Showing 20 of 3348 posts • Page 16 of 168
ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ ಸಿ) ಒಂದರ ಹಿಂದೆ ಒಂದರಂತೆ ಹಗರಣಗಳು ಬೆಳಕಿಗೆ ಬರುತ್ತಿರುವುದು ಉದ್ಯೋಗಾಕಾಂಕ್ಷಿ ಯುವಕರಲ್ಲಿ ಆತಂಕ ಮೂಡಿಸಿದ್ದು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಪಾರದರ್ಶಕ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಒತ್ತಾಯಿಸಿದರು.
ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರ್ ಗ್ರಾಮದ ಮೂಲದ ಶ್ರೀ ಮಲ್ಲಾರ್ ಶಶಿಧರ ಶೆಟ್ಟಿ ಅವರು ಖ್ಯಾತ ಉದ್ಯಮಿ, ಸಮಾಜಸೇವಕ ಹಾಗೂ ಭಾರತೀಯ ಸಂಸ್ಕೃತಿಯ ಪ್ರಚಾರಕರಾಗಿದ್ದಾರೆ.
ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡ ಸಖೇಂದ್ರ ಬಿ. ಸುವರ್ಣ (69) ಅವರು ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಚಳವಳಿಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದು, ‘ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆರೋಪಿಸಿದರು.
ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಜುಲೈ 29ರಂದು ಉದ್ಘಾಟನೆಯಾಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಕಿದಿಯೂರು ಉದಯಕುಮಾರ್ ಶೆಟ್ಟಿ ತಿಳಿಸಿದರು.
“ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸಿ–ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸಿ” ಎಂಬ ಧ್ಯೇಯದೊಂದಿಗೆ ಜುಲೈ 31ರಿಂದ ಆಗಸ್ಟ್ 2ರವರೆಗೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಮೂರು ದಿನಗಳ ಸ್ವದೇಶಿ ಖಾದ್ಯ ಮೇಳ ನಡೆಯಲಿದೆ ಎಂದು ಕನ್ನರ್ಪಾಡಿ ಜಯದುರ್ಗ ಪರಮೇಶ್ವರಿ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ತಿಳಿಸಿದರು.
ಚಾಲಕನ ನಿಯಂತ್ರಣ ತಪ್ಪಿದ ಕಿಯಾ ಕಾರೊಂದು ಫುಟ್ಪಾತ್ಗೆ ಡಿಕ್ಕಿ ಹೊಡೆದ ಘಟನೆ ನಗರದ ಜಿಲ್ಲಾ ನ್ಯಾಯಾಲಯದ (ಕೋರ್ಟ್) ಮುಂಭಾಗದಲ್ಲಿ ಸೋಮವಾರ ಸಂಜೆ ನಡೆದಿದೆ.
ಉಡುಪಿ ಜಿಲ್ಲಾ ಬೇಕರಿ ಹಾಗೂ ಖಾದ್ಯ ತಿನಿಸುಗಳ ತಯಾರಕರು ಮತ್ತು ಮಾರಾಟಗಾರರ ಸಂಘದ ದಶಮಾನೋತ್ಸವ ಹಾಗೂ ನವೆಂಬರ್ನಲ್ಲಿ ಆಯೋಜಿಸಿರುವ ಆಹಾರ ಉದ್ಯಮ ಮೇಳದ ಲೋಗೊ ಬಿಡುಗಡೆ ಸಮಾರಂಭ ಭಾನುವಾರ ಬ್ರಹ್ಮಾವರ ಸಿಟಿ ಸೆಂಟರ್ನ ಕುಂಕುಮ್ ಸಭಾಂಗಣದಲ್ಲಿ ನಡೆಯಿತು.
ಉಡುಪಿ: ಪೆರಂಪಳ್ಳಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಆಯೋಜಿಸಲಾದ ‘ಕೆಸರ್ ಡೊಂಜಿ ದಿನ’ ಕಾರ್ಯಕ್ರಮ ಪೆರಂಪಳ್ಳಿಯ ನೋಳೆ ಲಚ್ಚಿಲ್ ಶ್ರೀ ಪುತ್ತು ನಾಯ್ಕರ ಗದ್ದೆಯಲ್ಲಿ ಸಂಭ್ರಮದಿಂದ ನಡೆಯಿತು. ಗ್ರಾಮದ ನೂರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾಂಪ್ರದಾಯಿಕ ಗ್ರಾಮೀಣ ಕ್ರೀಡೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಮಕ್ಕಳು ಹಾಗೂ ಯುವಕ-ಯುವತಿಯರು ಕೆಸರಿನಲ್ಲಿ ಆಟವಾಡಿ, ಪರಸ್ಪರ ಕೆಸರನ್ನು ಎರಚಿಕೊಂಡು ಸಂಭ್ರಮಿಸಿದರು. ಡಿಜೆ ಸಂಗೀತದ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದರು. ಕಾರ್ಯಕ್ರಮವನ್ನು ಶ್ರೀಕ್ಷೇತ್ರ ಕೇಮಾರು ಸಾಂದೀಪನಿ ಸಾಧನಾಶ್ರಮದ ಈಶ ವಿಠಲದಾಸ […]
ಚಾಲಕನ ನಿಯಂತ್ರಣ ತಪ್ಪಿದ ಈಚರ್ ಲಾರಿಯೊಂದು ರಸ್ತೆ ಬದಿಯ ಟ್ರಾನ್ಸ್ ಫಾರ್ಮರ್ ಕಂಬ, ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಬಳಿಕ ಮನೆಯೊಂದರ ಅಂಗಳಕ್ಕೆ ನುಗ್ಗಿದ ಘಟನೆ ಶನಿವಾರ ರಾತ್ರಿ
ದೇಶಾದ್ಯಂತ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಸಂಘಟನಾ ಸೃಜನಾ ಅಭಿಯಾನ (ಎಸ್ಎಸ್ಎ) ಆರಂಭಿಸಲಾಗಿದ್ದು, ಅದರ ಭಾಗವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಜಿಲ್ಲೆಯ ಪ್ರಮುಖರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಎಐಸಿಸಿ ವೀಕ್ಷಕ ಹಿಮ್ಮತ್ಸಿಂಗ್ ಪ್ರಹ್ಲಾದ್ಸಿಂಗ್ ಪಟೇಲ್ ತಿಳಿಸಿದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯು ಶನಿವಾರ ಕಾಂಗ್ರೆಸ್ ಭವನದಲ್ಲಿ ವಿಜಯೋತ್ಸವ ಆಚರಿಸಿತು.
ನಗರದಲ್ಲಿ ಡೆಂಗ್ಯು ಪ್ರಕರಣಗಳು ಹೆಚ್ಚುತ್ತಿದ್ದರೂ ಆರೋಗ್ಯ ಇಲಾಖೆ ಇನ್ನೂ ಎಚ್ಚೆತ್ತುಕೊಂಡಿಲ್ಲ.
ಉಮರ್ ಖಾಲಿದ್ ಪರ ಘೋಷಣೆಗಳು ಕೇಳಿಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ ಮುದ್ರಾಧಾರಣೆ ಭಕ್ತಿ ಶ್ರದ್ಧೆಯಿಂದ ನೆರವೇರಿತು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ಮಣಿಪಾಲದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೆಹಲಿಯಲ್ಲಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಶುಕ್ರವಾರ ಬ್ರಹ್ಮಾವರ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.
ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಸಾಧನೆಯಲ್ಲಿ ದಾನಿಗಳ ಸಹಕಾರ ಅತ್ಯಂತ ಮಹತ್ವದ್ದಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.
ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ ಕ್ಷೇತ್ರವಾಗಿದ್ದು, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಸಹಯೋಗದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.
ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವುದು ಆತಂಕಕ್ಕೆ ಕಾರಣವಾಗಿದ್ದು, ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಾದ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ಈಗಿನಿಂದಲೇ ಬರ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.