Showing 20 of 3361 posts • Page 145 of 169
ಪಂಚಮಿ ಟ್ರಸ್ಟ್, ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಹೇಳಿದರು.
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘದ ಶತಮಾನೋತ್ಸವ ಆಚರಣೆಯ “ಶತಾಭಿವಂದನಂ- 2023” ಕಾರ್ಯಕ್ರಮದ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕೆಮ್ಮಣ್ಣುವಿನ ದಿ. ರಾಜಗೋಪಾಲ್ ಭಟ್ ವೇದಿಕೆಯಲ್ಲಿ ನಡೆಯಿತು.
ನಾಪತ್ತೆಯಾಗಿದ್ದ ಮಲ್ಪೆ ಬಾಪು ತೋಟದ ನಿವಾಸಿ ಜಲೀಲ್ (49) ಎಂಬವರ ಮೃತದೇಹವು ಪಡುಕೆರೆ ಮಟ್ಟು ಸಮೀಪದ ಪಾಪನಾಶಿನಿ ನದಿಯಲ್ಲಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.
ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆಯ ಮುಖಂಡನೋರ್ವನನ್ನು ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಬ್ರಾಹ್ಮ ಮುಹೂರ್ತದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸಕ್ಕೆ ಚಾಲನೆ ನೀಡಲಾಯಿತು.
ಕೌನ್ ಬನೇಗಾ ಕರೋಡ್ಪತಿ (ಕೆಬಿಸಿ) ಯಲ್ಲಿ ಕರಾವಳಿ ಮೂಲದ ಕಾರ್ಕಳ ತಾಲೂಕಿನ ನಿಂಜೂರು ಮೂಡುಮನೆಯ ಡಾ. ಶ್ರೀಶ್ ಸತೀಶ್ ಶೆಟ್ಟಿ ಅವರು 12.5 ಲಕ್ಷ ರೂ. ಗೆದ್ದುಕೊಂಡಿದ್ದಾರೆ.
ಕುಂದಾಪುರ ಕಲಾಕ್ಷೇತ್ರದ ಸಾರಥ್ಯದಲ್ಲಿ ಕುಂದಾಪುರ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಕುಂದಾಪುರ ಹುಲಿ ಕುಣಿತ ನಡೆಯಿತು.
ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದು, ದೇಶದ ಭದ್ರತೆಯ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರದ ಗೃಹ ಇಲಾಖೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ ಮಾಡಿದ್ದಾರೆ.
ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ನಡೆದಿದೆ.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆಯಲ್ಲಿ ನವರಾತ್ರಿಯ ಹಿನ್ನೆಲೆಯಲ್ಲಿ ವೇಷಧಾರಿಗಳಿಬ್ಬರು ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷಧರಿಸಿದ್ದು, ಇದೀಗ ಈ ವೇಷ ಸಾಮಾಜಿಕ ಜಾಲತಾಣದಲ್ಲಿ
ಉಡುಪಿ ಶ್ರೀಕೃಷ್ಣಮಠದಲ್ಲಿ ಕದಿರುಕಟ್ಟುವ ಹಬ್ಬವು ಶನಿವಾರ ಸಂಭ್ರಮದಿಂದ ನಡೆಯಿತು. ಮಠದ ಪುರೋಹಿತರು ಸಮೀಪದ ಗದ್ದೆಯಲ್ಲಿ ನೂತನವಾಗಿ ಬೆಳೆದ ಭತ್ತದ ಕದಿರಿಗೆ ಪೂಜೆ ಸಲ್ಲಿಸಿದ ಬಳಿಕ ರಥಬೀದಿಗೆ
ದೇಶದ ದಿಗ್ಗಜ ಉದ್ಯಮಿ ರತನ್ ಟಾಟಾ ಇಹಲೋಕ ತ್ಯಜಿಸಿದ್ದಾರೆ. ಭಾರತದ ಮುಂಚೂಣಿ ಉದ್ಯಮಿಯಾಗಿದ್ದ ಅವರು ಸರಳತೆಗೆ ಹೆಸರುವಾಸಿಯಾಗಿದ್ದರು. ಸದಾ ಮಾಮೂಲಿ ಧಿರಿಸು ತೊಡುವುದರ
ಬ್ರಹ್ಮಾವರ, ತೀರ್ಥಹಳ್ಳಿ, ಕೊಪ್ಪದಲ್ಲಿ ವಸ್ತ್ರ ವೈವಿಧ್ಯಗಳ ಮಾರಾಟ ಮತ್ತು ಸೇವೆಗೆ ಹೆಸರುವಾಸಿಯಾದ 75 ವರ್ಷಗಳಿಂದ ಗ್ರಾಹಕರ ಮನೆಮಾತಾಗಿರುವ ‘ಸತ್ಯನಾಥ ಸ್ಟೋರ್ಸ್’ನ ನೂತನ ಶಾಖೆ “ಶ್ರೀರಾಮ್ ಟೆಕ್ಸ್ ಟೈಲ್ಸ್” ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಮುಖ್ಯರಸ್ತೆಯ ಓಂಶ್ರೀ ಸಂಕೀರ್ಣದಲ್ಲಿ ಉದ್ಘಾಟನೆಗೊಂಡಿತು.
ಉಡುಪಿಯ ಲೋಂಬಾರ್ಡ್ ಮೆಮೋರಿಯಲ್ ಹಾಸ್ಪಿಟಲ್(ಮಿಷನ್ ಆಸ್ಪತ್ರೆ) ಆವರಣದಲ್ಲಿ ನೂತನವಾಗಿ ಆರಂಭಿಸಲಾದ ಎಲ್ಎಂಎಚ್ ಕ್ಯಾಂಟೀನ್(ಡಾಕ್ಟರ್ಸ್ ಕಿಚನ್) ಗುರುವಾರ ಉದ್ಘಾಟನೆಗೊಂಡಿತು.
ರೈಲು ಡಿಕ್ಕಿ ಹೊಡೆದು ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೆ ಮೇಲ್ಸೇತುವೆಯಲ್ಲಿ ಸಂಭವಿಸಿದೆ. ರೈಲ್ವೆ ಹಳಿ ದಾಟುತ್ತಿರುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಕಳೆದ ನಾಲ್ಕು ದಶಕಗಳಿಂದ ಜವಳಿ ವ್ಯವಹಾರದಲ್ಲಿ ಮನೆಮಾತಾಗಿರುವ ಆರ್ಕೆ ಸಹೋದರು ಇದೀಗ ನಗರದ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ತಮ್ಮ ಗೀತಾಂಜಲಿ ಸಿಲ್ಕ್ಸ್ ನಲ್ಲಿ ನೂತನವಾಗಿ ಆರಂಭಿಸಿರುವ ಪುರುಷರ ಪ್ರತ್ಯೇಕ ವಿಭಾಗವನ್ನು ಗ್ರಾಹಕರಿಂದಲೇ ಉದ್ಘಾಟಿಸಲಾಯಿತು.
ಅಕ್ರಮವಾಗಿ ಪಟಾಕಿ ದಾಸ್ತಾನಿಟ್ಟ ಆರೋಪದಲ್ಲಿ ಮನೆಯೊಂದಕ್ಕೆ ದಾಳಿ ನಡೆಸಿದ ಬೈಂದೂರು ಪೊಲೀಸರು 4 ಲಕ್ಷ ರೂ. ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡ ಘಟನೆ ಬೈಂದೂರು ತಾಲೂಕಿನ ಉಪ್ಪುಂದದ ಕಂಚಿಕಾನ್ ಎಂಬಲ್ಲಿ ನಡೆದಿದೆ.
ರಸ್ತೆ ದಾಟುತ್ತಿದ್ದ ದಂಪತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪತಿ ಸ್ಥಳದಲ್ಲೇ ಮೃತಪಟ್ಟು, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಕಾಪು ತಾಲೂಕಿನ ಮೂಳೂರು ಮಿರ್ಚಿ ಹೋಟೆಲ್ ಎದುರು ರಾಷ್ಟ್ರೀಯ
ಜಾತಿಗಣತಿ ವರದಿ ಓದದೇ ವಿರೋಧ ಮಾಡಬೇಡಿ. ವರದಿ ಓದಿದ ಬಳಿಕ ಬದಲಾವಣೆಗಳಿದ್ದರೆ ಸೂಚಿಸಿ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದ್ರಾಳಿ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಬುಧವಾರ ನಡೆದಿದೆ.