Showing 20 of 3348 posts • Page 22 of 168
: ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ-ಮಂತ್ರಾಕ್ಷತೆ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಎಸ್ಐಆರ್ (SIR) ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ ಕರಾವಳಿ ಭಾಗದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲವೇ. ಹೀಗೆ ಒಂದುಪ್ರಶ್ನೆ ಕರಾವಳಿ ಭಾಗದಲ್ಲಿ ಕೇಳಿ ಬರುತ್ತಿದೆ.
ಡೀಸೆಲ್ ತುಂಬಿಸಿಕೊಂಡು ಕಾರು ಪರಾರಿಯಾಗಿರುವ ಘಟನೆ ಉಡುಪಿಯ ಶಂಕರಪುರ ಸುಭಾಷ್ ನಗರದ ಇಂಡಿಯನ್ ಆಯಿಲ್ ಫಿಲ್ಲಿಂಗ್ ಸ್ಟೇಷನ್ನಲ್ಲಿ ನಡೆದಿದೆ.
ನಗರ ಬಿಜೆಪಿ ವತಿಯಿಂದ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ನಾಡಿನಾದ್ಯಂತ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ಲೋಕಕಲ್ಯಾಣದ ಸಂಕಲ್ಪದೊಂದಿಗೆ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ದೇವರಿಗೆ ಸೀಯಾಳ ಅಭಿಷೇಕ ಸೋಮವಾರ ನೆರವೇರಿತು.
ಜಿಲ್ಲೆಯಲ್ಲಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ಬಾರಕೂರು ಕೋಟೆಕೇರಿ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ 365 ಸೀಯಾಳ (ಎಳನೀರು) ಅಭಿಷೇಕ ನೆರವೇರಿಸಲಾಯಿತು.
ದೇಶದಲ್ಲಿ ಸಹಕಾರಿ ಕ್ಷೇತ್ರ ಕ್ರಾಂತಿಕಾರಿ ಕೆಲಸ ಮಾಡುತ್ತಿದೆ. ವಾಣಿಜ್ಯ ಬ್ಯಾಂಕ್ಗಳಿಗೆ ಸಮಾನಾಂತರವಾಗಿರುವ ಸಹಕಾರಿ ಕ್ಷೇತ್ರವು ಕರ್ನಾಟಕದ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಬಹಳಷ್ಟು ಸಹಕಾರ ನೀಡುತ್ತಿದೆ.
ನಗರದ ಎರಡು ದೈವಸ್ಥಾನಗಳ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಏಷ್ಯಾದ ಅತಿ ದೊಡ್ಡ ಸರ್ವಋತು ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲ್ಪೆ ಬಂದರಿನಲ್ಲಿ ಮೀನುಗಾರರ ಅನುಕೂಲಕ್ಕಾಗಿ ಸುಮಾರು 12 ವರ್ಷಗಳ ಹಿಂದೆ ನಿರ್ಮಿಸಲಾದ ಶೌಚಾಲಯಗಳು ಇಂದಿಗೂ ಬಳಕೆಗೆ ಲಭ್ಯವಾಗದೇ ನಿರುಪಯುಕ್ತವಾಗಿ ಬಿದ್ದಿವೆ. ಮಹಿಳಾ ಮೀನುಗಾರ್ತಿಯರಿಗಾಗಿ ನಿರ್ಮಿಸಿದ್ದ ವಿಶ್ರಾಂತಿ ಕೊಠಡಿಯೂ ಪಾಳುಬಿದ್ದಿದ್ದು, ಮೂಲಸೌಕರ್ಯಗಳ ಕೊರತೆ ಬಗ್ಗೆ ಮೀನುಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
20ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಛೋಲಿಕೆ ಪೀಚೆ ಕ್ಯಾಹೆ ಡ್ಯಾನ್ಸ್ ಮಾಡಲಾಯಿತು. ಕುಂದಾಪುರ ತಾಲೂಕಿನ ಆನೆಗುಡ್ಡೆ ಮಹಾಗಣಪತಿ ದೇವರ ಸನ್ನಿಧಾನದಲ್ಲಿ ಕಾರ್ಯಕ್ರಮ ನಡೆಯಿತು.
ಪತ್ನಿ ಜೊತೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ವಿಶೇಷ ಪೂಜೆ ಸಲ್ಲಿಸಿದರು.
ಉದ್ಯಾವರ ನದಿಯಲ್ಲಿ ಶನಿವಾರ ಬ್ಯಾಂಕ್ ಉದ್ಯೋಗಿಯೊಬ್ಬರ ಶವ ಪತ್ತೆಯಾಗಿದ್ದು, ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ನಗರದ ತುಂಬಾ ಟ್ರಾಫಿಕ್ ಜಾಮ್ ಆಗಿದ್ದು, ಸಾಲು ಸಾಲು ರಜೆಗಳ ಹಿನ್ನೆಲೆ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ.
ಐದು ದಿನಗಳ ಹಿಂದೆಯಷ್ಟೇ ಹುಸಿ ಬಾಂಬ್ ಬೆದರಿಕೆಗೆ ಈಡಾಗಿದ್ದ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಂದು ಮತ್ತೆ ಈಮೇಲ್ ಮೂಲಕ ಬೆದರಿಕೆ ಕರೆ ಬಂದಿದೆ.
ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ (NH169A) ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್ ಲಾರಿಯೊಂದು ಪಲ್ಟಿಯಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಇಂದಿನ ಯುವಜನತೆ ಕೃಷಿಯಿಂದ ದೂರ ಸರಿಯುತ್ತಿರುವ ಈ ಸಂದರ್ಭದಲ್ಲಿ, ಕೃಷಿಯ ಮಹತ್ವವನ್ನು ಯುವ ಪೀಳಿಗೆಗೆ ಪರಿಚಯಿಸುವ ವಿಶಿಷ್ಟ ಪ್ರಯತ್ನವೊಂದು ಉಡುಪಿಯಲ್ಲಿ ನಡೆದಿದೆ.
ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ದುರುಪಯೋಗ ಪ್ರಕರಣಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ.
ದೇಶ ವಿದೇಶದ ಸಮಸ್ತ ಶ್ರದ್ದಾಳುಗಳ ಕೇಂದ್ರವಾಗಿ ರುವ ರಾಮ ಮಂದಿರದಲ್ಲಿ ಅವ್ಯವಹಾರ ದಂತಹ ಘೋರ ಅಪಚಾರ ನಡೆಯಬಾರದಿತ್ತು. ನಡೆದದ್ದು ಸತ್ಯವಾದರೆ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ರಾಮಮಂದಿರ ವಿಶ್ವಸ್ಥಮಂಡಳಿ ಟ್ರಸ್ಟ್ ಸದಸ್ಯರಾದ ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಜಿಲ್ಲೆಯ ಮೂವರು ರೌಡಿ ಶೀಟರ್ಗಳ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಕಂಬದಕೋಣೆ ಸಮೀಪದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಶವಕ್ಕೆ ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಸಂರಕ್ಷಸಿಟ್ಟಿದ್ದ ಶವದ ಗೌರವಯುತ ಅಂತ್ಯಸಂಸ್ಕಾರವನ್ನು ನಗರದ ಬಿಡಿನಗುಡ್ಡೆ ದಹನ ಭೂಮಿಯಲ್ಲಿ ಶುಕ್ರವಾರ ನೆರವೇರಿಸಲಾಯಿತು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ) ರಾಜ್ಯ ಸಮಿತಿಯ ಆಶ್ರಯದಲ್ಲಿ ಜುಲೈ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ದಲಿತ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ.