Showing 20 of 3348 posts • Page 21 of 168
ಜಿಲ್ಲೆಯ ಕೆಲವು ಭಾಗಗಳಲ್ಲಿ ಕಳೆದ ರಾತ್ರಿಯಿಂದ ಸುರಿದ ಭಾರೀ ಗಾಳಿ ಮಳೆಗೆ 15 ಮನೆಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.
ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಸಹಿತ ಕಾಂಗ್ರೆಸ್ ನಾಯಕರಿಗೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಕಟ್ಟುವಾಗ ಇಲ್ಲದಂತಹಾ ರಾಮಭಕ್ತಿ ಇದೀಗ ದಿಢೀರ್ ಉಕ್ಕುತ್ತಿರುವುದು ಸಮಾಧಾನ ತಂದಿದೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವ್ಯಂಗ್ಯವಾಡಿದ್ದಾರೆ.
ಶ್ರೀಮಹಾಲಿಂಗೇಶ್ವರ ಮಹಾಗಣಪತಿ ಭಜನಾ ಮಂಡಳಿ, ಪರೀಕ ಆಶ್ರಯದಲ್ಲಿ ‘ಬಲೇ ಕೆಸರ್’ಡ್ಡ್ ಗೊಬ್ಬುಗ’ (ಬನ್ನಿ ಕೆಸರಿನಲ್ಲಿ ಆಡುವ) ವಿನೂತನ ಗ್ರಾಮೀಣ ಕ್ರೀಡಾಕೂಟವನ್ನು ಪರೀಕ ಅರಮನೆಯ ಬಾಕ್ಯಾರು ಗದ್ದೆಯಲ್ಲಿ ಭಾನುವಾರ ಆಯೋಜಿಸಲಾಯಿತು.
ವಾಹನ ದಟ್ಟಣೆಯಿಂದ ಆಂಬ್ಯುಲೆನ್ಸ್ಗಳಿಗೆ ಕಾರ್ಯ ನಿರ್ವಹಿಸಲು ಕಷ್ಟವಾಗುತ್ತಿದ್ದು, ಈ ನಿಟ್ಟಿನಲ್ಲಿ ಹಿಂದೆ ಆರಂಭಿಸಿದ್ದ ಬೈಕ್ ಆಂಬ್ಯುಲೆನ್ಸ್ಗೆ ಮತ್ತೆ ಅತೀ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಟೈಮಿಂಗ್ ವಿಚಾರದಲ್ಲಿ ಎರಡು ಸಿಟಿ ಬಸ್ ಚಾಲಕರ ನಡುವೆಯೇ ವಾಗ್ವಾದ ನಡೆದು ಬಳಿಕ ಸಿನಿಮೀಯ ರೀತಿಯಲ್ಲಿ ಬಸ್ಸುಗಳನ್ನು ಡಿಕ್ಕಿ ಹೊಡೆಸಿಕೊಂಡು ಹುಚ್ಚಾಟ ಮೆರೆದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.
ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮದ ಎತ್ತಿನಟ್ಟಿ–ಮದಗದ ಸಮೀಪ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾದ ಘಟನೆ ನಡೆದಿದೆ.
: ಉಡುಪಿ ಜಯಲಕ್ಷ್ಮೀ ಸಿಲ್ಕ್ಸ್ ಮುಂಭಾಗದಲ್ಲಿ ರಾ.ಹೆ. (169ಎ)ರಲ್ಲಿ ಶನಿವಾರ ಸಂಜೆ ಕೆಎಸ್ಆರ್ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಎರಡು ಕಾರುಗಳು ಜಖಂಗೊಂಡಿವೆ.
ರಾಜ್ಯ ಮಟ್ಟದ ಫ್ಯಾಶನ್ ಶೋ ನಲ್ಲಿ ಉಡುಪಿಯ ರಕ್ಷಿತ ಮಿಸ್ ಮಣಿಪಾಲ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ನಗರದ ಹಳೆ ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ನಗರ ಠಾಣೆ ಪೊಲೀಸರು ಕ್ಷೀಪ್ರ ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ದೇವಾಡಿಗ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿ, ಸಮುದಾಯಕ್ಕೆ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು ಎಂಬ ಉದ್ದೇಶದಿಂದ ವಿಶ್ವ ದೇವಾಡಿಗ ಮಹಾಮಂಡಳ, ಬಾರ್ಕೂರು ವತಿಯಿಂದ ಡಿಸೆಂಬರ್ 20ರಂದು ಉಡುಪಿಯ ಚಿಟ್ಟಾಡಿಯ ಬಯಲು ರಂಗಮಂದಿರದಲ್ಲಿ ವಿಶ್ವ ದೇವಾಡಿಗ ಮಹಾಧಿವೇಶನ ಆಯೋಜಿಸಲಾಗಿದೆ ಎಂದು ಮಹಾಮಂಡಳದ ಅಧ್ಯಕ್ಷ ಧರ್ಮಪಾಲ ಯು. ದೇವಾಡಿಗ ತಿಳಿಸಿದರು.
ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹೂಡಿಕೆ ಮಾಡಿಸುವ ನೆಪದಲ್ಲಿ ₹70 ಲಕ್ಷ ಪಡೆದು ವಂಚನೆ ನಡೆಸಿದ ಹಾಗೂ ಬಳಿಕ ಹಣಕ್ಕಾಗಿ ಬೆದರಿಕೆ ಹಾಕಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಮಹಿಳೆಯೊಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪೆಟ್ರೋಲ್ ಪಂಪ್ ನಲ್ಲಿ ಕಾರಿಗೆ ಡೀಸೆಲ್ ತುಂಬಿಸಿ ಪರಾರಿಯಾಗಿದ್ದ ಘಟನೆ ಜಿಲ್ಲೆಯ ಸುಭಾಸ್ ನಗರದಲ್ಲಿ ನಡೆದಿದ್ದು, ಈ ಸಂಬಂಧ ಶಿರ್ವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸರ್ಕಾರದ ಅಮೂಲ್ಯ ಆಸ್ತಿಯೊಂದು ನಿರ್ಲಕ್ಷ್ಯದ ಕಾರಣದಿಂದ ಇಂದು ಪಾಳು ಬಿದ್ದಿದೆ.
ಜಿಲ್ಲೆಯ ಉದ್ಯಾವರದಲ್ಲಿರುವ ರಾಷ್ಟ್ರೀಯ ಹೆದ್ದಾರಿ-66ರ ಮೇಲಿನ ಸೇತುವೆ ಇದೀಗ ಸಾರ್ವಜನಿಕರಲ್ಲಿ ಆತಂಕ ಮೂಡಿಸುವ ಸ್ಥಳವಾಗಿ ಮಾರ್ಪಡುತ್ತಿದೆ.
ಖಾಸಗಿ ಬಸ್ನ ಏಣಿಯಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ವಿದ್ಯಾರ್ಥಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಜುಲೈ 2 ಮತ್ತು 3ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ಹುಲಿ ವೇಷದ ಕಲಾವಿದರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರದ ಹೇರೂರು ರೂಡ್ಸೆಟ್ ಕ್ರಾಸಿಂಗ್ ಸಮೀಪ ನಡೆದಿದೆ.
ಅಯೋಧ್ಯೆಯ ರಾಮಮಂದಿರ ಹುಂಡಿ ಹಣ ದುರುಪಯೋಗ ವಿಷಯದಲ್ಲಿ ಯಾರೂ ಮೌನವಾಗಿಲ್ಲ. ರಾಮಮಂದಿರ ಹಿಂದೂಗಳ ಶ್ರದ್ಧಾಕೇಂದ್ರವಾಗಿದ್ದು, ಅಲ್ಲಿ ನಡೆದಿರುವ ಘಟನೆ ದೇಶಕ್ಕೂ, ಬಿಜೆಪಿಗೂ ಹಾಗೂ ಸಂಘ ಪರಿವಾರಕ್ಕೂ ನೋವುಂಟು ಮಾಡಿದೆ.
ಸಮುದ್ರದಿಂದ ಹಿನ್ನೀರಿಗೆ ಬಂದಿದ್ದ ಬೃಹತ್ ಡಾಲ್ಫಿನ್ವೊಂದು ಹಿನ್ನೀರಿನಲ್ಲೇ ಸಿಲುಕಿ ಪರದಾಡಿದ ಘಟನೆ ಜಿಲ್ಲೆಯ ಪಡುಕರೆ–ಕುತ್ಪಾಡಿ ಸಮುದ್ರ ತೀರದಲ್ಲಿ ನಡೆದಿದೆ.