Showing 20 of 3348 posts • Page 15 of 168
: ಶ್ರೀಕೃಷ್ಣ ಮಠದ ಪರ್ಯಾಯ ಶ್ರೀ ಶೀರೂರು ಮಠದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಆಯೋಜಿಸಿರುವ ವಿವಿಧ ಸ್ಪರ್ಧೆಗಳಿಗೆ ಶನಿವಾರ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಚಾಲನೆ ನೀಡಿದರು.
ಶನಿವಾರ ಮಧ್ಯಾಹ್ನ ಸುರಿದ ಭಾರೀ ಗಾಳಿ–ಮಳೆಗೆ ಚಿಟ್ಪಾಡಿ ಸಮೀಪದ ವಿಜಯ ವೀರ ಸಂಘ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ, ಮೂರಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧಾರಾಶಾಯಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು.
ತಾಲೂಕಿನ ಚರ್ಚ್ ರಸ್ತೆಯಲ್ಲಿ ಜು.31ರಂದು ನಸುಕಿನ ವೇಳೆ ನಡೆದ ಶೂಟೌಟ್ ಹಾಗೂ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ರಚಿಸಲಾಗಿದ್ದ ವಿಶೇಷ ಪೊಲೀಸ್ ತಂಡ ಭಟ್ಕಳದಲ್ಲಿ ಬಂಧಿಸಿದೆ.
ರಸ್ತೆ ದಾಟುತ್ತಿದ್ದ ವೇಳೆ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.
ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಅವರ ನೇತೃತ್ವದಲ್ಲಿ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಆರಂಭಗೊಂಡಿರುವ ಖಾದ್ಯಮೇಳಕ್ಕೆ ಮೊದಲ ದಿನವೇ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಮಣಿಪಾಲದ ರಾಷ್ಟ್ರೀಯ ಹೆದ್ದಾರಿ 169(ಎ)ರ ರಸ್ತೆ ಬದಿಗಳಲ್ಲಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡಿದ್ದರಿಂದ ಶುಕ್ರವಾರ ಸಂಜೆ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸಿದರು.
ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ (45) ಅವರನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಪ್ರಕರಣವು ಕುಂದಾಪುರ ಜನತೆಯನ್ನು ಬೆಚ್ಚಿಬೀಳಿಸಿದೆ.
ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದ್ದು, ಯಾವುದೇ ನೋಟಿಸ್ ನೀಡಿದರೂ ಅದನ್ನು ಸ್ವೀಕರಿಸಲು ತಾವು ಸಿದ್ಧನಿದ್ದೇನೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಬಿಜೆಪಿ ಭದ್ರಕೋಟೆಗಳಲ್ಲಿರುವ ಶಾಸಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಆರೋಪಿಸಿದರು.
ಸಹಕಾರಿ ಸಂಸ್ಥೆಗಳು ಜನರ ವಿಶ್ವಾಸ ಗಳಿಸಿಕೊಂಡಾಗ ಮಾತ್ರ ದೀರ್ಘಕಾಲಿಕ ಯಶಸ್ಸು ಸಾಧಿಸಲು ಸಾಧ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.
ಪೊಲೀಸ್ ಇಲಾಖೆಯ ಕಚೇರಿಯಲ್ಲೇ ಹಣಕ್ಕೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊಗಳು ಹಾಗೂ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಡಿವೈಎಸ್ಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ ಜನತೆ ಎಂದಿಗೂ ಮರೆಯಬಾರದು ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗುರುವಾರ ರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆಗೆ ಒಳಗಾದರು.
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ವ್ಯವಹಾರ ಹಾಗೂ ಇತರ ವ್ಯವಹಾರಗಳಲ್ಲಿನ ಮನಸ್ತಾಪವೇ ಪ್ರಮುಖ ಕಾರಣ ಎಂಬುದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ರಾಹುಲ್ ಗಾಂಧಿ ವಿರುದ್ಧ ಧ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನಡೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ಯಶ್ಪಾಲ್ ಸುವರ್ಣರನ್ನು 10 ತಲೆ ಹಾಗೂ ಎಂಟು ಕೈಗಳ ರಾವಣನಂತೆ ಬಿಂಬಿಸಿದ ಕಟೌಟ್ ಗಮನ ಸೆಳೆಯಿತು.
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವಂಶ ದ್ವಂಸ ಮಾಡುವ ಜೀವ ಬೆದರಿಕೆ ಒಡ್ಡಿ, ನೀಟ್ ವಿದ್ಯಾರ್ಥಿ ಚಳವಳಿಯನ್ನು ಹೀನಾಯವಾಗಿ ನಿಂದಿಸಿ ದ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣರ ಚಾರಿತ್ರ್ಯ ಹೀನ ನಡೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಡುಪಿ ನಗರದ ಹಳೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಶುಕ್ರವಾರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಭಾರತದಲ್ಲಿ ದಮನಕಾರಿ ಪ್ರವೃತ್ತಿ ಮತ್ತು ಸಿದ್ಧಾಂತವನ್ನು ಜನರ ಮೇಲೆ ಹೇರುವ ಮೂಲಕ ಸಮ್ಮತಿಗೆ ಒಳಪಡಿಸುವ ತಂತ್ರವನ್ನು ಹಾಗೂ ಕಠೋರವಾದ ನಿಯಮಗಳನ್ನು ಗುಪ್ತವಾಗಿ ಜನರ ಮೇಲೆ ಹೇರಲಾಗುತ್ತಿದೆ ಎಂದು ರಂಗ ನಿರ್ದೇಶಕ ಸುರೇಶ್ ಆನಗಳ್ಳಿ ಅಭಿಪ್ರಾಯಪಟ್ಟರು.
ಬಾಬರಿ ಮಸೀದಿ ಧ್ವಂಸ ಮಾಡಿದ ರೀತಿಯಲ್ಲೇ ರಾಹುಲ್ ಗಾಂಧಿ ವಂಶವನ್ನು ದ್ವಂಸ ಮಾಡುತ್ತೇವೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಟ ಪ್ರಕಾಶ್ ರಾಜ್ ಕರಾವಳಿ ಭಾಗದಲ್ಲಿ ನಾಟಕ ಕಾರ್ಯಕ್ರಮಗಳ ಮೂಲಕ ಕಲಾವಿದರನ್ನು ಒಗ್ಗೂಡಿಸಿ ಅವರಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆರೋಪಿಸಿದರು.