Showing 20 of 3361 posts • Page 146 of 169
ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯರಿಬ್ಬರು ನಕಲಿ ಚಿನ್ನ ಕೊಟ್ಟು ಹೊಸ ಚಿನ್ನ ಖರೀದಿಸಿ ಪರಾರಿಯಾದ ಘಟನೆ ಕುಂದಾಪುರ ನಗರದ ಅಪೂರ್ವ ಜ್ಯುವೆಲ್ಲರ್ಸ್ ನಲ್ಲಿ ನಡೆದಿದೆ.
ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಅವರಿಗೆ ಅನಾರೋಗ್ಯದ
ಕಳೆದ ಎರಡುವರೆ ತಿಂಗಳಿನಿಂದ ತೀರಾ ಅನಾರೋಗ್ಯಕ್ಕೀಡಾಗಿ ನಡೆದಾಡಲಾಗದೆ ಸಂಕಟ ಪಡುತ್ತಿದ್ದ ವ್ಯಕ್ತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಹೊಸಬೆಳಕು ಆಶ್ರಮಕ್ಕೆ ದಾಖಲಿಸಿದ್ದು, ಆಶ್ರಮದ ಉಪಚಾರಕ್ಕೆ ಇದೀಗ ವ್ಯಕ್ತಿ ಗುಣಮುಖರಾಗಿ ತನ್ನ ಕುಟುಂಬವನ್ನು ಸೇರುವಲ್ಲಿ ಯಶಸ್ವಿಯಾಗಿದ್ದಾರೆ.
ವಾಹನವೊಂದರಿಂದ ತೈಲ ಸೊರಿಕೆಯಾದ ಪರಿಣಾಮ ಹಲವು ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಉರುಳಿ ಬಿದ್ದ ಘಟನೆ ನಗರದ ಸಿಟಿ ಬಸ್ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
‘ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ’ಯ ಅಂಗವಾಗಿ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ ವಿದ್ಯಾರ್ಥಿ ವ್ಯವಹಾರಗಳ ವಿಭಾಗವು ಅ.7ರಿಂದ 12ರವರೆಗೆ ಮಾನಸಿಕ ಆರೋಗ್ಯ
ಕಾರೊಂದು ಬೈಕ್ ಢಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಅ.7 ರ ಸೋಮವಾರ ರಾತ್ರಿ 10.30ರ ಸುಮಾರಿಗೆ ಉಡುಪಿ ಎಂಜಿಎಂ ಕಾಲೇಜು ಎದುರಿನ ಡೈವರ್ಶನ್
ಜಿಲ್ಲೆಯ ಹಲವೆಡೆ ಸೋಮವಾರ ರಾತ್ರಿ ಧಾರಾಕಾರ ಮಳೆಯ ಜತೆಗೆ ಗುಡುಗು, ಸಿಡಿಲು ಜನ ಸಾಮಾನ್ಯರಲ್ಲಿ ಆತಂಕ ಸೃಷ್ಟಿಮಾಡಿತು. ತಗ್ಗು ಪ್ರದೇಶದಲ್ಲಿ ನೀರು ನಿಂತು ಸಮಸ್ಯೆ ಉಂಟಾಯಿತು.
ಅಕ್ಟೋಬರ್ 4 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಗ್ರಾಮ ಪಂಚಾಯಿತಿಗಳ ಸೇವೆಯನ್ನು ಸ್ಥಗಿತಗೊಳಿಸಿ ನಡೆಸುತ್ತಿರುವ ಮುಷ್ಕರ ಜಿಲ್ಲಾ ಕೇಂದ್ರಗಳಿಗೆ ಸ್ಥಳಾಂತರಗೊಂಡಿದೆ.
ಹೆಬ್ರಿ ತಾಲೂಕಿನ ಮುದ್ರಾಡಿಯಲ್ಲಿ ನಿನ್ನೆ ಮೇಘಸ್ಪೋಟದ ಮಾದರಿಯಲ್ಲಿ ಏಕಾಏಕಿ ಸುರಿದ ಮಳೆಗೆ ಕೊಚ್ಚಿ ಹೋಗಿದ್ದ ವೃದ್ಧೆಯ ಮೃತದೇಹ ಇಂದು ಪತ್ತೆಯಾಗಿದೆ.
ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮಧ್ಯಾಹ್ನ 4.30 ರ ಸುಮಾರಿಗೆ ಮೇಘಸ್ಫೋಟವಾಗಿದ್ದು, ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ.
ಅಕ್ರಮವಾಗಿ ಗೋವಾ ಸಮುದ್ರ ಗಡಿಯನ್ನು ಪ್ರವೇಶಿಸಿ ಬುಲ್ ಟ್ರಾಲಿಂಗ್ ಮಾಡುತ್ತಿದ್ದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಮಲ್ಪೆಯಿಂದ ಸಮುದ್ರಕ್ಕಿಳಿದು ಮೀನುಗಾರಿಕೆ ನಡೆಸುತ್ತಿದ್ದ 2 ಬೋಟ್ ಗಳನ್ನು ಗೋವಾ ಸರ್ಕಾರ ವಶಪಡಿಸಿಕೊಂಡಿದೆ.
ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ
‘ಅನಾಥಾಶ್ರಮಗಳೊಂದಿಗೆ ನಾವು ನೀವು’ ಎಂಬ ಶೀರ್ಷಿಕೆ ಅಡಿಯಲ್ಲಿ ಸುಧೀರ್ ಶೆಟ್ಟಿ ಮಲ್ಯಾಡಿ, ಮಂಜು ಸೈಬರ್ ಕಟ್ಟೆ, ಗಣೇಶ ಶೆಟ್ಟಿ ಉಳ್ಳೂರು ಇವರ ನೇತೃತ್ವದ ತಂಡದ ನೆರವಿನ ಹೊರೆ ಕಾಣಿಕೆಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ವಿಟ್ಟಲ್ ಶೆಟ್ಟಿ ಕೊರ್ಗಿ ಅವರು ಉದ್ಘಾಟಿಸಿದರು.
ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ 200 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಕಿತ್ತೂರಿನಲ್ಲಿ ಹಮ್ಮಿಕೊಂಡಿರುವ ಉತ್ಸವದ ಭಾಗವಾದ ಕಿತ್ತೂರು
ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಡಲಾಗಿದ್ದು, ಉಡುಪಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ನವರಾತ್ರಿ ಉತ್ಸವವನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತಿದೆ. ಇದೀಗ ಹಬ್ಬದ ಮೆರುಗು ಮನೆ ಮನೆಗಳಲ್ಲೂ ಕಾಣಬಹುದಾಗಿದೆ. ಮೈಸೂರು ಭಾಗಗಳಲ್ಲಿ ಹೆಚ್ಚು ಜನಜನಿತವಾಗಿರುವ
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೇರಿ ಕ್ರಾಶ್ ಗಾರ್ಡ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಕೀಯಾ
ಜಿಲ್ಲೆಯ ಉಪ್ಪುಂದದ ಸ್ಥಳೀಯ ಓವರ್ ಹೆಡ್ ಟ್ಯಾಂಕ್ ನಿಂದ ಸರಬರಾಜು ಮಾಡಿದ ಕಲುಷಿತ ನೀರನ್ನು ಸೇವಿಸಿ 500 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಲ್ಲಿ ಯಾರ ಸ್ಥಿತಿಯೂ ಗಂಭೀರವಾಗಿಲ್ಲ
ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ರದ್ದು ಮಾಡಲು ಹೊರಟಿದೆ. ಸರಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ರಾಜ್ಯಾದ್ಯಂತ ಪ್ರತಿಭಟನೆ
ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಗೇಟ್ ಬಳಿ ಶುಕ್ರವಾರ ರಾತ್ರಿ ತಡೆ ರಹಿತ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಟೋಲ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೇರಿ ಬೆಂಕಿ ನಂದಿಸಲು ಯತ್ನಿಸಿದರು.