Showing 20 of 3348 posts • Page 26 of 168
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ ವಕ್ತಾರ ಮುಸ್ತಾಕ್ ಹೆನ್ನಾಬೈಲು ಆಗ್ರಹಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಕಸಾಯಿಖಾನೆಗಳನ್ನು ಮುಚ್ಚಿ, ಗೋಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಗೋಹತ್ಯೆ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರನ್ನು ದಾರಿತಪ್ಪಿಸುತ್ತಿದೆ ಎಂದು ಆರೋಪಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ […]
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ–ಹಾಲಾಡಿ ರಸ್ತೆಯ ಅಂಡರ್ಪಾಸ್ ಸಮೀಪ ಸೋಮವಾರ ಸಂಜೆ ನಡೆದಿದೆ.
ರಾಜ್ಯಾದ್ಯಂತ ಖಾಸಗಿ ಬಸ್ಗಳ ಪ್ರಯಾಣ ದರವನ್ನು ಶೇ. 5ರಿಂದ 8ರಷ್ಟು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರವು ಇಂದಿನಿಂದ (ಜೂನ್ 9) ಜಾರಿಗೆ ಬರಲಿದೆ ಎಂದು ರಾಜ್ಯ ಖಾಸಗಿ ಮಜಲು ವಾಹನ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು.
ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಪರಿಸರ ಪ್ರೇಮಿಗಳು ಬೈಲೂರು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಡುಪಿ, ಕಲಾ ಕಿರಣ್ ಕ್ಲಬ್ ಬೈಲೂರು, ಬೈಲೂರು ಶ್ರೀಮಹಿಷಮರ್ದಿನಿ ದೇವಸ್ಥಾನ ಇವುಗಳ ಸಹಭಾಗಿತ್ವದಲ್ಲಿ ‘ಹಸಿರು ನನ್ನೂರು ಬೈಲೂರು’ ಚಿತ್ರಕಲಾ ಸ್ಪರ್ಧೆಯನ್ನು ಬೈಲೂರು ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಸಿದ್ದಾಪುರ ಹೊಸಂಗಡಿ ಸಮೀಪದ ಕೆರೆಕಟ್ಟೆ ಸಂತ ಅಂತೋನಿಯವರ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಹಾಗೂ ನಿರ್ಗತಿಕರಿಗಾಗಿ ನಿರ್ಮಿಸಲಾಗಿರುವ ಆಶ್ರಮದ ಉದ್ಘಾಟನೆ ಮತ್ತು ಆಶೀರ್ವಚನ ಕಾರ್ಯಕ್ರಮ ಜೂನ್ 13 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಜರುಗಲಿದೆ.
ಮಳೆಗಾಲ ಆರಂಭವಾಗುತ್ತಿದ್ದಂತೆ ಕರಾವಳಿಯಲ್ಲಿ ಅರಬ್ಬಿ ಸಮುದ್ರದ ಪ್ರಕ್ಷುಬ್ಧಗೊಂಡು ಅಬ್ಬರ ಹೆಚ್ಚಾಗುತ್ತದೆ. ಅಪಾಯಕಾರಿ ಅಲೆಗಳು ದಡವನ್ನು ಅಪ್ಪಳಿಸುತ್ತದೆ.
ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆಗಳನ್ನು ಹಂತ ಹಂತವಾಗಿ ಹೆಚ್ಚಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನರ ಮೇಲೆ ಆರ್ಥಿಕ ಹೊರೆ ಹೊರಿಸುತ್ತಿದ್ದು, ಈ ನೀತಿಯ ವಿರುದ್ಧ ಜನಾಕ್ರೋಶ ಹೆಚ್ಚುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆರೋಪಿಸಿದ್ದಾರೆ.
ರಸ್ತೆ ಬದಿಯ ಮಣ್ಣು ಕುಸಿದ ಪರಿಣಾಮ ತಂಪು ಪಾನೀಯ ಸಾಗಾಟದ ವಾಹನವೊಂದು ಮಣ್ಣಿನಲ್ಲಿ ಸಿಲುಕಿಕೊಂಡ ಘಟನೆ ಅಂಬಾಗಿಲು–ಮಣಿಪಾಲ ರಸ್ತೆಯ ಸುಜಾತಾ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಶನಿವಾರ ನಡೆದಿದೆ.
ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಉಡುಪಿ ಕೋಸ್ಟಲ್ ಲೀಜನ್ನ 2026–27ನೇ ಸಾಲಿನ ನೂತನ ಅಧ್ಯಕ್ಷರಾಗಿ ಡಾ. ಚಂದ್ರಶೇಖರ್ ಎಸ್.ವಿ., ಕಾರ್ಯದರ್ಶಿಯಾಗಿ ಸುನಂದಾ ಹಾಗೂ ಕೋಶಾಧಿಕಾರಿಯಾಗಿ ಮಮತಾ ಅಮೀನ್ ಪದಗ್ರಹಣ ಮಾಡಿದರು.
ನಕಾರಾತ್ಮಕ ಚಿಂತೆಯನ್ನು ಬಿಟ್ಟು ಸಕಾರಾತ್ಮಕವಾಗಿ ಚಿಂತನೆ ಮಾಡುವುದು ಅತೀ ಮುಖ್ಯ. ಇದು ನಮ್ಮ ಬದುಕಿನಲ್ಲಿ ರೂಪಿಸಿಕೊಳ್ಳಬೇಕಾದ ಮನೋಧರ್ಮ. ಈ ಮೂಲಕ ಬದುಕು ಕಟ್ಟಿಕೊಂಡರೆ ಶ್ರೇಯಸ್ಸು ಪಡೆಯಲು ಸಾಧ್ಯ ಎಂದು ಹಿರಿಯ ವಿದ್ವಾಂಸ, ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಹೇಳಿದ್ದಾರೆ.
ಕರ್ನಾಟಕ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದೆ. ಕೇರಳ ಪ್ರವೇಶಿಸಿದ್ದ ಮುಂಗಾರು ಇದೀಗ ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲು ಆರಂಭಿಸಿದೆ.
ಕೆಲವು ವರ್ಷಗಳ ಹಿಂದೆ ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಕೊಚ್ಚಿಹೋಗಿದ್ದ ಯಾತ್ರಿಕರ ಮೃತದೇಹವನ್ನು ಭಾರಿ ಮಳೆಯ ನಡುವೆಯೂ ಹರಸಾಹಸ ಪಟ್ಟು ಮೇಲಕ್ಕೆತ್ತಿ ತಂದು ರಾಜ್ಯ ಸರಕಾರದ ಗಮನ ಸೆಳೆದು ಮುಖ್ಯಮಂತ್ರಿ ಪದಕ್ಕ ಪಡೆದಿರುವ ಅಗ್ನಿಶಾಮಕ ದಳದ ಸಿಬ್ಬಂದಿ ನಾಗರಾಜ್ ಪೂಜಾರಿ ಇದೀಗ ಮತ್ತೊಂದು ಸಾಹಸ ಕಾರ್ಯದ ಮೂಲಕ ವ್ಯಕ್ತಿಯ ಜೀವ ಉಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದ ದನವೊಂದನ್ನು ಸ್ಥಳೀಯರು ಹಾಗೂ ಕ್ರೇನ್ ಚಾಲಕರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಿದ ಘಟನೆ ಶುಕ್ರವಾರ ಹೊಸಂಗಡಿ ಗ್ರಾಮದ ಅಂಬೂರು ಪ್ರದೇಶದಲ್ಲಿ ನಡೆದಿದೆ.
ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಗಿನ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳನ್ನು ಎಸೆದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಕುಂಜೆ ಗ್ರಾಮದ ನೇರಳಕಟ್ಟೆಯಲ್ಲಿರುವ ನಿರಂಜನ್ ಭಟ್ ಅವರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು ₹11 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಅನಿವಾಸಿ ಉದ್ಯಮಿ ಬಿ.ಆರ್.ಶೆಟ್ಟಿ ಮಾಲಕತ್ವದ ಬಿಆರ್ಎಸ್ ಲೈಫ್ ಗ್ರೂಪ್ ದುಬೈ ಶೈಲಿಯಲ್ಲಿ ನಿರ್ಮಿಸಿದ್ದ ಆರು ಮಹಡಿಯ ಸರ್ವಸುಸಜ್ಜಿತ ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ನಿರ್ವಹಣೆ ಇದೀಗ ಸರಕಾರಕ್ಕೆ ದೊಡ್ಡ ಹೊರೆಯಾಗಿ ಪರಿಣಮಿಸಿದೆ.
ಹೊಸಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬದ್ರಾಪುರದ ಕಪ್ಪೆ ಹೊಂಡ ಪ್ರದೇಶದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಡೆದಿರುವ ಕಾಮಗಾರಿಯ ಅವ್ಯವಸ್ಥೆಯಿಂದ ಸ್ಥಳೀಯ ಕೃಷಿಕರೊಬ್ಬರು ಸಂಕಷ್ಟಕ್ಕೆ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ.
ಮಟ್ಟು ಗ್ರಾಮದ ಹೆಮ್ಮೆ, ರೈತರ ಭಾವನೆ ಹಾಗೂ ವಿಶ್ವಪ್ರಸಿದ್ಧ ಮಟ್ಟುಗುಳ್ಳದ ಪ್ರತೀಕವಾಗಿದ್ದ ಪ್ರತಿಕೃತಿಯನ್ನು ಇತ್ತೀಚೆಗೆ ಕಿಡಿಗೇಡಿಗಳು ಧ್ವಂಸಗೊಳಿಸಿದ್ದ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಸಹಿತ 10ಕ್ಕೂ ಹೆಚ್ಚು ರಾಜ್ಯದಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ – 2026 ನಡೆಯಲಿದ್ದು, ಅದರಂತೆ ಉಡುಪಿ ಜಿಲ್ಲೆಯಲ್ಲಿ ಜೂ. 20ರಂದು ಈ ಪ್ರಕ್ರಿಯೆ ಆರಂಭವಾಗಲಿದ್ದು ಜೂ. 30ರಿಂದ ಬಿಎಲ್ಒಗಳು ಮನೆ ಮನೆ ಭೇಟಿ ಶುರು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದರು.