Showing 20 of 3348 posts • Page 2 of 168
ಜಾಗತಿಕ ಮಟ್ಟದಲ್ಲಿ ವ್ಯಾಪಾರದ ಚಿತ್ರಣ ಬದಲಾಗಿದ್ದು, ಚಿನ್ನ ಮತ್ತು ಬೆಳ್ಳಿ ವ್ಯವಹಾರಗಳು ಕಾರ್ಪೊರೇಟ್ ಮಾದರಿಯಲ್ಲಿ ನಡೆಯುತ್ತಿವೆ
ಮೊಗವೀರ ಸಮಾಜದ ಗುರು ಪರಂಪರೆಯ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿಯನ್ನು ಉಚ್ಚಿಲ ಮೊಗವೀರ ಭವನದಲ್ಲಿ ಶುಕ್ರವಾರ ಅನಾವರಣಗೊಳಿಸಲಾಯಿತು.
ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಶುಕ್ರವಾರ ಕಡಿಯಾಳಿ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.
ಶಾರ್ಜಾದಲ್ಲಿ ಅಮಾನವೀಯವಾಗಿ ಹತ್ಯೆಗೀಡಾದ ಕುಂದಾಪುರ ತಾಲೂಕಿನ ಹೊನ್ನನಕೇರಿ ನಿವಾಸಿ ಆಲ್ವಿನ್ ಪ್ರಕಾಶ್ ಕುಂದರ್ ಅವರ ಪಾರ್ಥಿವ ಶರೀರ ಶುಕ್ರವಾರ ತವರಿಗೆ ತಲುಪಿತು.
ಉಡುಪಿ–ಮೂಡುಬೆಳ್ಳೆ ಮಾರ್ಗದಲ್ಲಿ ಸಂಚರಿಸುವ ‘ಶ್ರೀ ಕೃಷ್ಣಪ್ರಸಾದ್’ ಹೆಸರಿನ ಸಿಟಿ ಬಸ್ವೊಂದು ದೆಂದೂರುಕಟ್ಟೆಯ ಎಂಆರ್ಪಿಎಲ್ ಪೆಟ್ರೋಲ್ ಪಂಪ್ ಬಳಿ ಗುರುವಾರ ತಡರಾತ್ರಿ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾಗಿದೆ.
ಆಟೋಇಮ್ಯೂನ್ ಕಾಯಿಲೆಗಳ ನಿರ್ವಹಣೆಯಲ್ಲಿ ಆಯುರ್ವೇದದ ಸಾಧ್ಯತೆಗಳು ಹಾಗೂ ಆಧುನಿಕ ರೋಗನಿರೋಧಕ ವಿಜ್ಞಾನದೊಂದಿಗೆ ಅದರ ಸಮನ್ವಯ ಕುರಿತು ಜಾಗತಿಕ ಮಟ್ಟದ ಚರ್ಚೆಗೆ ಉಡುಪಿ ವೇದಿಕೆಯಾಗಲಿದೆ.
ಬಿಕರ್ನಕಟ್ಟೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಣೂರು ಶ್ರೀರಾಮ ಮಂದಿರದ ಎದುರಿನ ಸೇತುವೆ ಕಾಮಗಾರಿ ನಿಧಾನಗತಿ, ಅವೈಜ್ಞಾನಿಕ ಸಂಚಾರ ವ್ಯವಸ್ಥೆ ಹಾಗು ಅಪೂರ್ಣ ಸುರಕ್ಷತಾ ಕ್ರಮಗಳಿಂದ ಈ ಭಾಗ ಇದೀಗ ವಾಹನ ಸವಾರರಿಗೆ ಅಪಘಾತಗಳ ಹಾದಿಯಾಗಿ ಪರಿಣಮಿಸಿದೆ.
ಕೆಪಿಎಸ್ಸಿ ಹಗರಣದ ತನಿಖೆಗೆ ಸಂಬಂಧಿಸಿ ಹೈಕೋರ್ಟ್ ನೀಡಿರುವ ನಿರ್ದೇಶನವನ್ನು ರಾಜ್ಯ ಸರ್ಕಾರ ಅಂಗೀಕರಿಸಿ, ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು.
ವಂದೇ ಮಾತರಂ ಹಾಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮದ ಬಗ್ಗೆ ಚರ್ಚೆ ಅಪ್ರಸ್ತುತ ಎಂದು ಹೇಳಿರುವ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಪೂರ್ಣ ವಂದೇ ಮಾತರಂ ಹಾಡದಿದ್ದರೆ ಬಿಜೆಪಿ ತನ್ನ ಪ್ರತಿರೋಧ ಮುಂದುವರಿಸಲಿದೆ ಎಂದು ಹೇಳಿದರು.
ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಭೂ ಸರ್ವೇ ನಡೆಸಲು ಮುಂದಾಗಿರುವುದು ಸರಿಯಾದ ಕ್ರಮ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಂಗಳೂರಿನಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ ₹32 ಸಾವಿರ ಕೋಟಿ ಮೊತ್ತದ ಕರಾವಳಿ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಶಾರ್ಜಾದಲ್ಲಿ ಉಡುಪಿ ಮೂಲದ ಆಲ್ವಿನ್ ಪ್ರಕಾಶ್ ಕುಂದರ್ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೃತದೇಹವನ್ನು ಭಾರತಕ್ಕೆ ತರಲು ವಿದೇಶಾಂಗ ಇಲಾಖೆ ಹಾಗೂ ಶಾರ್ಜಾದ ರಾಯಭಾರಿ ಕಚೇರಿಯೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಶಿರ್ವ ಹಾಗೂ ಉಡುಪಿ ನಗರ ಪೊಲೀಸರು ಪ್ರತ್ಯೇಕವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುಗಳ ಸಾಗಾಟ ಮತ್ತು ದಾಸ್ತಾನು ಪ್ರಕರಣ
ಕನ್ನರ್ಪಾಡಿ–ಕಿನ್ನಿಮುಲ್ಕಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ಹತ್ತು ದಿನಗಳಿಂದ ನಡೆಯುತ್ತಿದ್ದ 21ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಮಾರೋಪದ ಅಂಗವಾಗಿ ಬುಧವಾರ ರಾತ್ರಿ ವೈಭವದ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಿತು.
ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ವೀಕ್ಷಕ ವಿವರಣೆಕಾರ ರವಿಶಾಸ್ತ್ರಿ ಅವರು ಗುರುವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.
ಬೈಂದೂರು ತಾಲ್ಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು ಬುಧವಾರ ದಾಳಿ ನಡೆಸಿ, ₹16 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಬರ್ಬರವಾಗಿ ಹತ್ಯೆಗೀಡಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು ಮೂರು ತಿಂಗಳ ಹಿಂದೆ ನಡೆದಿರಬಹುದು ಎನ್ನಲಾದ ಈ ಪ್ರಕರಣದಲ್ಲಿ ಪ್ರಕಾಶ್ ಕುಂದರ್ (ಹೆಸರು ಕುಟುಂಬದ ಮಾಹಿತಿ ಆಧಾರಿತ) ಅವರ ಶವವನ್ನು ಒಂಬತ್ತು ತುಂಡುಗಳಾಗಿ ಕತ್ತರಿಸಿ, ಅವರದ್ದೇ ಕಾರಿನ ಡಿಕ್ಕಿಯಲ್ಲಿ ಎರಡು ಚೀಲಗಳಲ್ಲಿ ಇರಿಸಲಾಗಿತ್ತು ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಬಂಧಿಕರ ಡಿಎನ್ಎ ಪರೀಕ್ಷೆಯ ಮೂಲಕ ಪತ್ತೆಯಾದ ಶವ ಪ್ರಕಾಶ್ ಅವರದ್ದೇ ಎಂಬುದು ದೃಢಪಟ್ಟಿದ್ದು, ಮೃತದೇಹವನ್ನು ಭಾರತಕ್ಕೆ ತರಲು ಕುಟುಂಬಸ್ಥರು ಪ್ರಯತ್ನ ನಡೆಸುತ್ತಿದ್ದಾರೆ.
ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಉಡುಪಿ ನಗರದಲ್ಲಿ ಬುಧವಾರ ಅದ್ಧೂರಿ ಮೆರವಣಿಗೆ ನಡೆಯಿತು. ನಗರದ ಪ್ರಮುಖ ಬೀದಿಗಳ ಮೂಲಕ ಅಜ್ಜರಕಾಡು ಪುರಭವನದವರೆಗೆ ನಡೆದ ಮೆರವಣಿಗೆಯಲ್ಲಿ ಪೌರ ಕಾರ್ಮಿಕರು ಹಾಗೂ ನಗರಸಭೆಯ ಅಧಿಕಾರಿಗಳು ಪಾಲ್ಗೊಂಡರು.
ಕನ್ನರ್ಪಾಡಿ–ಕಿನ್ನಿಮುಲ್ಕಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ನಡೆದ 21ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಮಾರೋಪ ಸಮಾರಂಭ ನಡೆಯಿತು.
ಕುಂದಾಪುರ ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದ್ದು ಬುಧವಾರ ಬೆಳಿಗ್ಗೆ ಮೃತದೇಹವನ್ನು ಹುಡುಕಿ ಮೇಲಕ್ಕೆತ್ತಲಾಯಿತು.