Showing 20 of 3077 posts • Page 19 of 154
ಇಂದಿನ ಪ್ರಪಂಚದಲ್ಲಿ ಮರ, ಬೀಜದ ಬಗ್ಗೆ ಮಾತ್ರ ಯೋಚನೆ ಮಾಡುತ್ತಾರೆ. ಆದರೆ ಭೂಮಿ ಬಗ್ಗೆ ಯಾರು ಮಾತನಾಡುತ್ತಿಲ್ಲ. ಪ್ರತಿಯೊಂದು ಬೀಜದಲ್ಲೂ ಮರವಾಗುವ ಶಕ್ತಿ ಹಾಗೂ ಗುಣ ಇದೆ.
ಕನ್ನಡ ಭಾಷೆಯ ಬಳಕೆಯಲ್ಲಿ ಬಹಳಷ್ಟು ವಿವಿಧ ಕನ್ನಡ ಪ್ರಕಾರಗಳಿವೆ. ನಾವು ಮಾತಾನುಡುವುದು ಕನ್ನಡ ಪುಸ್ತಕದ ಕನ್ನಡ. ಪಠ್ಯ ಪುಸ್ತಕದಲ್ಲಿ ಇರುವಂತೆಯೇ ಮಾತನಾಡುತ್ತೇವೆ
ಆಸ್ತಿ ವಿಚಾರದಲ್ಲಿ ತಮ್ಮನೇ ತನ್ನ ಅಣ್ಣನ ಕೊಲೆ ಮಾಡಿರುವ ಘಟನೆ ಕಾರ್ಕಳ ಮಿತ್ತಬೆಟ್ಟು ಹಿರಿಯಂಗಡಿ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.
ಮಹತೋಭಾರ ಶ್ರೀ ವೀರಭದ್ರಸ್ವಾಮಿ ದೇಗುಲದ ವಾರ್ಷಿಕ ಸಿರಿ ಜಾತ್ರೆ ವಿಜೃಂಭಣೆಯಿಂದ ಸಂಪನ್ನಗೊಂಡಿತು.
ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯುವ ಮಹಾರುದ್ರಯಾಗದ ಪೂರ್ವಭಾವಿಯಾಗಿ ರವಿವಾರ ಚಪ್ಪರ ಮುಹೂರ್ತ ಕಾರ್ಯಕ್ರಮ ಜರಗಿತು.
ಸ್ಕಾರ್ಪಿಯೋ ಕಾರು, ಟ್ಯಾಂಕರ್ ಮತ್ತು ಸ್ಕೂಟರ್ ನಡುವಿನ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸಹ ಸವಾರ ಮೃತಪಟ್ಟ ಘಟನೆ ಕಾಪು ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದ ಬಳಿ ಗುರುವಾರ ಸಂಜೆ ಸಂಭವಿಸಿದೆ.
ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ, ಕಾರ್ಮಿಕ ಘಟಕದ ವತಿಯಿಂದ ಕಾರ್ಮಿಕ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಶುಕ್ರವಾರ ನಡೆಯಿತು.
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಬೀಷ್ಮೋತ್ಸವ’ ಸಾಹಿತ್ಯ -ಸಂಸ್ಕೃತಿ -ಕಲೋತ್ಸವವು ಇದೇ ಮೇ 3ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಕೆಮ್ತೂರು ದೊಡ್ಡಣ್ಣ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ ಎಂದು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್ಪಿ ಹೇಳಿದರು.
ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿಯಾಗಿ ಇಂದು ಬರೋಬ್ಬರಿ 993ರೂ. ಹೆಚ್ಚಳವಾಗಿದೆ.
ಇತ್ತೀಚಿಗೆ ಕಾರ್ಕಳದಲ್ಲಿ ಸಂಚಲನ ಉಂಟುಮಾಡಿದ್ದ ಉದ್ಯಮಿ ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣದಲ್ಲಿ ನಟಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆಯಾಗಿದೆ.
ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮತ್ಸ್ಯೋದ್ಯಮಿಗಳ ನಡುವೆ ಮಲ್ಪೆ ಬಂದರಿನಲ್ಲಿ ಗುರುವಾರ ಹೊಡೆದಾಟ ನಡೆದಿದೆ.
ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ ನಡೆದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ನಗರದ ಜಟ್ಕಾ ಸ್ಟ್ಯಾಂಡ್ ಬಳಿ ಮರವೊಂದು ರಸ್ತೆ ಮೇಲೆ ಬಿದ್ದಾಗ ಅಲ್ಲೇ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ಕೂದಲೆಳೆ ಅಂತರದಲ್ಲಿ ಜೀವಾಪಾಯದಿಂದ ಪಾರಾದರು.
“ನಾರಿ ಶಕ್ತಿ” ಹೆಸರಿನಲ್ಲಿ ರಾಜಕೀಯ ಲಾಭಕ್ಕಾಗಿ ಕೇಂದ್ರ ಬಿಜೆಪಿ ಸರಕಾರವು ಕೆಲವೊಂದು ಕಾನೂನುಗಳನ್ನು ಜಾರಿಗೊಳಿಸಲು ಮುಂದಾಗಿದೆ. ಮಹಿಳೆಯರ ಸಬಲೀಕರಣದ ಹೆಸರಿನಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಕಾಯ್ದೆ 2026 ಜಾರಿಗೊಳಿಸಿ, ಆ ಮೂಲಕ ಚುನಾವಣಾ ಕ್ಷೇತ್ರಗಳನ್ನು ತಮ್ಮ ಲಾಭಕ್ಕೆ ತಿರುಗಿಸಲು ಬಿಜೆಪಿ ಸಂಚು ರೂಪಿಸಿತ್ತು ಎಂದು ಕರ್ನಾಟಕ ರಾಜ್ಯ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕರಾದ ಕೃಪಾ ಆಳ್ವ ಆರೋಪಿಸಿದರು.
ಇಲ್ಲಿನ ಕೊರಂಗ್ರಪಾಡಿ ಎಂಬಲ್ಲಿ ಮನೆ ಸಮೀಪದ ಬಾವಿ ಸ್ವಚ್ಚತೆಗೆ ಇಳಿದ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದ ವ್ಯಕ್ತಿಯೊಬ್ಬರನ್ನು ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ರಕ್ಷಿಸಿದ್ದಾರೆ.
ಸಮುದ್ರದಿಂದಾಗಿ ಕರಾವಳಿ ಪ್ರದೇಶದ ವಾತಾವರಣದಲ್ಲಿ ತೇವಾಂಶ (ಹ್ಯುಮಿಡಿಟಿ) ಹೆಚ್ಚು ಇರುತ್ತದೆ. ಆದುದರಿಂದ ಇಲ್ಲಿನ ವಾತಾವರಣಕ್ಕೆ ಏರ್ ಕೂಲರ್ಗಿಂತ ಏರ್ ಕಂಡೀಷನರ್ ಅತೀ ಸೂಕ್ತವಾಗಿದೆ ಎಂದು ಮೋಲ್ಟೋಕೇರ್ ಪ್ರಾಪರ್ಟಿ ಸರ್ವೀಸ್ನ ನಿರ್ದೇಶಕ ಕೃಷ್ಣರಾಜ ತಂತ್ರಿ ಹೇಳಿದರು.
ಜಿಲ್ಲೆಯಲ್ಲಿ ತೀವ್ರ ಉರಿ ಬಿಸಿಲಿನ ಪರಿಣಾಮ ಈಗ ಜಲಮೂಲಗಳ ಮೇಲೂ ಸ್ಪಷ್ಟವಾಗಿ ಕಾಣಿಸುತ್ತಿದೆ. ಜಿಲ್ಲೆಯ ಜೀವನಾಡಿಯಾದ ಸ್ವರ್ಣ ನದಿಯ ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ನೀರಿನ ಅಭಾವದ ಆತಂಕ ಮೂಡಿಸಿದೆ.
ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ತ್ರಾಸಿಯ ಮರವಂತೆ ಬೀಚ್ ಬಳಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.
ಇತ್ತೀಚಿಗೆ ಬ್ರಹ್ಮಾವರದಲ್ಲಿ ನಡೆದಿದ್ದ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಎಚ್ಎಂಸಿ ಯುನೈಟೆಡ್ ಟ್ರೋಫಿ 2026ಕ್ಕೆ ಕೆಲವು ಕಿಡಿಗೇಡಿಗಳ ಒಳಸಂಚಿನಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡು ವಿವಾದಕ್ಕೀಡಾಗಿತ್ತು.
2022ರಲ್ಲಿ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ತಾಯಿ–ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ತೀರ್ಪು ನೀಡಿದೆ.