Showing 20 of 3361 posts • Page 147 of 169
ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಹೆಣ್ಣು ಮಕ್ಕಳಿಗೆ ಪೊಣ್ಣು ಪಿಲಿ ನಲಿಕೆ 2024 ಕಾರ್ಯಕ್ರಮ ಅಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪೊಲಿಪು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಡವೊಂದು ಕಾಣಿಸಿಕೊಂಡಿದೆ. ಉಡವನ್ನು ನೋಡಿದ ಶಿಕ್ಷಕರು ಒಂದು ಕ್ಷಣ ಬೆಚ್ಚಿಬಿದ್ದರು.
ಕಲುಷಿತ ನೀರು ಕುಡಿದು ನೂರಾರು ಮಂದಿ ಗ್ರಾಮಸ್ಥರು ಅಸ್ವಸ್ಥಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.
ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಆಧಾರದ ಮೇಲೆ ಮತದಾನ ಮಾಡಬೇಕೆಂದಿಲ್ಲ. ವ್ಯಕ್ತಿಗಳ ಸಾಧನೆ ನೋಡಿ ಮತದಾನ ಮಾಡಿ. ಈ ಚುನಾವಣೆಯಿಂದ ಸರ್ಕಾರಗಳು ನಿರ್ಧಾರವಾಗುವುದಿಲ್ಲ.
ಆಹಾರ ಅರಸಿ ಬಂದ ಉಡವೊಂದರ ಮುಖಕ್ಕೆ ತಂಪು ಪಾನೀಯದ ಟಿನ್ ಸಿಲುಕಿಕೊಂಡಿತ್ತು. ಇದರ ಪರಿಣಾಮ ಕಳೆದ ಎರಡು ದಿನಗಳಿಂದ ಅತ್ತಿಂದಿತ್ತ ಅಲೆಯುತ್ತಿದ್ದ ಉಡವು ತನ್ನ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿತ್ತು
ಉಡುಪಿ ಮಣಿಪಾಲ ನಗರ ಬೆಳೆಯುತ್ತಿದ್ದಂತೆ ದಿನೇ ದಿನೆ ಸಂಚಾರ ದಟ್ಟಣೆ ಹೆಚ್ಚುತ್ತಿದ್ದು, ಪ್ರಮುಖ ಜಂಕ್ಷನ್ಗಳಲ್ಲಿ ಪರಿಹಾರ ಕ್ರಮವಾಗಿ ರೂಪಿಸಲು ನಿರ್ಧರಿಸಿದ್ದ ಸ್ಮಾರ್ಟ್ ಟ್ರಾಫಿಕ್ ಸಿಗ್ನಲ್ ಹಳ್ಳಹಿಡಿದಿದೆ.
ಸಾಲು ಸಾಲು ಹಬ್ಬಗಳು ಸಮೀಪಿಸುತ್ತಿವೆ. ನವರಾತ್ರಿಯ ಹೊಸ್ತಿಲಲ್ಲಿ ತೆಂಗಿನ ದರ ಗಗನಕ್ಕೇರಿದೆ. ಪ್ರತಿ ಕೆಜಿ ತೆಂಗಿನಕಾಯಿಗೆ 50 ರೂಪಾಯಿ ನೀಡಬೇಕಾಗಿದೆ. ಪ್ರತಿಕೂಲ ಹವಾಮಾನ ಹಾಗೂ ರೋಗ ಬಾಧೆಗಳಿಂದ
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 3ನೇ ವರ್ಷದ ಉಡುಪಿ-ಉಚ್ಚಿಲ ದಸರಾ ಮಹೋತ್ಸವಕ್ಕೆ ಇಂದು ಚಾಲನೆ ನೀಡಲಾಯಿತು. ದೇವಸ್ಥಾನದ ಶ್ರೀಮತಿ ಶಾಲಿನಿ ಡಾ.ಜಿ.ಶಂಕರ್ ಸಭಾಂಗಣದಲ್ಲಿ
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.ರಾಜು ಪೂಜಾರಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆಗೊಳಿಸಿ
ದುಶ್ಚಟ ಮುಕ್ತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಡಾ. ವಿರೇಂದ್ರ ಹೆಗ್ಗಡೆಯವರು ಕೈಗೊಂಡಿರುವ ಬಹುಮುಖ್ಯ ಕಾರ್ಯಕ್ರಮ ಜನಜಾಗೃತಿಯ ಮೂಲಕ ಸಮಾಜದಲ್ಲಿ ಮುಖ್ಯವಾಗಿ ದುರ್ಬಲ ವರ್ಗದಲ್ಲಿ
ಕಾಲೇಜ್ ಮುಗಿಸಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ
ಕೆಲವು ದಿನಗಳಿಂದ ನಿಷೇಧಿತ ಚೀನೀ ಬೆಳ್ಳುಳ್ಳಿ ಹಾವಳಿ ಹೆಚ್ಚುತ್ತಿದೆ. ಉಡುಪಿ ಎಪಿಎಂಸಿಯಲ್ಲಿಯೂ ಚೀನೀ ಬೆಳ್ಳುಳ್ಳಿ ಪತ್ತೆಯಾಗಿದೆ. ಇಲ್ಲಿನ ಆದಿಉಡುಪಿ ಎಪಿಎಂಸಿ ಗೋದಾಮಿನಲ್ಲಿ ನಿಷೇಧಿತ ಚೀನಾ ಬೆಳ್ಳುಳ್ಳಿಯನ್ನು
ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ, ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪಧ್ಬಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ ಚೆಕ್ ನ್ನು ಅರುಣ್ ಕುಮಾರ್ ಪುತ್ತಿಲ ಈಶ್ವರ್ ಮಲ್ಪೆ ಮತ್ತು ಗೀತಾ ದಂಪತಿಗಳಿಗೆ ಅವರ ಮಲ್ಪೆಯ ಮನೆಯಲ್ಲಿ ವಿತರಿಸಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಇದರ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಅಕ್ಟೋಬರ್ 2ರಂದು ಬೆಳಿಗ್ಗೆ ಗಂಟೆ 9ಕ್ಕೆ ಉಡುಪಿಯ ಜೋಡುಕಟ್ಟೆಯಿಂದ ರಾಜಾಂಗಣದವರೆಗೆ ‘ಬೃಹತ್ ಜನಜಾಗೃತಿ ಜಾಥಾ’ ಹಾಗೂ 11ಗಂಟೆಗೆ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ‘ಬೃಹತ್ ಜನಜಾಗೃತಿ ಸಮಾವೇಶ’ ವನ್ನು ಆಯೋಜಿಸಲಾಗಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಹೇಳಿದರು.
ಕಸ್ತೂರಿ ರಂಗನ್ ವರದಿ ಜಾರಿಗೆ ಮುಂಚೆ ಜನರ ವಿಶ್ವಾಸ ಪಡೆದು ಗೊಂದಲ ನಿವಾರಿಸಬೇಕು ಎಂದು ಹಳ್ಳಿಹೊಳೆ ಗ್ರಾ.ಪಂ ಅಧ್ಯಕ್ಷ ಮಂಜುನಾಥ್ ಶೆಟ್ಟಿ ಹೇಳಿದರು.
ಮೀನಿ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ ನಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ
ಉಡುಪಿ ನಗರದಲ್ಲಿ ಸರಣಿ ಕಳ್ಳತನ ನಡೆದಿದ್ದು ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ. ಉಡುಪಿಯ ಪೊಲೀಸ್ ಸ್ಟೇಷನ್ ಎದುರೇ ಇರುವ ಸರ್ಕಾರಿ ನೌಕರರ ವಸತಿ ಸಮುಚ್ಚಯದಲ್ಲಿ ಈ ಘಟನೆ ಸಂಭವಿಸಿದ್ದು
ಮುಡಾ ಪ್ರಕರಣದಲ್ಲಿ ಈಗಾಗಲೇ ಸಿಎಂ ವಿರುದ್ಧ ಎಫ್ಐಆರ್ ದಾಖಲಾಗಿರುವು ಹಿನ್ನೆಲೆಯಲ್ಲಿ ಮೊದಲು ಅವರು ರಾಜೀನಾಮೆ ನೀಡಿ ತನಿಖೆ ಎದುರಿಸುವುದು ಸೂಕ್ತ ಎಂದು ಸಂಸದ ಯದುವೀರ್ ಒಡೆಯರ್ ಆಗ್ರಹಿಸಿದ್ದಾರೆ.
ಭಾರತೀಯರಾಗಿ ನಾವು ಒಗ್ಗಟ್ಟಾಗಿರಬೇಕು. ಪ್ರತಿಯೊಬ್ಬ ಭಾರತೀಯರು ಕನ್ನಡಿಗರಲ್ಲ. ಆದರೆ ಪ್ರತಿಯೊಬ್ಬ ಕನ್ನಡಿಗರು ಭಾರತೀಯರು. ಈ ಚಿಂತನೆ ನಮ್ಮಲ್ಲಿ ಬೆಳೆಯಬೇಕು ಎಂದು ಸಂಸದ ಯದುವೀರ್
ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ