Showing 20 of 3348 posts • Page 23 of 168
ಮಲ್ಪೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಡಿ 19 ವರ್ಷದ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದು, ₹1.52 ಲಕ್ಷ ಮೌಲ್ಯದ ಮಾದಕ ವಸ್ತು, ಸ್ಕೂಟರ್ ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಮಹೇಶ್ ಮರ್ಣೆ ಅಪರೂಪದ ಕಲಾವಿದ. ಅಶ್ವತ್ಥ ಎಲೆಯಲ್ಲಿ ಇವರು ಖ್ಯಾತನಾಮರ ಭಾವಚಿತ್ರಗಳನ್ನು ಮೂಡಿಸಿ ಹೆಸರು ಮಾಡಿದ್ದಾರೆ. ಅದೇ ರೀತಿ ವಿವಿಧ ಸಂದರ್ಭಗಳಲ್ಲಿ ಕಲೆಯ ಮೂಲಕ ಜಾಗೃತಿ ಮೂಡಿಸುತ್ತಾ ಬಂದಿದ್ದಾರೆ.
ಕಾಡಬೆಟ್ಟುವಿನ ಅತ್ಯಂತ ಪುರಾತನ ಇತಿಹಾಸ ಪ್ರಸಿದ್ಧ ಶ್ರೀ ಅಬ್ಬರದರಗ ವೀರಭದ್ರ ಸಹಪರಿವಾರ ಹಾಗೂ ಶ್ರೀ ಶನೈಶ್ಚರ ದೇವಸ್ಥಾನದ ಜೀಣೋರ್ದ್ಧಾರ ಅಂಗವಾಗಿ ಜೂನ್ 27ರಂದು ಶನಿವಾರ ತ್ರಯೋದಶಿ ತಿಥಿಯ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷವಾಗಿ ನವಗ್ರಹ ಸಹಿತ ಸಾಮೂಹಿಕ ಶ್ರೀ ಶನಿಶಾಂತಿ ಹೋಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನದ ತಂತ್ರಿ, ಹಿರಿಯ ವಿದ್ವಾಂಸ ಕುಮಾರಗುರು ತಂತ್ರಿ ತಿಳಿಸಿದರು
ಉಡುಪಿ ಯಕ್ಷಗಾನ ಕಲಾರಂಗದ ‘ವಿದ್ಯಾಪೋಷಕ್’ ಯೋಜನೆಯಡಿಯಲ್ಲಿ 100ರ ಮನೆ ಹಸ್ತಾಂತರ ಹಾಗೂ ಸೂರು ನೂರರ ಸಡಗರ ಕಾರ್ಯಕ್ರಮವನ್ನು ಜೂ. 28ರಂದು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
ಮೈಸೂರು ಪಬ್ನಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ದುರಂತದ ಹಿನ್ನೆಲೆಯಲ್ಲಿ ಉಡುಪಿ ಅಬಕಾರಿ ಇಲಾಖೆಯ ವತಿಯಿಂದ ಜಿಲ್ಲೆಯ ಎಲ್ಲ ಸನ್ನದುದಾರರು ಹಾಗೂ ಬಾರ್ ಮಾಲಕರಿಗೆ ಅಗ್ನಿ ಅವಘಡ ಸಂಭವಿಸ ದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಕಾರ್ಯಾಗಾರವನ್ನು ಉಡುಪಿ ಅಬಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು.
ಸಹಕಾರಿ ಸಂಘಗಳ ವ್ಯವಹಾರದಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ತರಬೇತಿ ಅಗತ್ಯ. ಈ ನಿಟ್ಟಿನಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ಜಿಲ್ಲೆಯಲ್ಲಿ ಎಲ್ಲಾ ವಗದ ಸಹಕಾರಿಗಳಿಗೆ ನಿರಂತರ ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಪರ್ಯಾಯ ಶಿರೂರು ಮಠ ಇದರ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ. 90ರಷ್ಟು ಅಂಕ ಗಳಿಸಿದ ಪ್ರತಿಭಾನ್ವಿತ ಸ್ಕೌಟ್ಸ್- ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವು ಜೂ. 26ರಂದು ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ ತಿಳಿಸಿದ್ದಾರೆ.
ಪೆರ್ಡೂರು ಶ್ರೀ ಅನಂತ ದೇವಸ್ಥಾನದ ಜೀರ್ಣೋದ್ದಾರ ಕಾರ್ಯ ಪ್ರಶಂಸನೀಯ. ಪದ್ಮನಾಭ ಸೃಷ್ಟಿಯ ಪಾಲನೆ ಮಾಡುವ ದೇವರು. ನಮಗೆ ಈ ಅವಕಾಶ ಒದಗಿ ಬಂದಿದೆ.
ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಸಾಮಾಜಿಕ ಕಳಕಳಿಯ ಧ್ಯೇಯದಡಿ ಉಡುಪಿ ಜಿಲ್ಲೆಯ ಸುಮಾರು 50 ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ 15ಲಕ್ಷ ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಜೂನ್ 27ರಂದು ಬೆಳಿಗ್ಗೆ 10.30ಕ್ಕೆ ನಗರದ ಟೌನ್ ಹಾಲ್ನಲ್ಲಿ ನಡೆಯಲಿದೆ ಎಂದು ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.
ಮಣಿಪಾಲದ ಈಶ್ವರನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮದ್ಯಪಾನ ಮಾಡಿ ಕಾರು ಚಲಾಯಿಸಿ ಸ್ಕೂಟಿಗೆ ಡಿಕ್ಕಿ ಹೊಡೆದು ಯುವಕನಿಗೆ ಗಂಭೀರ ಗಾಯವಾಗುವಂತೆ ಮಾಡಿದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಅಲ್-ಇಬಾದಾದ್ ಇಂಡಿಯನ್ ಸ್ಕೂಲ್ಗೆ ಸೇರಿದ ಬಸ್ವೊಂದು ಗುರುವಾರ ಬೆಳಿಗ್ಗೆ ಮಣಿಪಾಲದ ಐನಾಕ್ಸ್ (ಸಿನಿಗ್ಯಾಲಕ್ಸಿ) ಮುಂಭಾಗ ಅಪಘಾತಕ್ಕೀಡಾಗಿ ಡಿವೈಡರ್ ಮೇಲೇರಿ ನಿಂತ ಘಟನೆ ನಡೆದಿದೆ.
ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ ಮಣಿಪಾಲ ಇದರ 2026ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಪ್ರಭು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ರಿಯಾಜ್ (3ನೇ ಬಾರಿ) ಅವರು ಪುನರಾಯ್ಕೆಯಾಗಿದ್ದಾರೆ.
ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನವನ್ನು ಇಟ್ಟು ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಭವಿಸಿದೆ.
ಉದ್ಯಾವರ ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆಯಾಗಿದ್ದು, ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಮೆಸ್ಕಾಂ ಜಾಗೃತ ದಳದ ಹೆಡ್ ಕಾನ್ ಸ್ಟೇಬಲ್ ಬಿ. ವಿಜಯಕುಮಾರ್ ಅವರನ್ನು ಇಲಾಖೆಯಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ 2025-26ನೇ ಸಾಲಿನ ‘ಡಿಜಿ-ಐಜಿಪಿ ಪ್ರಶಂಸನಾ ಪದಕ’ಕ್ಕೆ ಆಯ್ಕೆ ಮಾಡಲಾಗಿದೆ.
ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ ಬಾಲಕಿಯು ಮೇ 22 ರಿಂದ ನಾಪತ್ತೆಯಾಗಿರುತ್ತಾರೆ.
ಉಡುಪಿ: ಒಂದು ತಿಂಗಳ ಹೆಣ್ಣು ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿ ಉಡುಪಿ ಮಹಿಳಾ ಪೊಲೀಸ್ ಠಾಣೆ ಪೊಲೀಸರು ವೈದ್ಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಉಡುಪಿ ಕಾಮತ್ ನರ್ಸಿಂಗ್ ಹೋಮ್ನ ವೈದ್ಯ ಡಾ. ಕೆ. ಸುರೇಂದ್ರ ಕಾಮತ್ (76), ಸಂತೆಕಟ್ಟೆ ನೇಜಾರಿನ ಎಸ್. ಪ್ರಕಾಶ್ (50), ಕಾರ್ಕಳದ ಸೂಡ ನಿವಾಸಿ ಸಂಪತ್ (22) ಹಾಗೂ ನಂದಳಿಕೆಯ ಸುಪ್ರೀತಿ (22) ಬಂಧಿತರು. ಜೂನ್ 19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ವಲಯ ಮೇಲ್ವಿಚಾರಕರು ಮಕ್ಕಳ ರಕ್ಷಣಾ […]
ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಮೂಲ ಉದ್ದೇಶ ಪ್ರಜಾಪ್ರಭುತ್ವದಲ್ಲಿ ನೈಜ ಭಾರತೀಯರ ಮತದಾನದ ಹಕ್ಕನ್ನು ಮತ್ತಷ್ಟು ಗಟ್ಟಿಗೊಳಿಸುವುದಾಗಿದ್ದು, ಭಾರತೀಯರಲ್ಲದವರಿಗೆ ಮತದಾನದ ಹಕ್ಕು ನಿರಾಕರಿಸುವುದೇ ಇದರ ಆಶಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಅನುದಾನಿತ ಶಾಲಾ ಸಂಘಗಳ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ 200 ಅನುದಾನಿತ ಶಾಲೆಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ 20000 ಜೊತೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಹಾಗೂ ಮತ್ತು ವೆಬ್ಸೈಟ್ ಅನಾವರಣ ಕಾರ್ಯಕ್ರಮ ಉಡುಪಿ ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಿತು.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಯಿತು.