Showing 20 of 3348 posts • Page 24 of 168
ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸರ್ಕಲ್ನಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತರನ್ನು ಬ್ರಹ್ಮಾವರ ಅರೂರು ಮೂಲದ ಸತೀಶ್ ಆಚಾರ್ (45) ಎಂದು ಗುರುತಿಸಲಾಗಿದೆ.
ನಗರದ ಆದಿ ಉಡುಪಿ ಸಂತೆ ಮಾರ್ಕೆಟ್ನಲ್ಲಿರುವ ಹಣ್ಣು–ಹಂಪಲು ಸಂಗ್ರಹ ಅಂಗಡಿಗೆ ಭಾನುವಾರ ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿದೆ.
12ನೇ ವಿಶ್ವ ಯೋಗ ದಿನವನ್ನು ಭಾನುವಾರ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಉಡುಪಿ ಕೃಷ್ಣ ಮಠ, ಶಿರೂರು ಮಠ ಹಾಗೂ ಪತಂಜಲಿ ಯೋಗ ಪೀಠದ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಯೋಗಪಟುಗಳು ಮತ್ತು ಸಾರ್ವಜನಿಕರು ಭಾಗವಹಿಸಿ ಸಾಮೂಹಿಕ ಯೋಗಾಭ್ಯಾಸ ನಡೆಸಿದರು.
ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಂಭೀರವಾಗಿ ಗಾಯಗೊಂಡಿದ್ದ ಮುಳ್ಳುಹಂದಿಯೊಂದನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ರಕ್ಷಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಘಟನೆ ನಗರದ ಚಿತ್ಪಾಡಿಯ ಶ್ರೀನಿವಾಸನಗರದಲ್ಲಿ ನಡೆದಿದೆ.
ನಗರದ ಕಿನ್ನಿಮೂಲ್ಕಿ ಅಗ್ನಿಶಾಮಕ ದಳ ರಸ್ತೆಯ ಪಕ್ಕದಲ್ಲಿ ಹಲವು ವರ್ಷಗಳಿಂದ ಅಂಚೆ ಪೆಟ್ಟಿಗೆಯೊಂದು ಅನಾಥವಾಗಿ ಬಿದ್ದಿದ್ದು, ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶದ ಪ್ರಧಾನಿಯಾಗಬೇಕಾದರೆ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ನಾವೆಲ್ಲ ತುಂಬ ಜಾಗರೂಕರಾಗಿರಬೇಕು ಎಂದು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದರು.
ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತು ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪರಿಸರ ದಿನಾಚರಣೆ ಎಂಬುದು ಕೇವಲ ಒಂದೇ ದಿನದಲ್ಲಿ ಮಾಡುವ ಆಚರಣೆಯಲ್ಲ. ಪ್ರತಿದಿನ ಮಾಡಬೇಕಾದ ಕಾರ್ಯ. ಒಂದು ದಿನ ಗಿಡ ನೆಟ್ಟರೆ ಸಾಲದು, ಅದನ್ನು ಪ್ರತಿದಿನ ಪೋಷಿಸಬೇಕು.
ಉಡುಪಿ ತಾಲೂಕಿನ ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್ ಸಮೀಪದ ವಿಶ್ರಾಮ್ ಹೋಮ್ ಸ್ಟೇ ಮೇಲೆ ಮಲ್ಪೆ ಪೊಲೀಸರು ದಾಳಿ ನಡೆಸಿ ಎಂಡಿಎಂಎ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಏಳು ಮಂದಿಯನ್ನು ಬಂಧಿಸಿದ್ದಾರೆ.
ಕರಾವಳಿಯಲ್ಲಿ ಮುಂಗಾರು ಪ್ರವೇಶಿಸಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದಿರುವುದು ನಾಡದೋಣಿ ಮೀನುಗಾರರ ಆತಂಕ ಹೆಚ್ಚಿಸಿದೆ.
ಬಸ್ ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್ ಸ್ಟೇಷನ್ ಬಳಿ ನಡೆದಿದೆ.
ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಕುರಿತು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆಮನೆ ಭೇಟಿಯ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ನಿಂದ ಜೂ. 23ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪಗಳು ಆತಂಕಕಾರಿ ಬೆಳವಣಿಗೆಯಾಗಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಪರ್ಯಾಯ ಪೀಠಾಧಿಪತಿಗಳಾದ ಶೀರೂರು ಮಠದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟಿದ್ದಾರೆ.
ಉಡುಪಿ : ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ ದರ್ಶನ ಪಡೆದರು. ಈ ವೇಳೆ ದೇವಳದಲ್ಲಿ ನಡೆದ ಚಂಡಿಕಾ ಹೋಮದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ವಿಜಯೇಂದ್ರ ಅವರೊಂದಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಉಪಸ್ಥಿತರಿದ್ದರು. ದೇವಿ ದರ್ಶನದ ಬಳಿಕ ಮುಖಂಡರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ ವಿಜಯೇಂದ್ರ, ಪಕ್ಷದ ಸ್ಥಳೀಯ ಯುವ ನಾಯಕರನ್ನು ಭೇಟಿ ಮಾಡಿ […]
ನಗರದ ತ್ರಿವೇಣಿ ಸರ್ಕಲ್ ಸಮೀಪ ಬೈಕ್ನಲ್ಲಿ ಎಣ್ಣೆಯ ಕ್ಯಾನ್ ಸಾಗಿಸುತ್ತಿದ್ದ ವೇಳೆ ಅದು ಆಯತಪ್ಪಿ ರಸ್ತೆಗೆ ಬಿದ್ದ ಪರಿಣಾಮ ಎಣ್ಣೆ ರಸ್ತೆ ಮೇಲೆ ಸೋರಿಕೆಯಾಗಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಚಲಿಸುತ್ತಿದ್ದ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ ಉಂಟಾಗಿ ಬಸ್ ಡಿವೈಡರ್ಗೆ ಡಿಕ್ಕಿಯಾದ ಘಟನೆ ಸೋಮವಾರ ಮಣಿಪಾಲದಲ್ಲಿ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತವೊಂದು ಕೂದಲೆಳೆಯಂತರದಲ್ಲಿ ತಪ್ಪಿದೆ.
ರಿಲಯನ್ಸ್ ಸಮೂಹ ಸಂಸ್ಥೆಗಳ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ನ ಮುಖ್ಯಸ್ಥ ಅನಂತ್ ಅಂಬಾನಿ ಅವರು ಸೋಮವಾರ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಭಾನುವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಅಂಬಲಪಾಡಿ ಮೇಲ್ಸೇತುವೆಯ ಒಂದು ಬದಿಯನ್ನು ಮಂಗಳೂರಿನಿಂದ ಕುಂದಾಪುರ ಕಡೆಗೆ ಏಕಮುಖ ವಾಹನ ಸಂಚಾರಕ್ಕೆ ಭಾನುವಾರ ಮುಕ್ತಗೊಳಿಸಲಾಯಿತು.
ಮಳೆಗಾಲ ಆರಂಭವಾಗಿ 14ದಿನಗಳು ಕಳೆದಿದ್ದರೂ ಉಡುಪಿ ನಗರಸಭೆ ವ್ಯಾಪ್ತಿಯ ಹಲವೆಡೆ ತೋಡುಗಳ ಹೂಳೆತ್ತುವ ಕಾಮಗಾರಿ ಸಮರ್ಪಕವಾಗಿ ನಡೆದಿಲ್ಲ ಎಂಬ ಆರೋಪ ಕೇಳಿಬಂದಿದೆ.