Showing 20 of 3269 posts • Page 162 of 164
ಕಬ್ಬಿಣದ ರಾಡ್ ಹಿಡಿದು ತಿರುಗಾಡುತ್ತಾ ಆತಂಕ ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ಸಮಾಜಸೇವಕ ವಿಶು ಶೆಟ್ಟಿಯವರ ಸಹಾಯದಿಂದ ವಶಕ್ಕೆ ಪಡೆದು, ಬಳಿಕ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಲಾಯಿತು.
ಗ್ಯಾಂಗ್ ವಾರ್ ಪ್ರಕರಣದ ಬಳಿಕ ಮಣಿಪಾಲ ಪೊಲೀಸರು ರಾತ್ರಿ ಗಸ್ತು ಕಾರ್ಯಾಚರಣೆಯನ್ನು ಮುಂದುವರಿಸಿದ್ದು, ಪಬ್ ಬಾರ್ಗಳ ಮೇಲೆ ದಾಳಿ ನಡೆಸಿದ್ದಾರೆ.
ರಾಜಕಾರಣಿಗಳು, ಜನರಿಂದ ತಿರಸ್ಕೃತರಾದವರ ಬದಲು ಶಿಕ್ಷಕರೇ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುವ ಅಗತ್ಯವಿದ್ದು ಚುನಾವಣೆಯಲ್ಲಿ ಗೆದ್ದು ಬಂದರೆ, ಮೇಲ್ಮನೆಯ ಗೌರವ, ಘನತೆ ಎತ್ತಿಹಿಡಿಯಲು ಶ್ರಮಿಸುವೆ
ರಾಷ್ಟ್ರೀಯತೆಯೊಂದಿಗೆ ಮಕ್ಕಳಲ್ಲಿ ದೇಶ ಭಕ್ತಿಯನ್ನು ಮೂಡಿಸುವ ಹಾಗೂ ವಿದ್ಯಾರ್ಥಿಗಳಲ್ಲಿ ಸರ್ವ ಧರ್ಮಗಳ ಭಾವನೆ ಬರುವಂತೆ ವಿದ್ಯೆಯನ್ನು ನೀಡುವ ಕೆಲಸ ಮಾಡುತ್ತಿದ್ದಾರೆ.
ಇಂದು ರಾಜ್ಯದೆಲ್ಲೆಡೆ ಶಾಲಾರಂಭದ ಸಂಭ್ರಮ. ಶಾಲೆಗಳು ಮಕ್ಕಳನ್ನು ಬಗೆಬಗೆಯಲ್ಲಿ ಮೊದಲ ದಿನ ಬರಮಾಡಿಕೊಳ್ಳುತ್ತಿವೆ. ಹಲವು ಶಾಲೆಗಳಲ್ಲಿ ಈ ಸಂಬಂಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೀನುಗಾರಿಕೆ ನಡೆಸುವಂತಿಲ್ಲ.
ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದ ಆರೋಪಿಗಳನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಶುಕ್ರವಾರ ನಗರ ಠಾಣಾ ಪೊಲೀಸರು ಹಾಜರುಪಡಿಸಿದರು.
ಶ್ರೀ ಲಕ್ಷ್ಮೀ ಬೆಳ್ಮಣ್ಣು ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತವನ್ನು ಪಂಡಿತ್ ವಿನಾಯಕ್ ತೊರ್ವಿಯವರಲ್ಲಿ ಸಂಗೀತವನ್ನು ಅಭ್ಯಾಸ ಮಾಡುತ್ತಿದ್ದು ಕಾರ್ಕಳದ ನಿಟ್ಟೆ ಗ್ರಾಮದ ಶ್ರೀ ಕೈಲಾಜೆ ಉಮಾಮಹೇಶ್ವರ ದೇವಸ್ಥಾನಕ್ಕೆ ಬಂದು ಸಂಗೀತ ಹಾಡಿದರು.
ಕೆ. ರಘುಪತಿ ಭಟ್ಟ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಉಚ್ಚಾಟಿತ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್ ರಘುಪತಿ ಭಟ್ಟರಿಗೆ ಸದಾ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.
ಅವರಿಗೆ ಒಬ್ಬರಿಗೇ ಟಿಕೆಟ್ ಕೊಡಬೇಕು ಎಂದರೆ ನಾವೆಲ್ಲಿ ಹೋಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಅವರು ರಘುಪತಿ ಭಟ್ ಹಾಗೂ ಈಶ್ವರಪ್ಪ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸ್ತಾ ಇಲ್ಲ. ಅಲ್ಟ್ರಾ ಎಕ್ಸ್ ಟೀಂ ಎಡಪಂಥೀಯರು ಆಡಳಿತ ನಡೆಸ್ತಾ ಇದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್ ಸಹಿತ ನಾಲ್ವರು ಬಿಜೆಪಿ ಪದಾಧಿಕಾರಿಗಳನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾದೂರಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮರದ ಹುಡಿಯನ್ನು ಸಂಗ್ರಹಿಸಿಟ್ಟಿದ್ದ ಗೋಡೌನ್ ಗೆ ಬೆಂಕಿ ತಗುಲಿದೆ. ಹೊಗೆ ಮತ್ತು ಬೆಂಕಿಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ಉಂಟಾಯಿತು.
ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಪ್ರಚಾರ ಪತ್ರದಲ್ಲಿ ಬಹಳ ದೊಡ್ಡ ಎಡವಟ್ಟು ಕಂಡುಬಂದಿದೆ.
ವರ್ಷದ ಹಿಂದೆ ಕಾಪು ತಾಲೂಕಿನ ಪಾಂಗಾಳದಲ್ಲಿ ಹತ್ಯೆಗೀಡಾಗಿದ್ದ ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ.
ಬಿಜೆಪಿಯಿಂದ ಉಚ್ಚಾಟನೆಯಾಗಿರುವ ರಘುಪತಿ ಭಟ್ ಅವರಿಗೆ ಹಿಜಾಬ್ ವಿವಾದದ ವಿಧ್ಯಾರ್ಥಿನಿ ಅಲಿಯಾ ಆಸ್ಸಾದಿ ತಿರುಗೇಟು ನೀಡಿದ್ದು, “ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು” ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಖಾಸಗಿ ಬಸ್ಸೊಂದು ಸೇತುವೆ ಬದಿಯ ದಂಡೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಕಲ್ಯಾಣಪುರ ಸೇತುವೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ದುರ್ಘಟನೆ ಸಂಭವಿಸಿಲ್ಲ.ಬಹಳ ದೊಡ್ಡ ದುರಂತದಿಂದ ಪ್ರಯಾಣಿಕರು ಪಾರಾಗಿದ್ದಾರೆ.
ಬ್ರಹ್ಮಾವರ ತಾಲೂಕಿನ ಮಟಪಾಡಿ ಶಾಲೆ ಬಳಿ ಇರುವ ಮೆಸ್ಕಾಂ ಟ್ರಾನ್ಸ್ ಫಾರ್ಮರ್ ಗ್ರಾಮಸ್ಥರ ನಿದ್ದೆಗೆಡಿಸಿದೆ. ಕಬ್ಬಿಣದ ಕಂಬಗಳನ್ನು ಅಳವಡಿಸಿ ದಶಕಗಳ ಹಿಂದೆ ನಿರ್ಮಿಸಿರುವ ಈ ಟ್ರಾನ್ಸ್ಫಾರ್ಮರ್ ಮಳೆಗಾಲದಲ್ಲಿ ಆತಂಕ ಉಂಟು ಮಾಡಿದೆ.
ಕೊಂಕಣ ರೈಲ್ವೆ ಟ್ರ್ಯಾಕ್ ನ ರೈಲ್ವೆ ಹಳಿಯಲ್ಲಿ ಲೋಪ ಪತ್ತೆಯಾದ ಪರಿಣಾಮ ಭಾರಿ ಅವಘಡ ತಪ್ಪಿದೆ. ಉಡುಪಿ ಜಿಲ್ಲೆಯ ಪಡುಬಿದ್ರೆ ಮತ್ತು ಇನ್ನಂಜೆಯ ಪ್ರದೇಶದ ಮಧ್ಯೆ ರೈಲ್ವೆ ಹಳಿಯಲ್ಲಿ ವೆಲ್ಡ್ ಫೈಲ್ಯೂರ್ ನಡೆದಿತ್ತು.