Showing 17 of 3157 posts • Page 158 of 158
ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಉಡುಪಿ ನಗರದ ಹಳೆ ಬಸ್ ಸ್ಟ್ಯಾಂಡ್ ಸಮೀಪದ ಕೃಷ್ಣಾ ಕ್ಯಾಂಪೇಕ್ಸ್ ಶ್ರೀ ನಾಗದೇವರ ಸನ್ನಿಧಿಯ ಪಕ್ಕದ ಆವರಣದ ಗೋಡೆ ಕುಸಿದು 3 ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊಂಡಿದೆ.
ಶಂಕರಪುರ ಸಮೀಪದ ಸರ್ಕಾರಿಗುಡ್ಡೆಯಲ್ಲಿ 18 ವರ್ಷದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಕಳೆದ ಒಂದು ತಿಂಗಳಿನಿಂದ ರಕ್ಷಿಸಿಡಲಾಗಿದ್ದ ವಾರಸುದಾರರಿಲ್ಲದ ಎರಡು ಶವಗಳ ಅಂತ್ಯಸಂಸ್ಕಾರವನ್ನು ನಗರ ಪೊಲೀಸ್ ಠಾಣೆಯು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಹಕಾರದೊಂದಿಗೆ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಗೌರಯುತವಾಗಿ ನೆರವೇರಿಸಿತು.
ಪೊಲೀಸರೇ ಗೂಂಡಾ ರೀತಿ ವರ್ತನೆ ಮಾಡಿದರೆ ಅದು ವ್ಯವಸ್ಥೆಗೆ ಮಾರಕ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಜನರಿಗೆ ರಕ್ಷಣೆ ಕೊಡುವುದು, ವಿಶ್ವಾಸ ನಿರ್ಮಾಣ ಮಾಡುವುದು ಪೊಲೀಸರ ಜವಾಬ್ದಾರಿ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಸ್ನಾನ ಮಾಡಲೆಂದು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಮಾಣಿಬೆಟ್ಟು ಬಳಿ ಗುರುವಾರ ರಾತ್ರಿ ನಡೆದಿದೆ. ಶಿರ್ವ ಎಂಎಸ್ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ.
ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಭೇಟಿ ಮಾಡಲು ಹೋದ ವೇಳೆ ಮನೆಯ ಗೇಟಲ್ಲಿ ನಿಲ್ಲಿಸಿ ನಮ್ಮನ್ನು ವಾಪಸು ಕಳುಹಿಸಿದರು. ಇದೊಂದು ವಿಪರ್ಯಾಸದ ಸಂಗತಿ ಎಂದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹೇಳಿದರು.
ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಬಿಜೆಪಿಯ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರು 24 ಗಂಟೆಯೊಳಗೆ ನಿವೃತ್ತಿ ಘೋಷಿಸಬೇಕು.
ಮಾಜಿ ಶಾಸಕರಾದ ರಘುಪತಿ ಭಟ್ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುವಂತೆ ಜಿಲ್ಲಾ ಬಿಜೆಪಿಯು ರಾಜ್ಯ ಸಮಿತಿಗೆ ಶಿಫಾರಸು ಮಾಡಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಹೇಳಿದ್ದಾರೆ.
ಕಾರ್ಯಕರ್ತರ ಬೆಂಬಲಕ್ಕೆ ನಿಂತ ಶಾಸಕ ಹರೀಶ್ ಪೂಂಜಾ ಅವರ ಮೇಲೂ ಪ್ರಕರಣ ದಾಖಲಿಸಿ ಬಂಧನಕ್ಕೆ ತೆರಳಿರುವುದು ಖಂಡನೀಯ ಎಂದು ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ಮಾಜಿ ಶಾಸಕರಾದ ರಘುಪತಿ ಭಟ್ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುವಂತೆ ಜಿಲ್ಲಾ ಬಿಜೆಪಿ ರಾಜ್ಯ ಸಮಿತಿಗೆ ಶಿಫಾರಸು ಮಾಡಿದೆ.
ಕಾರು ಮತ್ತು ಮೀನು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಉಡುಪಿ ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಸಂಭವಿಸಿದೆ.
ನಿರಂತರ ಹತ್ಯೆ, ಅರಾಜಕತೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀವ್ರ ಹದಗೆಟ್ಟಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಪವಿತ್ರತೆ ಉಳಿಸಲು ಈ ಬಾರಿ 20 ಗ್ರೇಸ್ ಅಂಕ ನೀಡಲಾಗಿದೆ. ಗ್ರೇಸ್ ಅಂಕ ನೀಡಿರುವುದು ಈ ವರ್ಷಕ್ಕೆ ಮಾತ್ರ. ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್ ಅಂಕ ಇರುವುದಿಲ್ಲ.
ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಸ್ಥಳೀಯರು ಪ್ರವಾಸಿಗರು ಆಗಮಿಸಿ ಅಲ್ಲಲ್ಲಿ ನದಿ ತೀರದ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಹಾಗೂ ಬಿಯರ್ ಬಾಟಲಿಗಳನ್ನು ಹಾಕಿ ಪರಿಸರವನ್ನು ಹಾಳುಗೆಡವುತಿದ್ದಾರೆ.
ವಸಂತ ದ್ವಾದಶಿ ಹಾಗೂ ವಿದ್ಯಮಾನ್ಯತೀರ್ಥರ ಉತ್ತರಾಧನೆ ಪ್ರಯುಕ್ತ ಉಡುಪಿ ಶ್ರೀಕೃಷ್ಣಮಠದಲ್ಲಿ ಚಿನ್ನ ಮತ್ತು ನವರತ್ನ ರಥದ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಶಾಲೆಯಲ್ಲಿ ಟಿಸಿ ನೀಡದೆ ಅವಮಾನಿಸಿದರೆಂದು ಮನನೊಂದ ಎಸ್ಎಸ್ಎಲ್ಸಿ ಉತ್ತೀರ್ಣನಾಗಿದ್ದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.