Showing 20 of 3269 posts • Page 161 of 164
ವಿಶ್ವ ಭಾರತ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ದಿ. ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ಗೆ ವಿಜಯಪುರದ ಸುಮಿತ್ ಮೇತ್ರಿ ಅವರ ‘ಈ ಕಣ್ಣುಗಳಿಗೆ ಸದಾ ನೀರಡಿಕೆ’
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅದನ್ನು ರಾಜಕೀಯ ಕಾರಣಕ್ಕಾಗಿ ನಾವು ಪ್ರಾರಂಭಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಚಲಿಸುತ್ತಿದ್ದ ಶಾಲಾ ಬಸ್ ನಲ್ಲೇ ಹೃದಯಾಘಾತದಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಖಾಸಗಿ ಶಾಲಾ ಬಸ್ ಚಾಲಕ ಗುರುವಾರ ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಚಲಿಸುತ್ತಿದ್ದ ಶಾಲಾ ಬಸ್ ನಲ್ಲೇ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಆತನ ಸಮಯಪ್ರಜ್ಞೆಯಿಂದ 60 ಮಕ್ಕಳು ಪ್ರಾಣಾಪಾಯದಿಂದ ಪಾರಾದ ಘಟನೆ ಪೆರಂಪಳ್ಳಿಯಲ್ಲಿ ಇಂದು ಸಂಜೆ ನಡೆದಿದೆ.
ಯಕ್ಷಗಾನ ಬಡಗು ತಿಟ್ಟಿನ ಹಿರಿಯ ಕಲಾವಿದರಾದ ಪೇತ್ರಿ ಮಾಧವ್ ನಾಯ್ಕ್ ಅವರು ಇಂದು ನಿಧನ ಹೊಂದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಪರ್ಕಳ ಸಮೀಪದ ಹೆರ್ಗದಲ್ಲಿ ಕಾಮಗಾರಿ ಹಂತದಲ್ಲಿದ್ದ ಬಾವಿಗೆ ಬಿದ್ದ ಹಸುವನ್ನು ಭಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿ ಜೀವದಾನ ನೀಡಿದ್ದಾರೆ. ಸುಮಾರು 40 ಅಡಿ ಆಳದ ಬಾವಿಗೆ ಈ ಹಸು ಬಿದ್ದಿತ್ತು.
ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ ((AESL) ಸಂಸ್ಥೆಯ ಉಡುಪಿ ಶಾಖೆಯ 2 ವಿದ್ಯಾರ್ಥಿಗಳು ಪ್ರತಿಷ್ಠಿತ ನೀಟ್ (NEET UG 2024) ಪರೀಕ್ಷೆಯಲ್ಲಿ 705 ಹಾಗೂ ಹೆಚ್ಚಿನ ಅಂಕಗಳನ್ನು ಗಳಿಸಿ,
ಪುರಸಭಾ ವ್ಯಾಪ್ತಿಯಲ್ಲಿರುವ 2ನೇ ವಾರ್ಡ್ ನ ಕಲ್ಲೋಟ್ಟೆ ಸದ್ಭಾವನಾ ನಗರದ ಪರಿಸರದಲ್ಲಿ ಕಸದ ರಾಶಿ ಅಲ್ಲಲ್ಲಿ ಕಂಡು ಬಂದಿದ್ದು, ಕಸ ವಿಲೇವಾರಿ ವಾಹನಕ್ಕೆ ನೀಡಬೇಕಾಗಿ ಕಾರ್ಕಳ ಪುರಸಭಾ ಮುಖ್ಯಧಿಕಾರಿ ರೂಪಾ. ಟಿ. ಶೆಟ್ಟಿ ಮನವಿ ಮಾಡಿದರು.
ಲೋಕಸಭಾ ಫಲಿತಾಂಶ ಬೆನ್ನಲ್ಲೇ ಉಡುಪಿ ಕಾಂಗ್ರೆಸ್ ನಲ್ಲಿ ಗೋ ಬ್ಯಾಕ್ ಅಭಿಯಾನ ಶುರುವಾಗಿದೆ. ಕರಾವಳಿಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿಗಳ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗರಂ ಆಗಿದ್ದಾರೆ.
ಭಾರತ್ ಸ್ಕೌಟ್ ಎಂಡ್ ಗೈಡ್ಸ್ ಸ್ಥಳೀಯ ಸಂಸ್ಥೆ ಕಾರ್ಕಳ, ಇಲ್ಲಿಯ ಶ್ರೀ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂಬ ಹಂಬಲದಿಂದ ಜನರು ನನಗೆ ಮತ ಹಾಕಿದ್ದಾರೆ. ನನ್ನ ಗೆಲುವಿಗೆ ಸಹಕರಿಸಿದ ಎಲ್ಲಾ ಮತದಾರರಿಗೆ ಕೃತಜ್ಞತೆಗಳು ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು
ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಭಾರೀ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಮುನ್ನಡೆ ಸಾಧಿಸಿದ್ಧಾರೆ. ಎರಡನೇ ಹಂತದ ಮತ ಎಣಿಕೆಯಲ್ಲಿ 29456 ಮತಗಳಿಂದ ಮುನ್ನಡೆ ಗಳಿಸಿದ್ದಾರೆ.
ಟ್ರಾನ್ಸ್ಫಾರ್ಮರ್ ರಿಪೇರಿ ಮಾಡುವ ವೇಳೆ ವಿದ್ಯುತ್ ತಗುಲಿ ಲೈನ್ಮ್ಯಾನ್ ಮೃತಪಟ್ಟ ಘಟನೆ ಬೈಂದೂರಿನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.
ನನಗೆ ಗೆಲುವಿನ ವಿಶ್ವಾಸವಿದೆ. ಮತದಾರರು ನನಗೆ ಮತ ಹಾಕಲು ನಿಶ್ಚಯ ಮಾಡಿದ್ದಾರೆ. ಮತದಾರರ ಮನಸ್ಸಿಗೆ ದೇವರು ಬುದ್ಧಿ ಕೊಡಬೇಕು. ನಾವು ನಿನ್ನೆಯವರೆಗೆ ಶತ ಪ್ರಯತ್ನ ಮಾಡಿದ್ದೇವೆ ಎಂದು ನೈರುತ್ಯ ಪದವೀಧರ
ಜಿಲ್ಲೆಯಲ್ಲಿ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದ್ದು ಕಾಪುವಿನ ಮತಗಟ್ಟೆಯಲ್ಲಿ ಮಾತಿನ ಚಕಮಕಿ ನಡೆದಿದೆ.
ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಧೀಕೃತ ಅಭ್ಯರ್ಥಿ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು ಮಣಿಪಾಲ ಎಂಜಿಸಿ ಮತಗಟ್ಟೆಯಲ್ಲಿ ಇಂದು ಮತದಾನ ಮಾಡಿದರು.
ಕೆಎಸ್ಆರ್ಟಿಸಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸರ್ಕಲ್ನಲ್ಲಿ ನಡೆದಿದೆ.
ದರೋಡೆಗೆ ಹೊಂಚು ಹಾಕಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಪಿಯೋ ಕಾರಿನಲ್ಲಿ ಸಂಚರಿಸುತ್ತಿದ್ದ ಆರೋಪಿಗಳನ್ನು ಕಾಪು ಪೊಲೀಸರು ಶನಿವಾರ ರಾತ್ರಿ ಸಿನಿಮೀಯ ರೀತಿಯ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ಕೇಂದ್ರ ಸರ್ಕಾರದ ಯೋಜನೆಗಳು, ನರೇಂದ್ರ ಮೋದಿ ಅವರ ಹತ್ತು ವರ್ಷದ ಸಾಧನೆಗಳು ನಮ್ಮ ಕೈಹಿಡಿಯಲಿವೆ ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.