Showing 20 of 3077 posts • Page 28 of 154
ಕರಾವಳಿಯಲ್ಲಿ ಇಂದು ಚಂದ್ರ ದರ್ಶನ ಆದ ಹಿನ್ನೆಲೆಯಲ್ಲಿ ಮಾರ್ಚ್ 20ರಂದು ಶುಕ್ರವಾರ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತರ್(ರಮಾಝಾನ್ ಹಬ್ಬ) ಹಬ್ಬವನ್ನು ಆಚರಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.
ಚಂದ್ರ ದರ್ಶನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ಆಚರಿಸುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20 ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಜಂಕ್ ಫುಡ್ ಬಳಕೆಯಿಂದ ಉಂಟಾಗುತ್ತಿರುವ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಪರ್ಯಾಯವಾಗಿ ಪೌಷ್ಠಿಕಾಂಶಯುಕ್ತ ಸಿರಿಧಾನ್ಯಗಳನ್ನು ದಿನನಿತ್ಯದ ಆಹಾರದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಮಟ್ಟದ ‘ಸಿರಿಧಾನ್ಯ ಹಬ್ಬ’ ಭಾನುವಾರ ಮಣಿಪಾಲದ ರಜತಾದ್ರಿಯಲ್ಲಿ ಸಂಭ್ರಮದಿಂದ ಜರುಗಿತು.
ಮತ್ತೊಂದು ಯುಗಾದಿ ಬಂದಿದೆ. ಈ ಬಾರಿ ಪರಾಭವ ಸಂವತ್ಸರ. ಹಾಗಂತ ಗಾಬರಿಯಾಗಬೇಕಿಲ್ಲ. ಈ ಬಾರಿ ಶತ್ರುಗಳ ಪರಾಭವ ಎಂದು ಪುತ್ತಿಗೆ ಸುಗುಣೇಂದ್ರ ಶ್ರೀಗಳು ಯುಗಾದಿ ಶುಭಾಶಯ ಕೋರಿದ್ದಾರೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಅಭಾವದಿಂದಾಗಿ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಹೊಟೇಲ್ ಗಳು ಬಂದ್ ಆಗಿವೆ.ಪ್ರತಿನಿತ್ಯ ಕೃಷ್ಣನಗರಿ ಉಡುಪಿಗೆ ಬೇರೆ ಬೇರೆ ಕಡೆಗಳಿಂದ ಸುಮಾರು 600 ರಷ್ಟು ಬಸ್ ಗಳು ಬರುತ್ತವೆ.ಹಾಗೆ ಬರುವ ಸಾವಿರಾರು ಪ್ರವಾಸಿಗರಿಗೆ ಊಟ ತಿಂಡಿ ಸಿದ್ದಪಡಿಸಬೇಕಿದೆ.ಆದರೆ ಗ್ಯಾಸ್ ಅಭಾವದಿಂದಾಗಿ ಅದು ಸಾಧ್ಯವಾಗುತ್ತಿಲ್ಲ.
ಗ್ಯಾಸ್ ಅಭಾವವನ್ನೇ ಸೈಬರ್ ವಂಚಕರು ಬಂಡವಾಳ ಮಾಡಿಕೊಂಡಿದ್ದಾರೆ ಎಂದು ಉಡುಪಿ ಎಸ್ಪಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಾರೊಂದು ಇನ್ನೊಂದು ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಗೆ ಡಿಕ್ಕಿಯಾದ ಘಟನೆ ಸಂತೆಕಟ್ಟೆಯ ಓವರ್ ಬ್ರಿಡ್ಜ್ ಬಳಿ ಇಂದು ಮಧ್ಯಾಹ್ನ ವೇಳೆ ಸಂಭವಿಸಿದೆ.
ಗಾಯಗೊಂಡು ಅಸಹಾಯಕ ಸ್ಥಿತಿಯಲ್ಲಿದ್ದ ಕಾಡುಬೆಕ್ಕುನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಗಸ್ತು ಅರಣ್ಯಪಾಲಕ ಕಾಡುಬೆಕ್ಕನ್ನು ಚಿಕಿತ್ಸೆಗೆ ಒಳಪಡಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಳೆದ ಬಾರಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದ ಉಡುಪಿ ಜಿಲ್ಲೆ ಈ ಬಾರಿ ಮತ್ತೆ ಅಗ್ರಸ್ಥಾನ ಪಡೆಯುವ ನಿರೀಕ್ಷೆಯೊಂದಿಗೆ ಪರೀಕ್ಷೆ ಎದುರಿಸಲು ಸಕಲ ಸಿದ್ಥತೆ ನಡೆಸಿದೆ.
ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ಕ್ರೈಸ್ತ ಸಮುದಾಯದವರಿಗೆ ಮಾಡಿರುವ ಭಕ್ತಿ ಸಂಜೀವನ ಕೂಟವಾಗಿದೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ ಸ್ಪಷ್ಟಪಡಿಸಿದ್ದಾರೆ.
ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಸಮೀಪದ ಲಾಡ್ಜ್ ವೊಂದರಲ್ಲಿ ವ್ಯಕ್ತಿಯೊಬ್ಬರು ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬಿಲ್ಲಾಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗಿಯ ಕಚೇರಿ ಮೈಸೂರು ಇದರ ಸಹಯೋಗದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳವನ್ನು ನಗರದ ಅಮೃತ್ ಗಾರ್ಡನ್ ನಲ್ಲಿ ಇಂದು ಆಯೋಜಿಸಲಾಗಿತ್ತು.
ಜಿಲ್ಲೆಯ ಕಟಪಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಮಗುಚಿಬಿದ್ದು, ಗ್ಯಾಸ್ ಸೋರಿಕೆ (ಲೀಕೇಜ್) ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಕಾರ್ಯಾಚರಣೆ ಕೈಗೊಳ್ಳಲಾಯಿತು.
ಬಿಗ್ ಬಾಸ್ ಕನ್ನಡ 12 ರನ್ನರ್ ಆಗಿ ಹೊರಹೊಮ್ಮಿದ ರಕ್ಷಿತಾ ಶೆಟ್ಟಿ ಅವರು ತಮ್ಮ ಹುಟ್ಟುಹಬ್ಬವನ್ನು ಉಡುಪಿಯ ಸಾಲಿಗ್ರಾಮದಲ್ಲಿರುವ ಹೊಸಬದುಕು ಆಶ್ರಮದಲ್ಲಿ ಆಚರಿಸಿ ಗಮನ ಸೆಳೆದರು. ಆಶ್ರಮದಲ್ಲಿ ಹುಟ್ಟುಹಬ್ಬ ಆಚರಿಸಿದ ಅವರು ನಿವಾಸಿಗಳಿಗೆ ಊಟದ ವ್ಯವಸ್ಥೆ ಮಾಡಿದ್ದು, ಅವರೊಂದಿಗೆ ಸಮಯ ಕಳೆಯುವ ಮೂಲಕ ಸಂತೋಷ ಹಂಚಿಕೊಂಡರು.
ಬಿಲ್ಲಾಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗಿಯ ಕಚೇರಿ ಮೈಸೂರು ಇದರ ಸಹಯೋಗದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳವನ್ನು ಮಾ. 17ರಂದು ನಗರದ ಅಮೃತ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ ಯೋಜಿಸಲಾಗಿದೆ ಎಂದು ಮಾಜಿ ಶಾಸಕ ಹಾಗೂ ಗೌರವಾಧ್ಯಕ್ಷ ಕೆ. ರಘುಪತಿ ಭಟ್ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ 66 ಎಲ್ಪಿಜಿ ಟ್ಯಾಂಕರ್ ಪಲ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿದಿದೆ.
“ಸಮಾಧಾನ ಮಹೋತ್ಸವ” ನಡೆಸಲು ಅವಕಾಶ ನೀಡಿದರೆ ತೀವ್ರ ಹೋರಾಟನ ನಡೆಸಲಾಗುತ್ತದೆ ಎಂದು ಹಿಂದೂ ಜಾಗರಣ ವೇದಿಕೆ ಎಚ್ಚರಿಕೆಯನ್ನು ನೀಡಿದೆ.
ಕಟಪಾಡಿ ಬಳಿ ಮಂಗಳೂರು ಉಡುಪಿ ಮಾರ್ಗದಲ್ಲಿ ಇಂದು ಹಿಂದುಸ್ಥಾನ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮಧ್ಯ ರಸ್ತೆಯಲ್ಲಿ ಬಿದ್ದಿದ್ದು, ಸದ್ರಿ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನೆಲೆ, ಸದ್ರಿ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಇಂದು ರಾತ್ರಿ 8 ಗಂಟೆಯವರೆಗೆ ಈ ಕೆಳಕಂಡ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾ ದಂಡಧಿಕಾರಿಯು ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಆದೇಶಿಸಿರುತ್ತಾರೆ.
ಉಡುಪಿ ಸಮೀಪದ ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್ಪಿಜಿ ಗ್ಯಾಸ್ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಮಗುಚಿ ಬಿದ್ದ ಘಟನೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 169ಎ ಚತುಷ್ಪಥ ಕಾಮಗಾರಿ ಈಗಿರುವ ರಸ್ತೆಯನ್ನೇ ಅಗಲೀಕರಣಗೊಂಡು ಸಾಗಿದರೆ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಗರ್ಭಗುಡಿ, ರಥಬೀದಿ, ವಾಸ್ತುವಿಗೆ ಸಮಸ್ಯೆಯಾಗುತ್ತದೆ.