Showing 20 of 3348 posts • Page 20 of 168
ಮೂಡಬೆಟ್ಟು ನಿವಾಸಿ ಸುರೇಶ್ ಕೆ.(72) ಅಲ್ಪಕಾಲದ ಅಸೌಖ್ಯದಿಂದ ಜು.9ರಂದು ಸಂಜೆ ವೇಳೆ ನಿಧನರಾದರು.
ಸಮಾಜ ಸೇವೆ ಎಂದರೆ ಕೇವಲ ಹಣದ ನೆರವು ನೀಡುವುದಲ್ಲ, ತಮ್ಮ ವೃತ್ತಿಯನ್ನೇ ಸೇವೆಯಾಗಿ ರೂಪಿಸಿಕೊಳ್ಳುವುದೂ ನಿಜವಾದ ಮಾನವೀಯತೆ.
ಇದು ಕರಾವಳಿಯ ಅತ್ಯಂತ ಪ್ರಸಿದ್ದ ಜಲಪಾತಗಳಲ್ಲಿ ಒಂದು, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಕೊಟೇಶ್ವರ ಗ್ರಾಮದ ಕಿನಾರಾ ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಕುಂದಾಪುರ ಸಂಚಾರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಸರ್ಕಾರ ಪರಿಣಾಮಕಾರಿ ಕಡಿವಾಣ ಹಾಕುವಲ್ಲಿ ವಿಫಲವಾಗಿದೆ ಎಂದು ಕೆಆರ್ಎಸ್ ಪಕ್ಷದ ಉಡುಪಿ ಜಿಲ್ಲಾ ಉಸ್ತುವಾರಿ ವಿ.ಆರ್. ಮರಾಠೆ ಆರೋಪಿಸಿದರು.
ಸೆಲ್ಫಿ ವಿಡಿಯೋವನ್ನು ದುರುಪಯೋಗಪಡಿಸಿಕೊಂಡು ಬ್ಲ್ಯಾಕ್ಮೇಲ್ ಮಾಡಿ ₹51.84 ಲಕ್ಷಕ್ಕೂ ಅಧಿಕ ಹಣ ಹಾಗೂ ಚಿನ್ನಾಭರಣ ಪಡೆದು ವಂಚನೆ ಎಸಗಿರುವ ಆರೋಪದಡಿ ಇಬ್ಬರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲದ ಕ್ರೈಸ್ಟ್ ಸ್ಕೂಲ್ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಅಪಘಾತಕ್ಕೀಡಾದ ಘಟನೆ ಉಡುಪಿಯ ಕೊಡಂಗೆ ದೇವಸ್ಥಾನದ ಸಮೀಪ ಶುಕ್ರವಾರ ಸಂಭವಿಸಿದೆ.
: ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಜಾರಿಯಲ್ಲಿದ್ದರೂ ಬಹುತೇಕ ಪ್ರದೇಶಗಳಲ್ಲಿ ನಿರೀಕ್ಷಿತ ಪ್ರಮಾಣದ ಮಳೆ ದಾಖಲಾಗಿಲ್ಲ. ಆದರೆ ಕರಾವಳಿ ಭಾಗದಲ್ಲಿ ಬಿರುಗಾಳಿಯ ವೇಗ ಹೆಚ್ಚಾಗಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ತೀವ್ರಗೊಂಡಿದೆ.
: ಹತ್ತು ವರ್ಷಗಳ ಅವಧಿಗೆ ಉಡುಪಿಯ ಸಮಗ್ರ ಅಭಿವೃದ್ಧಿಯ ನೀಲನಕಾಶೆ ತಯಾರಿಸಲು ಪೂರ್ವ ಭಾವಿ ಸಿದ್ಧತೆಯಾಗಿ ಇದೇ ಜುಲೈ12ರಂದು ಸಂಜೆ 5:30ಕ್ಕೆ ಉಡುಪಿಯ ಹೊಟೇಲ್ ಕಿದಿಯೂರಿನ ಶೇಷಶಯನ್ ಹಾಲ್ನಲ್ಲಿ ವಿವಿಧ ಸಂಘಟನೆಗಳು, ಜನಪ್ರತಿನಿಧಿಗಳು, ಗಣ್ಯರನ್ನೊಳಗೊಂಡ ‘ಉಡುಪಿ ವಿಷನ್-2035’ ಸಭೆ ಯನ್ನು ಕರೆಯಲಾಗಿದೆ ಎಂದು ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ನ ಅಧ್ಯಕ್ಷ ಅಮ್ಮುಂಜೆ ಪ್ರಭಾಕರ ನಾಯಕ್ ಹೇಳಿದ್ದಾರೆ.
ಉಡುಪಿ ನಗರ ಪ್ರದೇಶದ ಒಣಕಸಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಉದ್ದೇಶದಿಂದ ಬೀಡಿನಗುಡ್ಡೆಯಲ್ಲಿ ನಿರ್ಮಿಸಲಾಗುತ್ತಿರುವ ಎಂಆರ್ಎಫ್(ಮೆಟೀರಿಯಲ್ ರಿಕವರಿ ಪೆಸಿಲಿಟಿ) ಘಟಕಕ್ಕೆ ಬೀಡಿನಗುಡ್ಡೆ ಅಭಿವೃದ್ಧಿ ಸಮಿತಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಪಶ್ಚಿಮ ಘಟ್ಟದ ಜೀವವೈವಿಧ್ಯ ಅಧ್ಯಯನಕ್ಕೆ ಮಹತ್ವದ ಬೆಳವಣಿಗೆಯಾಗಿ, ಭಾರತದ ಏಕೈಕ ನೈಜ ಮರವಾಸಿ ಸಿಹಿನೀರಿನ ಏಡಿ ‘ಕನಿ ಮರನಂಡು’ ಮೊದಲ ಬಾರಿಗೆ ಆಗುಂಬೆಯಲ್ಲಿ ದಾಖಲಾಗಿದೆ.
: ಮಳೆಗಾಲದಲ್ಲಿ ಅರಬ್ಬಿ ಸಮುದ್ರದ ರೌದ್ರ ರೂಪವನ್ನು ಕಣ್ತುಂಬಿಕೊಳ್ಳಲು ಉಡುಪಿ ಜಿಲ್ಲೆಯ ಕಾಪು ಲೈಟ್ಹೌಸ್ ಸುತ್ತಮುತ್ತ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ.
ರಾಮ ಮಂದಿರ ದೇಣಿಗೆ ಮತ್ತು ಹುಂಡಿ ಕಳವು ಹಾಗೂ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಳಿಬರುತ್ತಿರುವ ಆರೋಪಗಳ ಕುರಿತು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಆಗ್ರಹಿಸಿದರು.
ಜಿಲ್ಲೆಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಿನ್ನೆ ರಾತ್ರಿಯಿಂದಲೇ ಭಾರೀ ಮಳೆ ಸುರಿಯುತ್ತಿದೆ.
ನೀಟ್ ಪರೀಕ್ಷೆಯಲ್ಲಿನ ಅಕ್ರಮದ ವಿರುದ್ಧ ಹಾಗೂ ಇದರಿಂದ ಅಸುನೀಗಿದ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕ್ಯಾಂಡಲ್ ಲೈಟ್ ಮಾರ್ಚ್ ಹಮ್ಮಿಕೊಳ್ಳಲಾಗಿತ್ತು.
ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರವೇ ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಹಲವು ಬಾರಿ ಪುರಸಭೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಾರ್ವಜನಿಕರು ರಸ್ತೆ ಮಧ್ಯದ ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ಕಾರ್ಕಳ ಪುರಸಭೆ ವ್ಯಾಪ್ತಿಯ ಕಲ್ಲೊಟ್ಟೆ-ಬಂಡಿಮಠ ರಸ್ತೆಯಲ್ಲಿ ನಡೆದಿದೆ.
ಇಲ್ಲಿನ ಜಿಲ್ಲಾ ನ್ಯಾಯಾಲಯಕ್ಕೆ ಇತ್ತೀಚಿನ ದಿನಗಳಲ್ಲಿ ಪದೇ ಪದೇ ಹುಸಿ ಬಾಂಬ್ ಬೆದರಿಕೆ ಕರೆ ಹಾಗೂ ಸಂದೇಶಗಳು ಬರುತ್ತಿರುವುದು ಸಾರ್ವಜನಿಕರಲ್ಲಿ ಮತ್ತು ನ್ಯಾಯಾಂಗ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಇಡೀ ನ್ಯಾಯಾಲಯದ ಪರಿಸರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್ನಿಂದ ₹80 ಸಾವಿರ ಕಳವು ಮಾಡಿದ ಆರೋಪದಡಿ ಮೂವರು ಮಹಿಳೆಯರನ್ನು ಕೊಲ್ಲೂರು ಪೊಲೀಸರು ಪ್ರಕರಣ ದಾಖಲಾದ 24 ಗಂಟೆಯೊಳಗೆ ಬಂಧಿಸಿದ್ದಾರೆ.
ಉಡುಪಿ ಪತ್ರಿಕಾ ಭವನ ಸಮಿತಿಯ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಸಮಿತಿಯ ನಿಕಟಪೂರ್ವ ಸಂಚಾಲಕ ಅಜಿತ್ ಆರಾಡಿ ಅಧ್ಯಕ್ಷತೆಯಲ್ಲಿ ಸೋಮವಾರ ಪತ್ರಿಕಾ ಭವನದಲ್ಲಿ ನಡೆಯಿತು.
ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಪದ್ಮಕಮಲ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಲ್ಲಿ ₹23 ಲಕ್ಷ ಹಣ ದುರ್ಬಳಕೆ ಹಾಗೂ ವಂಚನೆ ನಡೆಸಿದ ಆರೋಪದಡಿ ಇಬ್ಬರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.