೆರಿಕಾದ ಫೀನಿಕ್ಸ್ ನಲ್ಲಿರುವ ಶ್ರೀವೆಂಕಟ ಕೃಷ್ಣ ಕ್ಷೇತ್ರದಲ್ಲಿ ‘ದೇವೀ ಮಾಹಾತ್ಮೆ’ ಯಕ್ಷಗಾನ ಪ್ರದರ್ಶಿಸಿದರು.
ಉಡುಪಿ ಜಿಲ್ಲೆಯಲ್ಲಿ ಮತ್ತೆ ಮಳೆ ಮುಂದುವರಿದಿದೆ. ಜಿಲ್ಲೆಯ ಕಾಪು, ಉಡುಪಿ, ಹೆಬ್ರಿ ಬೈಂದೂರು ಕುಂದಾಪುರ ತಾಲೂಕಿನಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೈಂದೂರು ತಾಲೂಕಿನ ನಾಗೂರಿನಲ್ಲಿ ಬಾವಿಯೊಂದರಲ್ಲಿ ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿದ್ದ ಬೃಹತ್ ಗಾತ್ರದ ಮೊಸಳೆ ಕೊನೆಗೂ ಸೆರೆ ಸಿಕ್ಕಿದೆ. ತೋಟದ ಬಾವಿಯಲ್ಲಿದ್ದ ಮೊಸಳೆ ಸೆರೆಗೆ ನಿನ್ನೆಯಿಂದ ಅರಣ್ಯ ಇಲಾಖೆ ಹರಸಾಹಸ ಪಟ್ಟಿತ್ತು
ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ 10 ದಿನಕ್ಕೆ ಕಾಲಿಟ್ಟಿದೆ.