Showing 20 of 3348 posts • Page 27 of 168
ಅಗತ್ಯ ಪರವಾನಗಿ ಮತ್ತು ದಾಖಲೆಗಳಿಲ್ಲದೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳನ್ನು ಸಂಗ್ರಹಿಸಿ ಮಾರಾಟ ಮಾಡಿದ ಆರೋಪದ ಮೇಲೆ ಮಲ್ಪೆ ಪೊಲೀಸರು ಓರ್ವ ವ್ಯಕ್ತಿಯನ್ನವ ಬಂಧಿಸಿದ್ದಾರೆ.
ಮಹೇಶ್ ಮರ್ಣೆ ಉಡುಪಿ ಜಿಲ್ಲೆಯ ಪ್ರತಿಭಾವಂತ ಕಲಾವಿದ. ಅಶ್ವಥ ಎಲೆಯಲ್ಲಿ ಭಾವಚಿತ್ರ ಮೂಡಿಸುವುದರಲ್ಲಿ ಇವರು ಎತ್ತಿದ ಕೈ. ಅನೇಕ ಗಣ್ಯರು ಮತ್ತು ರಾಜಕೀಯ ನಾಯಕರ ಭಾವಚಿತ್ರಗಳನ್ನು ಎಲೆಯಲ್ಲಿ ಮೂಡಿಸಿ ಸೈ ಎನಿಸಿದ್ದಾರೆ.
ಸಮಾಜಮುಖಿ ಚಟುವಟಿಕೆಗಳು, ಸೇವಾ ಮನೋಭಾವ ಹಾಗೂ ಸಂಘಟನಾ ಕೌಶಲ್ಯದ ಮೂಲಕ ಜಿಲ್ಲೆಯಾದ್ಯಂತ ಗುರುತಿಸಿಕೊಂಡಿರುವ ಲಯನ್ ಲೂಯಿಸ್ ಲೋಬೊ ಅವರು ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317ಸಿ ಇದರ ಪ್ರಾಂತ್ಯ 3ರ ಪ್ರಾಂತ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಕೆ. ಕೃಷ್ಣಮೂರ್ತಿ ಆಚಾರ್ಯ ಅವರ ನೇತೃತ್ವದಲ್ಲಿ ಕನ್ನರ್ಪಾಡಿಯ ಜಯದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.
ಉಡುಪಿಯ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸೂಕ್ತ ನಿರ್ವಹಣೆಯ ಕೊರತೆಯ ದೂರಿನ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಬುಧವಾರ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜು ಸಮೀಪ ನಡೆದಿದೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ 66 ರ ತೆಕ್ಕಟ್ಟೆ ಪ್ರಮುಖ ಸರ್ಕಲ್ನಲ್ಲಿ ಜೂನ್ 2ರ ಮಂಗಳವಾರ ರಾತ್ರಿ ಪಿಕಪ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮಳೆಗಾಲದಲ್ಲಿ ಜೂ.1ರಿಂದ ಜು.31ರವರೆಗೆ ಒಟ್ಟು ಎರಡು ತಿಂಗಳ ಕಾಲ ಸಮುದ್ರದಲ್ಲಿ ಯಾಂತ್ರಿಕ ಮೀನುಗಾರಿಕೆಗೆ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ಇದೀಗ ನೂರಾರು ಬೋಟುಗಳು ಲಂಗರು ಹಾಕಿವೆ.
ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಾಸ್ತಾನ ಜಂಕ್ಷನ್ ಬಳಿ ಸಂಭವಿಸಿದೆ.
ಹೆಬ್ರಿಯ ಅನಂತನಗರದಲ್ಲಿರುವ ಉದ್ಯಮಿ ಕೀರ್ತನ್ ಪ್ರಭು ಅವರ ಮನೆಯಲ್ಲಿ ನಡೆದಿದ್ದ ಸುಮಾರು ₹60 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ಇತರೆ ಬೆಲೆಬಾಳುವ ವಸ್ತುಗಳ ಕಳ್ಳತನ ಪ್ರಕರಣವನ್ನು ಹೆಬ್ರಿ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಜಿಲ್ಲೆಯ ಗ್ರಾಮೀಣ ಭಾಗದ ನಿರ್ಜನ ಪ್ರದೇಶವೊಂದರಲ್ಲಿ ಹಸುವಿನ ರುಂಡ ಪತ್ತೆಯಾಗಿದೆ.
ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಗಣೇಶ್ (32) ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದ್ದು, ಆತನನ್ನು ಬಂಧಿಸಿ ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಇರಿಸಲು ಜಿಲ್ಲಾಡಳಿತ ಆದೇಶಿಸಿದೆ.
ನದಿ ತೀರದಲ್ಲಿ ಹಸುವಿನ ರುಂಡಪತ್ತೆಯಾಗಿರುವ ಘಟನೆ ಉಡುಪಿಯ ಶಿರ್ವ ಠಾಣಾ ವ್ಯಾಪ್ತಿಯ ಕಲ್ಲಟ್ಟು ಎಂಬಲ್ಲಿ ನಡೆದಿದೆ. ನದಿ ತೀರದ ಪ್ರದೇಶದಲ್ಲಿ ಪತ್ತೆಯಾಗಿದೆ.
ಬೇಸಿಗೆ ರಜೆ ಬಳಿಕ ರಾಜ್ಯದಾದ್ಯಂತ ಸೋಮವಾರ ಶಾಲೆಗಳು ಪುನರಾರಂಭಗೊಂಡಿದ್ದು, ಉಡುಪಿ ಜಿಲ್ಲೆಯ ಶಾಲೆಗಳಲ್ಲೂ ಹೊಸ ಶೈಕ್ಷಣಿಕ ವರ್ಷದ ಆರಂಭ ಸಂಭ್ರಮ–ಸಡಗರದಿಂದ ನಡೆಯಿತು.
ಕಾರೊಂದು ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್ಗೆ ಢಿಕ್ಕಿ ಹೊಡೆದ ಘಟನೆ ಕಟಪಾಡಿ ಸಮೀಪದ ಫಾರೆಸ್ಟ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಎಂ.ಸಿ.ಸಿ. ಬ್ಯಾಂಕ್ ವತಿಯಿಂದ 28 ಮೇ 2026 ರಂದು ಸಂಜೆ 6:00 ಗಂಟೆಗೆ ಯರ್ಮಾಳಿನ ಪೆನಿನ್ಸುಲಾ ಡೆಲ್ ಮಾರ್ನಲ್ಲಿ “ಇಂಪ್ರಿಂಟ್ಸ್ ಅಂಡ್ ಇಂಪ್ರೆಶನ್ಸ್” ಎಂಬ ಕಾರ್ಯಕ್ರಮವನ್ನು ಅಯೋಹಿಸಲಾಗಿತ್ತು.
ಕೊಡವೂರು ಶ್ರೀ ಮಹತೋಭಾರ ಶಂಕರನಾರಾಯಣ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಮಹಾರುದ್ರಯಾಗವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಭಕ್ತರು, ಸೇವಾಕರ್ತರು, ಮಹಾರುದ್ರಯಾಗ ಸಮಿತಿ ಸದಸ್ಯರು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸುವ ಸಭೆ ಶನಿವಾರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಮೀನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನದ ಟಯರ್ ಸ್ಪೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫುಟ್ಪಾತ್ ಮೇಲೆ ಏರಿದ ಘಟನೆ ಹಿರಿಯಡಕ ಪೇಟೆ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿತು.
ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮೂಲ್ಕಿ ಸಮೀಪ ಸರಕು ಸಾಗಾಟದ ಲಾರಿಗೆ ಹಿಂಬದಿಯಿಂದ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ನಸುಕಿನ ಜಾವ ಸಂಭವಿಸಿದೆ