Showing 20 of 3361 posts • Page 152 of 169
ಕಂಚಿನಡ್ಕದಲ್ಲಿ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ ಸಂಗ್ರಹ ಕೇಂದ್ರದ ಆದೇಶವನ್ನು ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಹಿಂಪಡೆದಿದ್ದು ಸದ್ಯಕ್ಕೆ ಈ ಟೋಲ್ ಕೇಂದ್ರ ಸ್ಥಗಿತಗೊಳಿಸಲು ತೀರ್ಮಾನಿಸಿದೆ.
ಆನ್ ಲೈನ್ ಟ್ರೇಡಿಂಗ್ ನಲ್ಲಿ ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಡುಪಿ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಮತ್ತೊಂದು ಘಟನೆ ಗುರುವಾರ ಬೆಳಗ್ಗೆ ಉಡುಪಿಯಲ್ಲಿ ನಡೆದಿದೆ.
ಸಿಡಬ್ಯೂಎಫ್ಐ ಇದರ 70 ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆ ಇದೇ ಆಗಸ್ಟ್ 29 ಮತ್ತು 30ರಂದು ಉಡುಪಿಯ ಲಿಕೋ ಬ್ಯಾಂಕ್ ನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೇಳಿದರು.
ಪಡುಬಿದ್ರಿ- ಕಾರ್ಕಳ ರಾಜ್ಯ ಹೆದ್ದಾರಿ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ವಿರುದ್ಧ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಕಂಚಿನಡ್ಕದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ
ನಗರದ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿ ಬಳಿ ಉಡುಪಿ ನಗರಸಭೆ ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ಪರಿಸರ ಸ್ನೇಹಿಯಾಗಿರುವ ಅನಿಲ ಚಿತಾಗಾರವನ್ನು ನಿರ್ಮಿಸಿದೆ.
ಐಟಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಪಠ್ಯೇತರ ಚಟುವಟಿಕೆಗಳಿಗೆ ಕಾಲೇಜಿನಿಂದ ಯಾವುದೇ ಪ್ರೋತ್ಸಾಹವಿಲ್ಲ ಎಂದು ಆರೋಪಿಸಿ ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಇಂದು ಕಾಲೇಜು ಗೇಟ್ ಮುಂಭಾಗದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಪ್ರಚೋದನಾಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ನೇತೃತ್ವದಲ್ಲಿ ಇಂದು ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪದ ಕಂಚಿನಡ್ಕ ಎಂಬಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಟೋಲ್ ಗೇಟ್ ವಿರುದ್ಧ ಟೆಂಪೋ ಮತ್ತು ಲಾರಿ ಚಾಲಕರ ಸಂಘ ಪ್ರತಿಭಟನೆಗೆ ಸಜ್ಜಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಎಲೆಕ್ಟ್ರಾನಿಕ್ಸ್ ಮಳಿಗೆಗೆ ನುಗ್ಗಿದ ಘಟನೆ ಸಂಭವಿಸಿದೆ. ಉಡುಪಿ ನಗರದ ಹೃದಯ ಭಾಗದಲ್ಲಿರುವ ಕೆ.ಎಂ.ಮಾರ್ಗದಲ್ಲಿನ ಗ್ರಹೋಪಯೋಗಿ ಮಳಿಗೆಗೆ ಕಾರು ನುಗ್ಗಿದೆ.
ಶ್ರೀಕೃಷ್ಣಾ ಜನ್ಮಾಷ್ಟಮಿಯ ಪ್ರಯುಕ್ತ ಟೈಗರ್ಸ್ ಫ್ರೆಂಡ್ಸ್ ಉಡುಪಿ ವತಿಯಿಂದ “ಅಬ್ಬರದ ಉಡುಪಿ ಪಿಲಿನಲಿಕೆ ಕಾರ್ಯಕ್ರಮ” ಇದೇ ಆ.26ರಂದು ಕುಂಜಿಬೆಟ್ಟು ಮೀನುಮಾರುಕಟ್ಟೆ ಬಳಿಯ ವೇದಿಕೆಯಲ್ಲಿ ನಡೆಯಲಿದೆ ಎಂದು ಹರೀಶ್ ಕುಮಾರ್ ಹೇಳಿದರು.
ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿನೋರ್ವ ಮೃತಪಟ್ಟ ದಾರುಣ ಘಟನೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಖುರ್ಚಿಯೇ ಈಗ ಅಲ್ಲಾಡುತ್ತಿದೆ. ಇನ್ನು ನಿಮಗೆ ಒಂಭತ್ತು ದಿನಗಳ ಕಾಲಾವಕಾಶ ಇದೆ. ಅಷ್ಟರ ಒಳಗೆ ಜನರ ವಿಶ್ವಾಸ ಗಳಿಸಿ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವ್ಯಂಗ್ಯವಾಡಿದ್ದಾರೆ.
ಪರೀಕ್ಷೆ ಹತ್ತಿರ ಬರುತ್ತಿದೆ ಮೊಬೈಲ್ ಬಳಕೆ ಕಡಿಮೆ ಮಾಡಿ ಓದುವ ಕಡೆಗೆ ಗಮನಕೊಡು ಎಂದು ವಿದ್ಯಾರ್ಥಿಯೊಬ್ಬನಿಗೆ ಹೆತ್ತವರು ಬುದ್ದಿ ಹೇಳಿದ್ದಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿ ಬ್ಯಾಗ್ ಸಹಿತವಾಗಿ
ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜನ್ಮದಿನಾಚರಣೆಯ ಪ್ರಯುಕ್ತ ಕಟಪಾಡಿ ಶ್ರೀವಿಶ್ವನಾಥ ಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡ ನಾರಾಯಣಗುರುಗಳ ಜಾಥಕ್ಕೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು.
ಮೆಹಂದಿ ಕಾರ್ಯಕ್ರಮದಂದೇ ಮದುಮಗ ನಿಗೂಢವಾಗಿ ನಾಪತ್ತೆಯಾದ ಘಟನೆ ಕುಂದಾಪುರದ ಅಳಿವೆಕೋಡಿ ಗ್ರಾಮದಲ್ಲಿ ನಡೆದಿದೆ. ಮದುವೆ ಹಿಂದಿನ ದಿನ ನಡೆಯಬೇಕಿದ್ದ ಮೆಹಂದಿ ಕಾರ್ಯಕ್ರಮದಂದೇ ಮದುಮಗ ಕಣ್ಮರೆಯಾಗಿದ್ದಾನೆ.
ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ಯಾವುದೇ ನಿಯಮಗಳನ್ನ ಅನುಸರಿಸದೇ ಅಕ್ರಮವಾಗಿ ಮರ ಕಡಿದು, ಟನ್ ಗಟ್ಟಲೆ ಮಣ್ಣು ಸಾಗಾಟ ಮಾಡಲಾಗಿದೆ.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷೀಣ ಕನ್ನಡ ಜಿಲ್ಲೆ ಉಡುಪಿ ಜಿಲ್ಲೆ ಬ್ರಹ್ಮಾವರ ವಲಯ ಇವರ ಜಂಟಿ ಸಾರಥ್ಯದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಇಂದು ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ