Showing 20 of 3348 posts • Page 17 of 168
ಉಡುಪಿ ಸಮೀಪದ ಹಿರಿಯಡ್ಕದ ಶ್ರೀ ಪುತ್ತಿಗೆ ಮೂಲ ಮಠದಲ್ಲಿ ವಾರ್ಷಿಕ ಅಭಿಷೇಕ ಮಹೋತ್ಸವವು ಭಕ್ತಿಭಾವದಿಂದ ನಡೆಯಿತು.
ಶಿರ್ವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಾನ್ ಬಾಸ್ಕೋ–ಶಿರ್ವ ಮಸೀದಿ ಸಮೀಪ, ಶಿರ್ವದಿಂದ ಉಡುಪಿ ಕಡೆಗೆ ಸಾಗುವ ಮುಖ್ಯ ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಯನ್ನು ಸ್ಥಳೀಯ ಯುವಕರು ಸ್ವಯಂಪ್ರೇರಿತವಾಗಿ ಮುಚ್ಚಿ ಸಮಾಜಸೇವೆಗೆ ಮಾದರಿಯಾಗಿದ್ದಾರೆ.
ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಹೊಸದಿಲ್ಲಿಯಲ್ಲಿ ನೀಟ್ ಹಗರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಯುವಜನರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಸಹಬಾಳ್ವೆ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ), ಎಸ್ಐಒ ಹಾಗೂ ಉಡುಪಿ ಜಿಲ್ಲಾ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಸಂಘಟನೆಗಳ ನೇತೃತ್ವದಲ್ಲಿ ನಗರದ ಹಳೆ ಬಸ್ ನಿಲ್ದಾಣದ ಬಳಿ ಪ್ರತಿಭಟನಾ ಸಭೆ ನಡೆಯಿತು.
ಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ನ್ಯಾಯ ಕೇಳಲು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರ ಸೋಗಿನಲ್ಲಿ ಬಂದವರು ಲಾಠಿಚಾರ್ಜ್ ನಡೆಸಿ ದೌರ್ಜನ್ಯ ಎಸಗಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಆರೋಪಿಸಿದರು.
ಆದಿಉಡುಪಿಯ ಮಧ್ವನಗರದಲ್ಲಿ ರಿಕ್ಷಾ ಚಾಲಕರೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರೇ ಇಂದು ಭಕ್ತರು ಸಮರ್ಪಿಸಿದ ಕಾಣಿಕೆಗಳ ಹುಂಡಿಗೆ ಕೈ ಹಾಕಿದ್ದಾರೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿರುವ 16ನೇ ಆವೃತ್ತಿಯ ಉಚಿತ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ–2026’ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದರು.
ಅಯೋಧ್ಯೆಯ ಶ್ರೀರಾಮ ಮಂದಿರದ ಹುಂಡಿ ಹಣ ಹಾಗೂ ಭಕ್ತರು ಸಮರ್ಪಿಸಿದ ಕಾಣಿಕೆಗಳ ದುರ್ಬಳಕೆ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಟ್ರಸ್ಟಿಗಳು, ಸಿಬ್ಬಂದಿ ಹಾಗೂ ಪರೋಕ್ಷವಾಗಿ ಸಹಕರಿಸಿದವರ ವಿರುದ್ಧ ಸ್ವತಂತ್ರ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಜಾಥಾ ಹಾಗೂ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಯಿತು.
ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಗಂಭೀರವಾಗಿದ್ದರೂ, ಇಂತಹ ಘಟನೆಗಳು ಕೇವಲ ನೀಟ್ಗೆ ಸೀಮಿತವಾಗಿಲ್ಲ.
ಕಲ್ಯಾಣಪುರ ಸಂತೆಕಟ್ಟೆ ಪ್ರದೇಶದಲ್ಲಿ ಬೃಹತ್ ಗಾತ್ರದ ಮರವೊಂದು ಏಕಾಏಕಿ ರಸ್ತೆಗೆ ಧರೆಗುರುಳಿದ ಪರಿಣಾಮ ಸಾರ್ವಜನಿಕರು ಕೆಲಕಾಲ ಆತಂಕಕ್ಕೊಳಗಾದ ಘಟನೆ ನಡೆದಿದೆ.
ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಬ್ರಹ್ಮಗಿರಿ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಗುಜ್ಜಾಡಿ ಸ್ವರ್ಣ ಜುವೆಲರ್ಸ್ ಪ್ರೈವೇಟ್ ಲಿಮಿಟೆಡ್ನ ಸಂಸ್ಥಾಪಕರಾದ ದಿ. ಗುಜ್ಜಾಡಿ ನರಸಿಂಹ ನಾಯಕ್ ಅವರ ಜನ್ಮಶತಮಾನೋತ್ಸವ ವರ್ಷದ ಅಂಗವಾಗಿ ‘ಗುಜ್ಜಾಡಿ ನರಸಿಂಹ ನಾಯಕ್ ಅವರ ನೆನಪುಗಳು’ ಕೃತಿಯ ಬಿಡುಗಡೆ ಸಮಾರಂಭ
ಶ್ರೀಕೃಷ್ಣ ಮಠದ ಪರ್ಯಾಯ ಶೀರೂರು ಮಠದ ಪೂರ್ವ ಯತಿಗಳಾದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ ಅಂಗವಾಗಿ ಮಂಗಳವಾರ ಶ್ರೀಕೃಷ್ಣ ಮಠದ ಭೋಜನಶಾಲೆಯಲ್ಲಿ ಪಲ್ಲಪೂಜೆ ಭಕ್ತಿಭಾವದಿಂದ ನೆರವೇರಿತು.
2002ರಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಪಡುಬಿದ್ರಿ ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಮಂಗಳವಾರ ಬಾರ್ಕೂರಿನ ಇತಿಹಾಸ ಪ್ರಸಿದ್ಧ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳ ಕುರಿತು ಸಮಿತಿಯ ಸದಸ್ಯರೊಂದಿಗೆ ಚರ್ಚೆ ನಡೆಸಿದರು.
ದೇಶದಲ್ಲಿ ಮತ್ತೆ ಕೋವಿಡ್-19 ಸೋಂಕಿನ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ.
ಕರಾವಳಿಯ ಆಟಿ ತಿಂಗಳ ಸಂಪ್ರದಾಯ, ಹಳೆಯ ಜೀವನಶೈಲಿ, ಔಷಧೀಯ ಸಸ್ಯಗಳು ಹಾಗೂ ಸಾಂಪ್ರದಾಯಿಕ ಆಹಾರ ಸಂಸ್ಕೃತಿಯನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಮಣಿಪುರದಲ್ಲಿ ‘ಆಟಿದ ನೆನಪು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಮಂಗಳವಾರ ಬಾರ್ಕೂರಿನ ಸಂತೆಗುಡ್ಡೆಯ ಮಾಲೀಕ್ ದಿನಾರ್ ಜುಮ್ಮಾ ಮಸೀದಿಗೆ ಭೇಟಿ ನೀಡಿ, ಮಸೀದಿಯ ಆಡಳಿತ ಸಮಿತಿಯಿಂದ ಸನ್ಮಾನ ಸ್ವೀಕರಿಸಿದರು.
ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ ವಿಧಿಸಲಾಗಿರುವ ತಡೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಗ್ರಹಿಸಿದರು.