Showing 20 of 3348 posts • Page 18 of 168
ಮಹೀಂದ್ರಾ ಥಾರ್ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಶಿರ್ವ–ಕಟಪಾಡಿ ರಾಜ್ಯ ಹೆದ್ದಾರಿಯ ಬಂಟಕಲ್ ಸಮೀಪದ ಬಿ.ಸಿ. ರಸ್ತೆ ಬಳಿ ನಡೆದಿದೆ.
‘ಡಿಜಿಟಲ್ ಅರೆಸ್ಟ್’ ಸೈಬರ್ ವಂಚನೆಗೆ ಬಲಿಯಾಗಿ 76 ವರ್ಷದ ವ್ಯಕ್ತಿಯೊಬ್ಬರು 9.29 ಲಕ್ಷ ರೂ.ಗಳನ್ನು ಕಳೆದುಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಕುಂಜಾರುಗಿರಿ ಶ್ರೀದುರ್ಗಾ ದೇವಸ್ಥಾನದಲ್ಲಿರುವ ಶ್ರೀ ಬಾಣತೀರ್ಥ ಶ್ರೀ ಉಮಾಮಹೇಶ್ವರ ಸನ್ನಿಧಿಯ ಜೀರ್ಣೋದ್ಧಾರ ಸೇವಾಪತ್ರವನ್ನು ಶ್ರೀ ಅದಮಾರು ಕಿರಿಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಅನಾವರಣಗೊಳಿಸಿದರು.
ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಲ್ಲಿ ಚರ್ಮ ಗಂಟು ರೋಗ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಉಡುಪಿ: ಎಂಡಿಎಂಎ, ಹೈಡ್ರೋಗಾಂಜಾ ಮಾರಾಟ ಜಾಲ ಭೇದಿಸಿದ ಪೊಲೀಸರು!
ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ಯಾಂಕ್ ಖಾತೆಯ ಚೆಕ್ಗಳಿಗೆ ನಕಲಿ ಸಹಿ ಮಾಡಿ ಹಣ ಪಡೆಯಲು ಯತ್ನಿಸಿದ ಆರೋಪದಡಿ ಮಾಜಿ ಡಾಟಾ ಎಂಟ್ರಿ ಆಪರೇಟರ್ನನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.
ಅಭಿವೃದ್ಧಿಯಲ್ಲಿ ಮಾದರಿ ಜಿಲ್ಲೆ ಎಂದು ಗುರುತಿಸಿಕೊಂಡಿರುವ ಉಡುಪಿ ಜಿಲ್ಲೆಯಲ್ಲೇ ಇನ್ನೂ ರಸ್ತೆಗಾಗಿ ಕಾಯುತ್ತಿರುವ ಕುಟುಂಬ!
ಕಟಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಚ್ಚಡದಲ್ಲಿ ಬೀದಿ ನಾಯಿಗಳ ಹಾವಳಿ ಮತ್ತೆ ಆತಂಕಕ್ಕೆ ಕಾರಣವಾಗಿದ್ದು, ನಿವೃತ್ತ ಶಿಕ್ಷಕರೊಬ್ಬರ ಮನೆಯಲ್ಲಿ ಸಾಕಿದ್ದ ಐದು ಆಡುಗಳನ್ನು ಬೀದಿ ನಾಯಿಗಳ ಗುಂಪು ಕಚ್ಚಿ ಕೊಂದಿರುವ ಬಗ್ಗೆ ವರದಿಯಾಗಿದೆ.
ಜಿಲ್ಲೆಯ ಪ್ರಸಿದ್ಧ ಅಂಬಲಪಾಡಿ ಶ್ರೀ ಜನಾರ್ಧನ ಮಹಾಕಾಳಿ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪುಷ್ಪಾಲಂಕಾರ ನೆರವೇರಿದ್ದು, ದೇವಾಲಯವು ವರ್ಣರಂಜಿತ ಹೂವಿನ ಅಲಂಕಾರದಿಂದ ಕಂಗೊಳಿಸಿತು.
ಸೋನಂ ವಾಂಗ್ಚು ಉಪವಾಸ ವಿಚಾರವಾಗಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.
ಹಲವು ದಿನಗಳ ವಿರಾಮದ ಬಳಿಕ ಉಡುಪಿ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಆರಂಭವಾದ ಮಳೆ ಶುಕ್ರವಾರವೂ ಮುಂದುವರಿದಿದ್ದು, ಜನರಿಗೆ ಬಿಸಿಲಿನ ಬೇಗೆಯಿಂದ ನಿರಾಳತೆ ನೀಡಿದೆ.
ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಂಡರೆ ಮಾತ್ರ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ದೊರೆಯಲಿದ್ದು, ಈ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿ: ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿ, ಅದರ ಕುರಿತು ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಒತ್ತಾಯಿಸಿದರು.
ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ರಾಜ್ಯ ಸರ್ಕಾರವು ಮಹತ್ವದ ಉತ್ತೇಜನ ನೀಡಿದ್ದು, 2025-26ನೇ ಸಾಲಿನ 23 ಕಂಬಳಗಳಿಗೆ ತಲಾ ₹5 ಲಕ್ಷದಂತೆ ಒಟ್ಟು ₹1.15 ಕೋಟಿ ಅನುದಾನ ಮಂಜೂರು ಮಾಡಿದೆ.
ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಅವರು ಪ್ರತಿಷ್ಠಿತ ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ.
ಆರೂರು ಗ್ರಾಮದಲ್ಲಿ ವಾರಾಹಿ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿಯ ನಿರ್ಲಕ್ಷ್ಯ ಈಗ ರೈತರ ಬದುಕಿಗೆ ದೊಡ್ಡ ಸಂಕಷ್ಟವಾಗಿ ಪರಿಣಮಿಸಿದೆ.
ಆಗುಂಬೆ ಘಾಟಿಯಲ್ಲಿ ಟನಲ್ ನಿರ್ಮಾಣ ಹಾಗೂ ರಸ್ತೆ ಅಗಲೀಕರಣ ಕುರಿತು ಇದುವರೆಗೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಕುಂದಾಪುರ ತಾಲೂಕಿನ ಸಿದ್ದಾಪುರ ಭಾಗದ ವಿಜಯಕರ್ನಾಟಕ ಪತ್ರಿಕೆಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪತ್ರಕರ್ತ ನಾಗೇಶ್ ಗಾಣಿಗ ನೇರಳಕಟ್ಟೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಣಿಪಾಲ ಮತ್ತು ಕೊಳಲಗಿರಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾದ ಪರಾರಿ ಶೀಂಬ್ರಾ ಸೇತುವೆಯು ಪುಂಡು ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜೀವವನ್ನು ಪಣಕ್ಕಿಟ್ಟು ದುಡಿಯುವ ಮೀನುಗಾರರ ಬದುಕು ಮಾತ್ರ ಇಂದಿಗೂ ಅತಂತ್ರ!