Showing 20 of 3348 posts • Page 25 of 168
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಆತ್ಮಹತ್ಯೆಗೆ ಆತನ ಪತ್ನಿ, ನಟಿ ಸೌಮ್ಯ ಶೆಟ್ಟಿ ದುಷ್ಪೇರಣೆ ನೀಡಿರುವುದು ತನಿಖೆಯಲ್ಲಿ ಸಾಬೀತಾಗಿದೆ.
ದೇಶದ ಆರ್ಥಿಕ ವ್ಯವಸ್ಥೆ ಸದೃಢವಾಗಿದ್ದು, ಯಾವುದೇ ರೀತಿಯ ಸಂಕಷ್ಟ ಅಥವಾ ಅಪಾಯದಲ್ಲಿ ಇಲ್ಲ. ಆದರೆ ವಿರೋಧ ಪಕ್ಷಗಳು ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿವೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ತಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂಬ ಸುದ್ದಿ ಸಂಪೂರ್ಣ ಆಧಾರರಹಿತವಾಗಿದ್ದು, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಕಾಂಗ್ರೆಸ್ ಬಾಗಿಲು ಬಡಿಯುವ ಬರಗಾಲ ನನಗೆ ಬಂದಿಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಸ್ಪಷ್ಟಪಡಿಸಿದ್ದಾರೆ.
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ ರಾಜೀವನಗರ ನಿವಾಸಿ ಜಗದೀಶ ಪೂಜಾರಿ (33) ಎಂಬಾತನನ್ನು ಪಿಐಟಿ–ಎನ್ಡಿಪಿಎಸ್ (PIT-NDPS) ಕಾಯ್ದೆಯಡಿ ಬಂಧಿಸಲಾಗಿದೆ.
ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ಹೆರಂಜೆಯಲ್ಲಿ ತೆಂಗಿನ ಕಾಯಿ ಬಿದ್ದು 1.5 ವರ್ಷದ ಮಗು ದಕ್ಷ್ ಮೃತ ಪಟ್ಟ ಹಿನ್ನೆಲೆಯಲ್ಲಿ ಅವರ ಮನೆಗೆ ಶಾಸಕ ಯಶ್ ಪಾಲ್ ಸುವರ್ಣ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು.
ತೀರ್ಥಹಳ್ಳಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿ 169(ಎ)ರ ಕರಾವಳಿ ಜಂಕ್ಷನ್ನಿಂದ ಮಲ್ಪೆಯವರೆಗಿನ ರಸ್ತೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ವಾಹನ ಸವಾರರು ಮತ್ತು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಮುಕಾಂಬಿಕೆಯ ದರ್ಶನವನ್ನು ಸಿಎಂ ವಿಜಯ್ ಮಾಡಿದರು. ಸಂಕಲ್ಪ ಮಾಡಿ ವಿಜಯ್ ಪೂಜೆ ಸಲ್ಲಿಸಿದರು.
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಶುಕ್ರವಾರ ಕರಾವಳಿ ಭಾಗಕ್ಕೆ ಆಗಮಿಸಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಸಲುವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು.
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ದೇವಸ್ಥಾನ ಪರಿಸರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೋಕಾ (KCOCA) ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಮಾಹಿತಿ ನೀಡಿದ ಬಾತ್ಮೀದಾರರಿಗೆ ಘೋಷಿಸಲಾಗಿದ್ದ ನಗದು ಬಹುಮಾನವನ್ನು ಪೊಲೀಸ್ ಇಲಾಖೆ ವಿತರಿಸಿದೆ.
ಬ್ರಹ್ಮಾವರ ತಾಲೂಕಿನ ಹೇರಂಜೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.
ಗಾಳಿಯ ಅಬ್ಬರಕ್ಕೆ ತೆಂಗಿನ ಮರ ಮುರಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟು, ಇನ್ನಿಬ್ಬರು ಅಪಾಯದಿಂದ ಪಾರಾದ ಘಟನೆ ಇಂದು ಬೆಳಿಗ್ಗೆ ಕುಂಬಳೆ ಸಮೀಪದ ಪೆರುವಾಡ್ ಮೈದಾನ ಬಳಿ ನಡೆದಿದೆ.
ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ಜಿಲ್ಲೆಯ ವಿವಿಧ ಭಾಗಗಳ ಹೊಳೆ, ತೊರೆ ಹಾಗೂ ಸಿಹಿನೀರಿನ ಜಲಮೂಲಗಳಲ್ಲಿ ಸಾಂಪ್ರದಾಯಿಕ ಮೀನು ಬೇಟೆ ಚಟುವಟಿಕೆಗಳು ಮತ್ತೆ ಚುರುಕುಗೊಂಡಿವೆ. ಗ್ರಾಮೀಣ ಪ್ರದೇಶಗಳ ಮೀನುಗಾರರು ಹಾಗೂ ಮೀನು ಪ್ರಿಯರು ಉಬಾರ್ ಸೇರಿದಂತೆ ವಿವಿಧ ಸಾಂಪ್ರದಾಯಿಕ ವಿಧಾನಗಳ ಮೂಲಕ ಮೀನು ಹಿಡಿಯುವ ಕಾರ್ಯದಲ್ಲಿ ತೊಡಗಿದ್ದಾರೆ.
ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಕ್ಕೆ ಸೈಡ್ ನೀಡುವ ವಿಚಾರವಾಗಿ ಮಂಗಳವಾರ ರಾತ್ರಿ ಹೊರರಾಜ್ಯದ ಪ್ರವಾಸಿಗರು ಹಾಗೂ ಸ್ಥಳೀಯ ವ್ಯಕ್ತಿಯ ನಡುವೆ ಗಲಾಟೆ ನಡೆದು, ದೂರು ಪ್ರತಿದೂರು ದಾಖಲಾಗಿದೆ.
ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿರುವ ಪಂಚಾಯತ್ ವಾಣಿಜ್ಯ ಸಂಕೀರ್ಣದ ಹಿಂಭಾಗದಲ್ಲಿ ತ್ಯಾಜ್ಯಗಳನ್ನು ರಾಶಿ ಹಾಕಿದ್ದು, ರೋಗ ಭೀತಿ ಎದುರಾಗಿದೆ.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.