Showing 20 of 3100 posts • Page 144 of 155
ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಹಾಗೂ ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಪು ಶಾಸಕರ ಇಚ್ಛಾಶಕ್ತಿಯ ಕೊರತೆಯಿಂದ ಕ್ಷೇತ್ರಕ್ಕೆ ಅನುದಾನ ಬರುತ್ತಿಲ್ಲ ಎಂದು ವಿಜಯಕುಮಾರ್ ಸೋರಕೆ ಕಿಡಿ ಕಾರಿದ್ದಾರೆ.
ನಂದಿಕೂರು ಗ್ರಾಮದ ದೇವರ ಕಾಡು ಪ್ರದೇಶದಲ್ಲಿ ಮೂರು ತಿಂಗಳನಿಂದ ಕಾರ್ಯಾಚರಿಸುತ್ತಿರುವ ‘ಎಮ್ 11 ಇಂಡಸ್ಟ್ರಿ ಬಯೋ ಡೀಸೆಲ್ ಹಾಗೂ ಫಾಮ್ ಆಯಿಲ್ ಘಟಕ’ ದಿಂದ ವಿಷ ಅನಿಲ ಹಾಗೂ ಕೆಮಿಕಲ್ ಮಿಶ್ರಿತ ಆಯಿಲ್ ಹೊರ ಬಿಡಲಾಗುತ್ತಿದೆ.
ಟಿಪ್ಪರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣೆ ವ್ಯಾಪ್ತಿಯ ಪುಲ್ಕೇರಿ ಎಂಬಲ್ಲಿ ನಡೆದಿದೆ.
ಐಟಿ ಅಧಿಕಾರಿಗಳ ಸೋಗಿನಲ್ಲಿ ಬಂದ ಅಪರಿಚಿತ ತಂಡವೊಂದು ಉದ್ಯಮಿಯೊಬ್ಬರ ಮನೆಯಲ್ಲಿ ದರೋಡೆಗೆ ವಿಫಲ ಯತ್ನ ನಡೆಸಿದ ಘಟನೆ ಬ್ರಹ್ಮಾವರ ತಾಲೂಕಿನ ಮಣೂರಿನಲ್ಲಿ ನಡೆದಿದೆ.
ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಶೋಚನೀಯ ರೀತಿಯಲ್ಲಿ ಜೀವನ ಸಾಗಿಸುತ್ತಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ವಸತಿ, ನಿವೇಶನ, ಮಕ್ಕಳಿಗೆ ಶಿಕ್ಷಣ ಮುಂತಾದ ಎಲ್ಲಾ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ.
ಮಾಜಿ ಶಾಸಕರೊಬ್ಬರ ಒತ್ತಡದಿಂದ ದಕ್ಷ ಅಧಿಕಾರಿಯಾದ ಕುಂದಾಪುರ ಉಪವಿಭಾಗದ ಎಸಿ ರಶ್ಮಿ ಎಸ್.ಆರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ ಅನ್ನೋ ಆರೋಪ ಮಾಡಲಾಗಿದೆ.
ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ಉಡುಪಿ ಪೆರಂಪಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಚಿರತೆ ಓಡಾಟದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೊರಗ ಸಮುದಾಯದ ಯುವಜನರಿಗೆ ಉದ್ಯೋಗ ಹಾಗೂ ಕ್ರಷಿ ಭೂಮಿ ಹಕ್ಕು ಪತ್ರ ಮಂಜೂರಾತಿಗಾಗಿ ಒತ್ತಾಯಿಸಿ ಕೊರಗಾಭಿವ್ರದ್ಧಿ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಧರಣಿ ಸತ್ಯಾಗ್ರಹ
ಹಿರಿಯಡ್ಕ ಸಮೀಪ ಕುಕ್ಕೆಹಳ್ಳಿ ಬಜೆ ಬಳಿ ಶುಕ್ರವಾರ ನಸುಕಿನ ವೇಳೆ 2 ಗಂಟೆ ಸುಮಾರಿಗೆ ಬೀಸಿದ ಸುಂಟರಗಾಳಿಗೆ ತೆಂಗಿನಮರ ಬಿದ್ದು, ಮನೆ ಹಾಗೂ ಎರಡು ರಿಕ್ಷಾಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ.
ಕೇಂದ್ರ ಬಜೆಟ್ ನಲ್ಲಿ ರಾಜ್ಯ ಸರಕಾರದ ಅವಗಣನೆ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೈಯಲ್ಲಿ ಚೊಂಬು ಹಿಡಿದುಕೊಂಡು ಇಂದು ಪ್ರತಿಭಟನೆ ನಡೆಸಿದರು.
ಕಾಡುಕೋಣವೊಂದು ಬಸ್ ಗೆ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಆವರ್ಸೆ ಮಾವಿನಕಟ್ಟೆ ಎಂಬಲ್ಲಿ ನಡೆದಿದೆ. ರಸ್ತೆ ದಾಟುವ ಧಾಂವತದಲ್ಲಿ ಕಾಡುಕೋಣ ಬಸ್ ಗೆ ಡಿಕ್ಕಿ ಹೊಡೆದಿದೆ.
ನಟ ದರ್ಶನ್ ಜೈಲು ಪಾಲಾಗಿರುವುದು ಕೇವಲ ದರ್ಶನ್ ಅವರಿಗಷ್ಟೇ ಅಲ್ಲದೆ ಅವರ ಪತ್ನಿ, ಮಗ, ತಾಯಿ ಮತ್ತು ಸೋದರ ದಿನಕರ್ ಗೆ ಕೂಡ ಅಪಾರ ಬೇಸರ, ಕಷ್ಟ ತಂದೊಡ್ಡಿದೆ.
ಮರವಂತೆ ಬೀಚ್ನಲ್ಲಿ ವಾಹನಗಳ ಪಾಕಿಂìಗ್ ವ್ಯವಸ್ಥೆ ಹಾಗೂ ಆಹಾರ ಮಳಿಗೆಗಳ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಉತ್ತರಿಸಿದರು.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಜೈಲು ಸೇರಿದ್ದು, ಇವತ್ತು ಕೋರ್ಟ್ ಕೂಡ ದರ್ಶನ್ ಮನೆ ಊಟಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಪೊಲೀಸರು ಕೊಲೆ ಪ್ರಕರಣದ ಚಾರ್ಜ್ಶೀಟ್ ರೆಡಿ ಮಾಡುತ್ತಿದ್ದಾರೆ.
ಭಾರೀ ಗಾಳಿ-ಮಳೆಯಿಂದಾಗಿ ಮನೆಯೊಂದರ ಮೇಲೆ ಮರ ಬಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿಯಲ್ಲಿ ನಡೆದಿದೆ.
ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದ ನಿರ್ದೇಶಕರಾದ ಅರುಣ್ ಕುಮಾರ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.
ನಿಟ್ಟೆ ವಿದ್ಯಾ ಸಂಸ್ಥೆ ಮತ್ತು ನಿಟ್ಟೆ ರೋಟರಿ ಕ್ಲಬ್ ನ ಸಹಯೋಗದಿಂದ ನಿಟ್ಟೆ ಗ್ರಾಮದ ಆಸುಪಾಸಿನ ಸುಮಾರು 10 ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕಗಳನ್ನು ನೀಡಲಾಯಿತು.
ಉಡುಪಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನಗರದ ಹಲವು ರಸ್ತೆಗಳು ಹೊಂಡಗಳಿದ್ದ ತುಂಬಿಹೋಗಿವೆ. ಭಾರಿ ಮಳೆಗೆ ರಸ್ತೆ ಹೊಂಡಗಳಲ್ಲಿ ನೀರು ತುಂಬಿದ್ದು, ಸವಾರರು ತೀವ್ರ ಕಷ್ಟಪಡುವಂತಾಗಿದೆ.
ಪ್ರತಿಭಾವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮೋಸ ಮಾಡುತ್ತಿದೆ. ಸಮಾಜ ಕಲ್ಯಾಣ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯ ಮಾಡಿದೆ.